ಅತಂತ್ರದ ಆತಂಕದಲ್ಲಿ ಕಾಂಗ್ರೆಸ್‌ ಪಡೆ! ನಾಯಕತ್ವದ ಗೊಂದಲ ಹುಟ್ಟುಹಾಕಿದ ನಾಯಕರ ಹೇಳಿಕೆಗಳು

Team Udayavani, Sep 12, 2024, 6:45 AM IST

ಅತಂತ್ರದ ಆತಂಕದಲ್ಲಿ ಕಾಂಗ್ರೆಸ್‌ ಪಡೆ! ನಾಯಕತ್ವದ ಗೊಂದಲ ಹುಟ್ಟುಹಾಕಿದ ನಾಯಕರ ಹೇಳಿಕೆಗಳುಅತಂತ್ರದ ಆತಂಕದಲ್ಲಿ ಕಾಂಗ್ರೆಸ್‌ ಪಡೆ! ನಾಯಕತ್ವದ ಗೊಂದಲ ಹುಟ್ಟುಹಾಕಿದ ನಾಯಕರ ಹೇಳಿಕೆಗಳು

ಬೆಂಗಳೂರು: ಮುಖ್ಯಮಂತ್ರಿ ಕುರ್ಚಿಯ ಆಕಾಂಕ್ಷಿಗಳ ಪಟ್ಟಿ ದಿನದಿಂದ ದಿನಕ್ಕೆ ದೊಡ್ಡದಾಗುತ್ತಿರುವ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ನಾಯಕತ್ವದ ಗೊಂದಲ ಆರಂಭವಾಗಿದ್ದು, ಇದರ ಪರಿಣಾಮ ಅತಂತ್ರ ಸ್ಥಿತಿ ಉಂಟಾಗಬಹುದಾದ ಆತಂಕ ಪಕ್ಷದ ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರನ್ನು ಆವರಿಸ ತೊಡಗಿದೆ.

ಮುಡಾ ನಿವೇಶನ ಹಂಚಿಕೆ ಪ್ರಕರಣದ ಸುಳಿಯಲ್ಲಿ ಸಿಎಂ ಹೆಸರು ಕೇಳಿಬರುತ್ತಿದ್ದಂತೆ ಕಾಂಗ್ರೆಸ್‌ ಒಗ್ಗಟ್ಟು ಪ್ರದರ್ಶಿಸಿತು. ಆ ಮೂಲಕ ಎದುರಾಳಿ ಪಕ್ಷಗಳ ನಿರೀಕ್ಷೆಯನ್ನು ಹುಸಿಗೊಳಿಸಿತ್ತು. ಅಷ್ಟೇ ಅಲ್ಲ ರಾಜ್ಯಾದ್ಯಂತ ಎಲ್ಲ ಸಮುದಾಯಗಳ ಮುಖಂಡರಿಗೆ ಸ್ಪಷ್ಟ ಸಂದೇಶವನ್ನೂ ರವಾನಿಸಿತ್ತು. ಇದು ತಕ್ಕಮಟ್ಟಿಗೆ ಧೈರ್ಯ ತಂದುಕೊಟ್ಟಿತ್ತು. ಆದರೆ ಈಚೆಗೆ ನಡೆದ ಬೆಳವಣಿಗೆಗಳು ಪಕ್ಷದಲ್ಲಿ ಬಿರುಕು ಮೂಡಿಸುವುದರ ಜತೆಗೆ ನಾಯಕತ್ವದ ಗೊಂದಲ ಹುಟ್ಟುಹಾಕುವಂತೆ ಮಾಡಿವೆ.

ಪೈಪೋಟಿ ಆರಂಭ
3ನೇ ಅತಿದೊಡ್ಡ ಸಮುದಾಯವನ್ನು ಪ್ರತಿನಿಧಿಸುತ್ತಿರುವ ಸಿದ್ದರಾಮಯ್ಯ ಅವರನ್ನು ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕ ಸೇರಿದಂತೆ ಎರಡೂ ಪ್ರದೇಶಗಳ ಜನ ಒಪ್ಪಿಕೊಂಡಿದ್ದಾರೆ. ರಾಜಕೀಯ ವಲಯದಲ್ಲಿ ಅವರಿಗೊಂದು “ಚರಿಷ್ಮಾ’ ಕೂಡ ಇದೆ. ಪಕ್ಷದಲ್ಲಿ ಹಿಡಿತವೂ ಇದೆ. ಇನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಕೂಡ 2ನೇ ಅತಿದೊಡ್ಡ ಸಮುದಾಯವನ್ನು ಪ್ರತಿನಿಧಿಸುತ್ತಿದ್ದು, ರಾಜ್ಯದ ಎಲ್ಲ ಪ್ರದೇಶಗಳ ಜನರೂ ಅವರನ್ನು ಒಪ್ಪಿಕೊಳ್ಳದಿದ್ದರೂ ಹಳೆಯ ಮೈಸೂರು ಭಾಗದಲ್ಲಿ ಹಿಡಿತ ಹೊಂದಿದ್ದಾರೆ. ಹೀಗಾಗಿ ಪಕ್ಷದಲ್ಲಿ ಸಿದ್ದರಾಮಯ್ಯ ಬಿಟ್ಟರೆ, ಸಿಎಂ ಸ್ಥಾನಕ್ಕೆ ಕೇಳಿಬರುತ್ತಿದ್ದ ಹೆಸರು ಡಿ.ಕೆ. ಶಿವಕುಮಾರ್‌. ಆದರೆ ಈಗ ಆ ಸ್ಥಾನಕ್ಕೆ ಪೈಪೋಟಿ ಆರಂಭವಾಗಿದ್ದು, ಆರ್‌.ವಿ. ದೇಶಪಾಂಡೆ ಒಳಗೊಂಡಂತೆ ಹಲವು ಮುಖಂಡರು ಕಣ್ಣಿಟ್ಟಿದ್ದಾರೆ.

ಈ ಗೊಂದಲದ ನಡುವೆಯೇ ಮುಡಾ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಬಿಜೆಪಿ ಕಾಂಗ್ರೆಸ್‌ ಮೇಲೆ ಮುಗಿಬೀಳುತ್ತಿದೆ. 2ನೇ ಹಂತದ ಪಾದಯಾತ್ರೆಗೆ ಚಿಂತನೆ ನಡೆಯುತ್ತಿದೆ. ರಾಜ್ಯಪಾಲರು ಈಗಾಗಲೇ ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ವಿಪಕ್ಷಗಳು ಈ ವಿಚಾರವಾಗಿ ರಾಷ್ಟ್ರಪತಿ ಭವನದ ಬಾಗಿಲು ತಟ್ಟಿದರೂ ಅಚ್ಚರಿ ಇಲ್ಲ ಎನ್ನಲಾಗಿದೆ.

ಮಾಂಡ್‌ಗೆ ಪತ್ರ
ಒಂದು ದಿನದ ಹಿಂದಷ್ಟೇ ಸ್ವತಃ ಪಕ್ಷದ ಹಿರಿಯ ನಾಯಕರು, ಸಿಎಂ ಕುರ್ಚಿಗೆ ಸಂಬಂಧಿಸಿದಂತೆ ಹಿರಿಯ ಸಚಿವರು ಸೇರಿ 6 ಜನ ಮುಖಂಡರು ನೀಡುತ್ತಿರುವ ಹೇಳಿಕೆಗಳು ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸುವಂತೆ ಮಾಡುತ್ತಿವೆ. ಅಷ್ಟೇ ಅಲ್ಲ ಆಡಳಿತದ ಮೇಲೂ ಇದು ಪ್ರತಿಕೂಲ ಪರಿಣಾಮ ಬೀರುತ್ತಿವೆ ಎಂದು ಹೈಕಮಾಂಡ್‌ಗೆ ಪತ್ರ ಬರೆದಿದ್ದಾರೆ.

ಟಾಪ್ ನ್ಯೂಸ್

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

J-P-Nadda

PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.