Valmiki scam; ತುಕಾರಾಮ್ ಗೆಲುವನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಶ್ರೀರಾಮುಲು ದಾವೆ
ಸಂಡೂರಿನಲ್ಲಿ ಉಪಚುನಾವಣೆ ಹೋರಾಟಕ್ಕೆ ಸಿದ್ಧತೆ ನಡೆಸಿದ ಬಿಜೆಪಿ... ರಾಧಾ ಮೋಹನ್ ಅಗರ್ವಾಲ್ ಭಾಗಿ
Team Udayavani, Sep 11, 2024, 12:49 PM IST
ಬಳ್ಳಾರಿ: ವಾಲ್ಮೀಕಿ ಹಗರಣದ ಹಣವನ್ನು ಚುನಾವಣೆಯಲ್ಲಿ ಬಳಸಿ ಹಣ, ಹೆಂಡ ಹಂಚಿ ಮತದಾರರ ಮೇಲೆ ಪ್ರಭಾವ ಬೀರಿ ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡಿದೆ. ಹಣ, ಹಂಚಿ ಗೆದ್ದಿರುವ ಕಾಂಗ್ರೆಸ್ ಸಂಸದ ತುಕಾರಾಮ್ ಗೆಲುವನ್ನು ಪ್ರಶ್ನಿಸಿ ಮಾಜಿ ಸಚಿವ ಬಿ.ಶ್ರೀರಾಮುಲು ಅವರು ಹೈಕೋರ್ಟ್ ನಲ್ಲಿ ದಾವೆ ಹೂಡಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾ ಮೋಹನ್ ಅಗರ್ವಾಲ್ ಬುಧವಾರ (ಸೆ 11) ಹೇಳಿಕೆ ನೀಡಿದ್ದಾರೆ.
ಸಂಡೂರಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಧಾ ಮೋಹನ್ ಅಗರ್ವಾಲ್ ” ಬಳ್ಳಾರಿ ಲೋಕಸಭೆ ಕ್ಷೇತ್ರದ ಚುನಾವಣೆಯಲ್ಲಿ ವಾಲ್ಮೀಕಿ ನಿಗಮದ 20.19 ಕೋಟಿ ಹಣ ಬಳಕೆಯಾಗಿದೆ ಎಂದು ಇಡಿ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದೆ. 1975 ರಲ್ಲೂ ಇದೇ ರೀತಿ ಹಣ, ಹೆಂಡ ಹಂಚಿ ಗೆದ್ದಿದ್ದ ಇಂದಿರಾಗಾಂಧಿಯವರ ಗೆಲುವನ್ನು ಪ್ರಶ್ನಿಸಿ ಕೋರ್ಟ್ ಗೆ ಹೋಗಿತ್ತು. ಕೋರ್ಟ್ ಸದಸ್ಯತ್ವವನ್ನು ರದ್ದು ಪಡಿಸಿದ್ದು, ಇಂದಿರಾಗಾಂಧಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದರು. ಸಂಸದ ತುಕಾರಾಮ್ ಪ್ರಕರಣವೂ ಅದೇ ರೀತಿ ಆಗಲಿದೆ ಎಂದರು.
‘ವಾಲ್ಮೀಕಿ ಹಣಗರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ, ಇಡಿ ಚಾರ್ಜ್ ಶೀಟ್ ಸಲ್ಲಿಸಿದೆ. ನಾಗೇಂದ್ರನನ್ನು ರಕ್ಷಣೆ ಮಾಡಲು ಎಸ್ ಐಟಿ ಕ್ಲೀನ್ ಚಿಟ್ ನೀಡಿದೆ. ಇಡಿ ನಾಗೇಂದ್ರ ಅವರೇ ಪ್ರಮುಖ ಆರೋಪಿ ಎಂದಿದೆ.ಹಗರಣ ಕುರಿತು ಬಿಜೆಪಿ ಆರೋಪ ಮಾಡಿದಾಗ ಸಿಎಂ ಸಿದ್ದರಾಮಯ್ಯ ನಡೆದೇ ಇಲ್ಲ ಎಂದರು. ಬಳಿಕ ಅಧಿವೇಶನದಲ್ಲೇ 89 ಕೋಟಿ ರೂ. ಹಗರಣ ನಡೆದಿದೆ ಎಂದು ಒಪ್ಪಿಕೊಂಡಿದ್ದರು. ಅವರು ಸಹ ಮೂಡಾದಲ್ಲಿ ಬದಲಿ ನಿವೇಶನ ಪಡೆದು ಸುಮಾರು 4 ಸಾವಿರ ಕೋಟಿ ಹಗರಣ ಮಾಡಿದ್ದಾರೆ’ ಎಂದರು.
‘ಮಲ್ಲಿಕಾರ್ಜುನ ಖರ್ಗೆ ಅಳಿಯನ ಹೆಸರಲ್ಲೂ ಐದು ಎಕರೆ ಜಮೀನು ಪಡೆದಿದ್ದಾರೆ. ಕಾಂಗ್ರೆಸ್ ಬರೀ ಭ್ರಷ್ಟಾಚಾರದಲ್ಲೇ ತೊಡಗಿದೆ. ಲೋಕಸಭೆ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ರಾಹುಲ್ ಗಾಂಧಿ ಸೇರಿ ಎಲ್ಲರೂ ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡಿದ್ದಾರೆ’ ಎಂದು ಆರೋಪಿಸಿದರು.
ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯಲಿದ್ದು ಬಿಜೆಪಿ ವಾಲ್ಮೀಕಿ ಹಗರಣವನ್ನೇ ಪ್ರಮುಖ ಅಸ್ತ್ರವನ್ನಾಗಿಸಿ ಹೋರಾಟಕ್ಕೆ ಸಿದ್ಧತೆ ಮಾಡಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.