ಪುಣೆ-ಬೆಳಗಾವಿ ನಡುವೆ ವಂದೇ ಭಾರತ ರೈಲು 15ರಿಂದ: ಜಗದೀಶ ಶೆಟ್ಟರ್
Team Udayavani, Sep 11, 2024, 10:15 AM IST
ಉದಯವಾಣಿ ಸಮಾಚಾರ
ಬೆಳಗಾವಿ: ಜಿಲ್ಲೆಯ ಜನರ ಬಹಳ ದಿನಗಳ ಬೇಡಿಕೆಯಾಗಿದ್ದ ಪುಣೆ -ಬೆಳಗಾವಿ-ಹುಬ್ಬಳ್ಳಿ ನಡುವೆ ಅತಿ ವೇಗದ ವಂದೇ ಭಾರತ್ ರೈಲು ಸಂಚಾರಕ್ಕೆ ರೈಲ್ವೆ ಸಚಿವರು ಹಸಿರು ನಿಶಾನೆ ನೀಡಿರುವುದು ಅತ್ಯಂತ ಸಂತಸದ ಸಂಗತಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬೆಳಗಾವಿ ಸಂಸದರಾದ ಜಗದೀಶ ಶೆಟ್ಟರ್ ಹೇಳಿದ್ದಾರೆ.
ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು ಬೆಳಗಾವಿ – ಪುಣೆ ನಡುವೆ ವಂದೇ ಭಾರತ್ ನೂತನ ರೈಲು ಸಂಪರ್ಕಕ್ಕೆ ದೆಹಲಿಯಲ್ಲಿ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಮತ್ತು ರೈಲ್ವೆ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರನ್ನು ಭೇಟಿ ಮಾಡಿ ಮನವಿ ಮಾಡಲಾಗಿತ್ತು. ಅದು ಹುಬ್ಬಳ್ಳಿಯವರೆಗೆ ವಿಸ್ತರಣೆಯಾಗಿದ್ದು ಇದರಿಂದ ನಮ್ಮ ಬೇಡಿಕೆ ಈಡೇರಿದಂತಾಗಿದೆ ಎಂದಿದ್ದಾರೆ.
ಬೆಳಗಾವಿ – ಪುಣೆ ನಡುವಿನ ವಂದೇ ಭಾರತ್ ನೂತನ ರೈಲು ಸಂಚಾರ ಸೆ. 15 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಳ್ಳಲಿದೆ. ಅದೇ ರೀತಿ ಬೆಂಗಳೂರು – ಧಾರವಾಡ ನಡುವೆ ಸದ್ಯ ಸಂಚರಿಸುತ್ತಿರುವ ವಂದೇ ಭಾರತ್ ರೈಲು ಕೂಡ ಬೆಳಗಾವಿ ನಗರದವರೆಗೂ ವಿಸ್ತರಿಸುವ ಬಗ್ಗೆಯೂ ಸಹ ಕೇಂದ್ರ ರೈಲ್ವೆ ಸಚಿವರ ಜೊತೆಗೆ ಈಗಾಗಲೇ
ಚರ್ಚಿಸಲಾಗಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
President ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನೆ
ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ
Butterfly Park: ಬೆಳಗಾವಿಯ ಹಿಡಕಲ್ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.