Bidar: ಅ.19, 20ರಂದು ಬಸವಕಲ್ಯಾಣದಲ್ಲಿ ಸ್ವಾಭಿಮಾನಿ ಕಲ್ಯಾಣ ಪರ್ವ

Team Udayavani, Sep 12, 2024, 4:49 PM IST

Swabhimani Kalyan Parva in Basavakalyan on  Oct 19th and 20th

ಬೀದರ್:‌ ಬಸವ ಧರ್ಮ ಪೀಠದ ಸ್ವಾಭಿಮಾನಿ ಶರಣರ ಬಳಗದ ವತಿಯಿಂದ ಅ. 19 ಮತ್ತು 20 ರಂದು ಶರಣ ಭೂಮಿ ಬಸವಕಲ್ಯಾಣದಲ್ಲಿ ಸ್ವಾಭಿಮಾನಿ ಕಲ್ಯಾಣ ಪರ್ವ ಆಯೋಜಿಸಲಾಗಿದ್ದು ಎಂದು ಬೆಂಗಳೂರಿನ ಬಸವ ಗಂಗೋತ್ರಿಯ ಚನ್ನಬಸವೇಶ್ವರ ಜ್ಞಾನಪೀಠದ ಪೀಠಾಧ್ಯಕ್ಷರಾದ ಡಾ. ಚನ್ನಬಸವಾನಂದ ಸ್ವಾಮೀಜಿ ತಿಳಿಸಿದರು.

ನಗರದದಲ್ಲಿ ಗುರುವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ತೆಲಂಗಾಣ, ಮಹಾರಾಷ್ಟ್ರ, ತಮಿಳುನಾಡು ಮತ್ತು ಆಂಧ್ರಪ್ರದೇಶ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಿಂದ ಶರಣ ಶರಣೆಯರು ಪಾಲ್ಗೊಳ್ಳುತಿದ್ದಾರೆ. ಬಸವ ಭಕ್ತರಿಗಾಗಿ ಪ್ರಸಾದ, ವಸತಿ ವ್ಯವಸ್ಥೆ ಇರಲಿದೆ. ಆದ್ದರಿಂದ ಶರಣ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದರು.

ಅ.19 ರ ಬೆ.11 ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದ್ದು, ಅಂದು ಬೆಳಿಗ್ಗೆ 5 ಗಂಟೆಗೆ ಸುಪ್ರಭಾತ ಸಮಯದಲ್ಲಿ ಸಾಮೂಹಿಕ ಇಷ್ಟಲಿಂಗ ಪೂಜೆ, ಬಸವ ಚಿಂತನ ಕಾರ್ಯಕ್ರಮ ನಡೆಯಲಿದೆ. ಅಂದು ಸಾ.5 ಗಂಟೆಗೆ ಧರ್ಮಚಿಂತನ ಗೋಷ್ಠಿ- 1 ಜರುಗಲಿದೆ. ಅ. 20 ರಂದು ಬೆಳಿಗ್ಗೆ 8 ಗಂಟೆಗೆ ಸಾಮೂಹಿಕ ಪ್ರಾರ್ಥನೆ, ಇಷ್ಟಲಿಂಗ ಪೂಜೆ ಹಾಗೂ ಬೆ. 10-30 ಕ್ಕೆ ಶರಣ ವಂದನೆ 770 ಶರಣರಿಗೆ ಶರಣಾರ್ಥಿ ಹೃದಯಸ್ಪರ್ಶಿ ಕಾರ್ಯಕ್ರಮ ನಡೆಯಲಿದೆ. ಮ.12 ರಿಂದ 2 ರ ವರೆಗೆ ಮಹಿಳಾಗೋಷ್ಠಿ ಮ.3 ರಿಂದ 5 ರವರೆಗೆ ಯುವಗೋಷ್ಠಿ ಹಾಗೂ ಸಾಯಂಕಾಲ ಸಮಾರೋಪ ಸಮಾರಂಭ ಜರುಗಲಿದೆ ಎಂದರು.

ಬೀದರ ಬಸವ ಮಂಟಪದ ಸಂಚಾಲಕರಾದ ಸದ್ಗುರು ಸತ್ಯಾದೇವಿ ಮಾತಾಜಿ ಮಾತನಾಡಿ, ಸ್ವಾಭಿಮಾನಿ ಕಲ್ಯಾಣ ಪರ್ವ ಎಂದರೆ ಇದೊಂದು ಕಲ್ಯಾಣದ ಹಬ್ಬ. ಪ್ರತಿಯೊಬ್ಬರೂ ಭಾಗವಹಿಸುವುದು ತಮ್ಮ ಆದ್ಯ ಕರ್ತವ್ಯ. ಮಹಿಳಾ ಗೋಷ್ಠಿಯಲ್ಲಿ ಮಹಿಳೆಯರ ಜ್ವಲಂತ ಸಮಸ್ಯೆಗಳು ಹಾಗೂ ಇತರೆ ವಿಷಯಗಳ ಚರ್ಚೆ ನಡೆಯಲಿದೆ. ಹೀಗಾಗಿ ಶರಣ ಬಂಧುಗಳು ತನು, ಮನ, ಧನ, ಸಮಯ, ಅಭಿಮಾನ ದಾಸೋಹ ಮಾಡಿ ಕಾರ್ಯಕ್ರಮ ಯಶಸ್ವಿಗೊಳಿಸಲು ಕೋರಿದರು.

ಸುದ್ದಿಗೋಷ್ಠಿಯಲ್ಲಿ ಲಿಂಗಾಯತ ಧರ್ಮ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷ ಶಿವರಾಜ ಪಾಟೀಲ ಅತಿವಾಳ, ಪ್ರಮುಖರಾದ ಬಸವಂತರಾವ ಬಿರಾದಾರ, ರವಿಕಾಂತ ಬಿರಾದಾರ, ಮಲ್ಲಿಕಾರ್ಜುನ ಶೆಂಬೆಳ್ಳಿ ಇದ್ದರು.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cabinet Meeting: ಬೀದರ್‌, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ

Cabinet Meeting: ಬೀದರ್‌, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ

Anubhava Mantapa ಡಿಸೆಂಬರ್‌ಗೆ ಲೋಕಾರ್ಪಣೆ: ಸಚಿವ ಈಶ್ವರ ಖಂಡ್ರೆ

Anubhava Mantapa ಡಿಸೆಂಬರ್‌ಗೆ ಲೋಕಾರ್ಪಣೆ: ಸಚಿವ ಈಶ್ವರ ಖಂಡ್ರೆ

CM Siddaramaiah ಗೋರ್ಟಾ ಗ್ರಾಮಕ್ಕೆ ಭೇಟಿ ನೀಡಲು ಆಗ್ರಹ: ಶಾಸಕ ಪ್ರಭು ಚವ್ಹಾಣ್

CM Siddaramaiah ಗೋರ್ಟಾ ಗ್ರಾಮಕ್ಕೆ ಭೇಟಿ ನೀಡಲು ಆಗ್ರಹ: ಶಾಸಕ ಪ್ರಭು ಚವ್ಹಾಣ್

Eshwara Khandre: ಪ್ರಕರಣ ಸುಪ್ರೀಂಕೋರ್ಟ್ ನಲ್ಲಿರುವಾಗ ಯತ್ನಾಳ್ ಒತ್ತಡ ತಂತ್ರ ಸರಿಯಲ್ಲ

Eshwara Khandre: ಪ್ರಕರಣ ಸುಪ್ರೀಂಕೋರ್ಟ್ ನಲ್ಲಿರುವಾಗ ಯತ್ನಾಳ್ ಒತ್ತಡ ತಂತ್ರ ಸರಿಯಲ್ಲ

Basavakalyan ಡಾ| ಭೈರಪ್ಪಗೆ ಶ್ರೀ ಚನ್ನರೇಣುಕ ಬಸವ ಪ್ರಶಸ್ತಿ

Basavakalyan ಡಾ| ಭೈರಪ್ಪಗೆ ಶ್ರೀ ಚನ್ನರೇಣುಕ ಬಸವ ಪ್ರಶಸ್ತಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.