Baramulla ಪಕ್ಷೇತರ ಸಂಸದ ಇಂಜಿನಿಯರ್ ರಶೀದ್ ಜೈಲಿನಿಂದ ಇಂದು ಬಿಡುಗಡೆ ಸಾಧ್ಯತೆ
ಜೈಲಿನಿಂದಲೇ ಸ್ಪರ್ಧಿಸಿ ಚುನಾವಣೆ ಗೆದ್ದಿದ್ದರು... ಚುನಾವಣ ಪ್ರಚಾರಕ್ಕಿಳಿಯಲಿದ್ದಾರೆ!!
Team Udayavani, Sep 11, 2024, 11:15 AM IST
ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರದ ಪಕ್ಷೇತರ ಸಂಸದ ಇಂಜಿನಿಯರ್ ರಶೀದ್ ರ ಸಾಮಾನ್ಯ ಜಾಮೀನು ಅರ್ಜಿಯ ಆದೇಶವನ್ನು ಅಕ್ಟೋಬರ್ 5 ಕ್ಕೆ ಪಟಿಯಾಲ ಹೌಸ್ ಕೋರ್ಟ್ ಮುಂದೂಡಿದೆ.
ಬಾರಾಮುಲ್ಲಾ ಸಂಸದ ರಶೀದ್ ಅವರು ಪ್ರಸ್ತುತ ಮಧ್ಯಂತರ ಜಾಮೀನಿನ ಮೇಲೆ ಇದ್ದಾರೆ, ಇದು ಅಕ್ಟೋಬರ್ 2 ರಂದು ಮುಕ್ತಾಯಗೊಳ್ಳಲಿದೆ. ಪರಿಣಾಮವಾಗಿ, ಅವರು ಇಂದು (ಸೆ 11) ತಿಹಾರ್ ಜೈಲಿನಿಂದ ಬಿಡುಗಡೆಯಾಗುವ ನಿರೀಕ್ಷೆಯಿದೆ.
ರಶೀದ್ ಅವರ ಅವಾಮಿ ಇತ್ತೆಹಾದ್ ಪಕ್ಷ (AIP) ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯಲ್ಲಿ 34 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ತಮ್ಮ ಖುರ್ಷಿದ್ ಅಹ್ಮದ್ ಶೇಖ್ ಕೂಡ ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಲ್ಯಾಂಗಟೆ ಕ್ಷೇತ್ರದಿಂದ ಅಭ್ಯರ್ಥಿಯಾಗಿದ್ದಾರೆ. ಉಗ್ರ ನೆರವು ಪ್ರಕರಣದಲ್ಲಿ 2019 ರಿಂದ ಜೈಲಿನಲ್ಲಿರುವ ರಶೀದ್ ಲಾಂಗೇಟ್ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿದ್ದರು.ಲೋಕಸಭಾ ಚುನಾವಣೆಯಲ್ಲಿ ಜೈಲಿನಿಂದಲೇ ಸ್ಪರ್ಧಿಸಿ ಪ್ರಬಲ ಅಭ್ಯರ್ಥಿ ಒಮರ್ ಅಬ್ದುಲ್ಲಾ ವಿರುದ್ಧ ಗೆಲುವು ಸಾಧಿಸಿ ಗಮನ ಸೆಳೆದಿದ್ದರು.
ಲೋಕಸಭೆಯಲ್ಲಿ ಚುನಾಯಿತ ಸಂಸದ ರಶೀದ್ ಅವರ ಚುನಾವಣ ಪ್ರಚಾರ ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ದೊಡ್ಡ ಶಕ್ತಿ ನೀಡುತ್ತದೆ ಎಂದು ನಿರೀಕ್ಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ
Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್
West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ
Pakistan: ಪಾಕ್ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.