Bidar: ಬೆಳೆ ಹಾನಿ ಪ್ರದೇಶಕ್ಕೆ ಸಚಿವ ರಹೀಂಖಾನ್ ಭೇಟಿ

ಸರ್ವೇ ಕಾರ್ಯ ಬೇಗ ಮುಗಿಸಲು ಅಧಿಕಾರಿಗಳಿಗೆ ಸೂಚನೆ

Team Udayavani, Sep 12, 2024, 2:23 PM IST

Bidar: Minister Raheem Khan visits the crop damage area

ಬೀದರ್: ತಾಲೂಕಿನಲ್ಲಿ ನಿರಂತರ ಮಳೆಯಿಂದ ಬೆಳೆ ಹಾನಿಯಾದ ಪ್ರದೇಶಕ್ಕೆ ಪೌರಾಡಳಿತ ಸಚಿವ ರಹೀಂಖಾನ್ ಅವರು ಗುರುವಾರ (ಸೆ.12) ಭೇಟಿ ನೀಡಿದರು.

ಮಾಳೆಗಾಂವ್, ವಿಳಾಸಪುರ ಗ್ರಾಮಗಳ ಹೊಲಗಳಲ್ಲಿ ಮಳೆ ನೀರು ನಿಂತು ಹೆಸರು, ಉದ್ದು, ತೊಗರಿ ಬೆಳೆ ಹಾನಿಯಾಗಿರುವುದನ್ನು ವೀಕ್ಷಿಸಿದರು. ಬೆಳೆ ಸಮೀಕ್ಷೆಯನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು. ಹಾನಿ ವಾಸ್ತವ ವರದಿ ಸಲ್ಲಿಸಿ, ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರ ಒದಗಿಸಬೇಕು. ಮನೆ ಕಳೆದುಕೊಂಡವರಿಗೂ ಪರಿಹಾರ ಕೊಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಮಾಳೆಗಾಂವ್ ಗ್ರಾಮದಲ್ಲಿ ಕುಸಿದು ಬಿದ್ದ ಮನೆಗಳನ್ನು ವೀಕ್ಷಿಸಿದರು. ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾಗ ಹಾವು ಕಡಿದು ಮೃತಪಟ್ಟ ಸಬಿಯಾ ಬಾನು ಅವರ ತಂದೆಗೆ 2 ಲಕ್ಷ ರೂಪಾಯಿ ಪರಿಹಾರ ಧನ ಮಂಜೂರಾತಿ ಪತ್ರ ವಿತರಿಸಿದರು.

ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಆರಂಭಿಸಲಾದ ಬೆಂಬಲ ಬೆಲೆ ಉದ್ದು, ಹೆಸರು ಖರೀದಿ ಕೇಂದ್ರಕ್ಕೆ ಭೇಟಿ ನೀಡಿದರು.

ಮಾಳೆಗಾಂವ್ ಗ್ರಾಮಕ್ಕೆ ಪ್ರಾಥಮಿಕ ಆರೋಗ್ಯ ಕೇಂದ್ರ ಮಂಜೂರಾಗಿದೆ. ಸ್ಥಳ ಅಂತಿಮಗೊಂಡಿದೆ. ಕಟ್ಟಡ ನಿರ್ಮಾಣಕ್ಕೆ ಕೆ.ಕೆ.ಆರ್.ಡಿ.ಬಿ.ಯಿಂದ ಐದು ಕೋಟಿ ರೂಪಾಯಿ ಅನುದಾನ ಒದಗಿಸಲಾಗುವುದು ಎಂದು ತಿಳಿಸಿದರು.

ವಿಳಾಸಪುರ ಗ್ರಾಮದಲ್ಲಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯ ಆರ್.ಎ.ಡಿ. ಅಡಿಯಲ್ಲಿ 39 ಫಲಾನುಭವಿಗಳಿಗೆ ತಲಾ 20 ಸಾವಿರ ರೂಪಾಯಿ ಮೊತ್ತದ ಎಮ್ಮೆ, ವರ್ಮಿ ಕಾಂಪೊಸ್ಟ್ ಪೊರ್ಟೆಬಲ್ ಘಟಕ ಹಾಗೂ ಆಹಾರ ಸಂಗ್ರಹ ಘಟಕ ವಿತರಿಸಿದರು. ಸಬ್ಸಿಡಿ ಬೆಲೆಯಲ್ಲಿ ಸ್ಪಿಂಕ್ಲರ್ ವಿತರಿಸಿದರು.

ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿ.ಪಂ  ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗಿರೀಶ ದಿಲೀಪ ಬದೋಲೆ, ಕೃಷಿ ಜಂಟಿ ನಿರ್ದೇಶಕ ಜಿಯಾವುಲ್ಲಾ, ತಹಶೀಲ್ದಾರ್ ಡಿ.ಜಿ. ಮಹಾತ್, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಕಿರಣ ಪಾಟೀಲ, ಕೃಷಿ ಉಪ ನಿರ್ದೇಶಕ ರಾಘವೇಂದ್ರ ಎನ್., ಸಹಾಯಕ ನಿರ್ದೇಶಕ ಅನ್ಸಾರಿ ಎಂ.ಎ.ಕೆ. ಹಾಜರಿದ್ದರು.

ಟಾಪ್ ನ್ಯೂಸ್

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cabinet Meeting: ಬೀದರ್‌, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ

Cabinet Meeting: ಬೀದರ್‌, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ

Anubhava Mantapa ಡಿಸೆಂಬರ್‌ಗೆ ಲೋಕಾರ್ಪಣೆ: ಸಚಿವ ಈಶ್ವರ ಖಂಡ್ರೆ

Anubhava Mantapa ಡಿಸೆಂಬರ್‌ಗೆ ಲೋಕಾರ್ಪಣೆ: ಸಚಿವ ಈಶ್ವರ ಖಂಡ್ರೆ

CM Siddaramaiah ಗೋರ್ಟಾ ಗ್ರಾಮಕ್ಕೆ ಭೇಟಿ ನೀಡಲು ಆಗ್ರಹ: ಶಾಸಕ ಪ್ರಭು ಚವ್ಹಾಣ್

CM Siddaramaiah ಗೋರ್ಟಾ ಗ್ರಾಮಕ್ಕೆ ಭೇಟಿ ನೀಡಲು ಆಗ್ರಹ: ಶಾಸಕ ಪ್ರಭು ಚವ್ಹಾಣ್

Eshwara Khandre: ಪ್ರಕರಣ ಸುಪ್ರೀಂಕೋರ್ಟ್ ನಲ್ಲಿರುವಾಗ ಯತ್ನಾಳ್ ಒತ್ತಡ ತಂತ್ರ ಸರಿಯಲ್ಲ

Eshwara Khandre: ಪ್ರಕರಣ ಸುಪ್ರೀಂಕೋರ್ಟ್ ನಲ್ಲಿರುವಾಗ ಯತ್ನಾಳ್ ಒತ್ತಡ ತಂತ್ರ ಸರಿಯಲ್ಲ

Basavakalyan ಡಾ| ಭೈರಪ್ಪಗೆ ಶ್ರೀ ಚನ್ನರೇಣುಕ ಬಸವ ಪ್ರಶಸ್ತಿ

Basavakalyan ಡಾ| ಭೈರಪ್ಪಗೆ ಶ್ರೀ ಚನ್ನರೇಣುಕ ಬಸವ ಪ್ರಶಸ್ತಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

J-P-Nadda

PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.