RSS “ಕ್ಲಾಸ್‌’ನಲ್ಲೂ ಬಿಜೆಪಿ ಬಣ ಸಂಘರ್ಷ

ವಿಜಯೇಂದ್ರ ವಿರುದ್ಧ ತಿರುಗಿಬಿದ್ದ ಜಾರಕಿಹೊಳಿ, ಯತ್ನಾಳ್‌ ಬಣ

Team Udayavani, Sep 13, 2024, 6:50 AM IST

ಆರೆಸ್ಸೆಸ್‌ “ಕ್ಲಾಸ್‌’ನಲ್ಲೂ ಬಿಜೆಪಿ ಬಣ ಸಂಘರ್ಷ

ಬೆಂಗಳೂರು: ಪಕ್ಷದ ಆಂತರಿಕ ಭಿನ್ನಮತಕ್ಕೆ ತೇಪೆ ಹಾಕಲು ಆರೆಸ್ಸೆಸ್‌ ಕರೆದಿದ್ದ ಸಮನ್ವಯ ಸಭೆಯಲ್ಲಿ ನಿರೀಕ್ಷೆಯಂತೆ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಆಕ್ರೋಶ ಸ್ಫೋಟಗೊಂಡಿದೆ.

ವರಿಷ್ಠರ ಸೂಚನೆಯನ್ನು ಉಲ್ಲಂಘಿಸಿ ನಾನು ಯಾವುದೇ ನಿರ್ಣಯ ತೆಗೆದು ಕೊಂಡಿಲ್ಲ ಎಂದು ವಿಜಯೇಂದ್ರ ಇದೇ ವೇಳೆ ಸಮಜಾಯಿಷಿ ನೀಡಿದ್ದಾರೆ. ಸಾಮೂಹಿಕ ನಾಯಕತ್ವ ಪಾಲಿಸುವಂತೆ ಆರೆಸ್ಸೆಸ್‌ ಬಿಜೆಪಿ ನಾಯಕರಿಗೆ ಕಿವಿ ಮಾತು ಹೇಳಿದೆ.

ಕಳೆದೊಂದು ತಿಂಗಳಿಂದ ಸಮನ್ವಯ ಸಭೆ ನಡೆಸುವಂತೆ ಬಿಜೆಪಿ ನಾಯಕರು ಇಟ್ಟಿದ್ದ ಬೇಡಿಕೆಗೆ ಸಂಘ ಪರಿವಾರದ ಹಿರಿಯರು ಗುರುವಾರ ಮುಹೂರ್ತ ನಿಗದಿ ಮಾಡಿದ್ದರು. ಚನ್ನೇನಹಳ್ಳಿಯಲ್ಲಿ ಆಯೋಜಿಸಿದ್ದ ಸಭೆಯನ್ನು ಕೊನೆಯ ಕ್ಷಣದಲ್ಲಿ ಸದಾಶಿವನಗರಕ್ಕೆ ಸ್ಥಳಾಂತರಿಸಲಾಗಿತ್ತು. ಸಂಘದ ವರಿಷ್ಠರಾದ ಮುಕುಂದ್‌, ಸುಧೀರ್‌, ತಿಪ್ಪೇಸ್ವಾಮಿ, ಬಿಜೆಪಿ ರಾಷ್ಟ್ರೀಯ ಸಂಘಟನ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಸಂಸದ ಜಗದೀಶ್‌ ಶೆಟ್ಟರ್‌, ಪಿ.ಸಿ. ಗದ್ದಿಗೌಡರ್‌, ವಿಶ್ವೇಶ್ವರ ಹೆಗಡೆ ಕಾಗೇರಿ, ರಾಜ್ಯ ನಾಯಕರಾದ ಬಸನಗೌಡ ಪಾಟೀಲ್‌ ಯತ್ನಾಳ್‌, ರಮೇಶ್‌ ಜಾರಕಿಹೊಳಿ, ಜಿ.ಎಂ. ಸಿದ್ದೇಶ್ವರ, ಸಿ.ಟಿ. ರವಿ, ಸುನಿಲ್‌ ಕುಮಾರ್‌, ಅರವಿಂದ ಲಿಂಬಾವಳಿ, ಅರವಿಂದ ಬೆಲ್ಲದ್‌, ಆರ್‌. ಅಶೋಕ್‌, ಛಲವಾದಿ ನಾರಾಯಣಸ್ವಾಮಿ, ಪ್ರತಾಪಸಿಂಹ, ಅಭಯ್‌ ಪಾಟೀಲ್‌ ಸೇರಿದಂತೆ 40ಕ್ಕೂ ಹೆಚ್ಚು ನಾಯಕರು ಭಾಗವಹಿಸಿದ್ದರು.

ವಿಜಯೇಂದ್ರ ವಿರುದ್ಧ ದೂರಲು ಹಾಜರು!
ಬಿಜೆಪಿಯ ಉನ್ನತ ಮೂಲಗಳ ಪ್ರಕಾರ ಒಂದರ್ಥದಲ್ಲಿ ಈ ಸಭೆ ವಿಜಯೇಂದ್ರ ವಿರುದ್ಧ ಸಂಘದ ನಾಯಕರಿಗೆ ದೂರು ಹೇಳುವುದಕ್ಕಾಗಿಯೇ ಮುಖಂಡರು ಸಭೆಗೆ ಹಾಜರಾದಂತಿತ್ತು. ಎರಡು ಬಣದ ವಾದವನ್ನು ಆಲಿಸಿದ ಸಂಘದ ಹಿರಿಯರು, “ಸಂವಾದ, ಸಲಹೆ ಹಾಗೂ ಸಾಮೂಹಿಕ ನಾಯಕತ್ವ’ದೊಂದಿಗೆ ಪಕ್ಷವನ್ನು ಬೆಳೆಸುವಂತೆ ಪಕ್ಷದ ಎಲ್ಲ ನಾಯಕರಿಗೆ ಕಿವಿಮಾತು ಹೇಳಿದ್ದು, ರಾಜ್ಯದಲ್ಲಿ ಮರಳಿ ಬಿಜೆಪಿಯನ್ನು ಅಧಿಕಾರಕ್ಕೆ ತರುವ ಸಂಕಲ್ಪ ತೊಡುವಂತೆ ಸಲಹೆ ನೀಡಿದೆ.

ಭಿಕ್ಷೆ ಎಂದರೂ ಮೌನ ಏಕೆ?
ನಿರೀಕ್ಷೆಯಂತೆ ವಿಜಯೇಂದ್ರ ಧೋರಣೆ ವಿರುದ್ಧ ಬಸನಗೌಡ ಪಾಟೀಲ್‌ ಯತ್ನಾಳ್‌ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಕ್ಷದ ಅಧ್ಯಕ್ಷರಾಗಿ ಕಾಂಗ್ರೆಸ್‌ ಜತೆಗೆ ಅಡೆಸ್ಟ್‌ಮೆಂಟ್‌ ಪಾಲಿಟಿಕ್ಸ್‌ ನಡೆಸುತ್ತಿದ್ದಾರೆ. “ಶಿಕಾರಿಪುರದಲ್ಲಿ ವಿಜಯೇಂದ್ರ ಗೆದ್ದಿದ್ದೇ ಕಾಂಗ್ರೆಸ್‌ ಭಿಕ್ಷೆಯಿಂದ’ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿಕೆ ಕೊಟ್ಟರೂ ಇವರು ತಿರುಗೇಟು ನೀಡಿಲ್ಲ. “ಇಲ್ಲ ನಾನು ಗೆದ್ದಿದ್ದು ಕಾಂಗ್ರೆಸ್‌ ಭಿಕ್ಷೆಯಿಂದ ಅಲ್ಲ’ ಎಂದು ಏಕೆ ಇನ್ನೂ ಸ್ಪಷ್ಟನೆ ಕೊಟ್ಟಿಲ್ಲ. ಇಲ್ಲೂ ಹೊಂದಾಣಿಕೆಯೇ? ಇವರು ಮಾತ್ರ ಸಿದ್ದರಾಮಯ್ಯ, ಶಿವಕುಮಾರ್‌ ಜತೆ ಹೊಂದಾಣಿಕೆ ಮಾಡಿಕೊಂಡು ಗೆಲ್ಲಬೇಕು. ನಾವು ಹೋರಾಟ ಮಾಡಿ ಸೋಲಬೇಕಾ? ಎಂದು ಕಿಡಿಕಾರಿದರು ಎಂದು ತಿಳಿದು ಬಂದಿದೆ.

ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಕೂಡ ಇದೇ ಧಾಟಿಯಲ್ಲಿ ಮಾತನಾಡಿ ವಿಜಯೇಂದ್ರ ವಿರುದ್ಧ ನೇರ ಅಸಮಾಧಾನ ವ್ಯಕ್ತಪಡಿಸಿದರು ಎನ್ನಲಾಗಿದೆ. ಇದಕ್ಕೆ ಮಾಜಿ ಸಂಸದ ಪ್ರತಾಪ್‌ ಸಿಂಹ, ಮಾಜಿ ಸಚಿವ ಅರವಿಂದ ಲಿಂಬಾವಳಿ ದನಿಗೂಡಿಸಿದ್ದು, ಪಕ್ಷದ ನಾಯಕತ್ವ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿಲ್ಲ ಎಂದು ಕಿಡಿಕಾರಿದ್ದಾರೆನ್ನಲಾಗಿದೆ.

ವರಿಷ್ಠರ ಆದೇಶ ಉಲ್ಲಂಘಿಸಿಲ್ಲ
ಹಿರಿಯ ನಾಯಕರ ವಾದವನ್ನು ಆಲಿಸಿದ ರಾಜ್ಯಾಧ್ಯಕ್ಷ ವಿಜಯೇಂದ್ರ “ನಾನು ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುವುದಕ್ಕೆ ಸಿದ್ಧನಿದ್ದೇನೆ. ಎಲ್ಲ ಸಂದರ್ಭದಲ್ಲೂ ಸಮನ್ವಕ್ಕೆ ಆದ್ಯತೆ ನೀಡಿದ್ದೇನೆ. ವರಿಷ್ಠರ ನಿರ್ಣಯವನ್ನು ಉಲ್ಲಂಘಿಸಿ ಯಾವುದೇ ಹೆಜ್ಜೆ ಇಟ್ಟಿಲ್ಲ. ಪಕ್ಷದ ವೇದಿಕೆಯಲ್ಲಿ ಪ್ರಸ್ತಾವಿಸದೆ ಯಾವುದೇ ನಿರ್ಣಯ ತೆಗೆದುಕೊಂಡಿಲ್ಲ ಎಂದು ಸಮಜಾಯಿಷಿ ನೀಡಿದ್ದಾರೆ.

ಪಾದಯಾತ್ರೆ – ವರಿಷ್ಠರೇ ರೂಪರೇಖೆ ನೀಡುತ್ತಾರೆ
ಪಕ್ಷದಿಂದ ಆಯೋಜಿಸಿರುವ 2ನೇ ಪಾದಯಾತ್ರೆ ಬಗ್ಗೆ ಯಾರೊಬ್ಬರೂ ಮಾತನಾಡಬೇಕಿಲ್ಲ. ಈ ಬಗ್ಗೆ ವರಿಷ್ಠರೇ ಸಕಾಲದಲ್ಲಿ ಮಾರ್ಗದರ್ಶನ ಮಾಡುತ್ತಾರೆ ಎಂದು ಸಭೆಯಲ್ಲಿ ಸೂಚನೆ ನೀಡಲಾಗಿದೆ. ಪಾದಯಾತ್ರೆಯ ಸ್ವರೂಪ ಏನು? ಯಾವಾಗ ಮಾಡಬೇಕೆಂಬುದರ ಬಗ್ಗೆ ಸೂಚನೆ ಬರುತ್ತದೆ. ಅದರಂತೆ ನಡೆದುಕೊಳ್ಳಿ. ಬಹಿರಂಗ ಹೇಳಿಕೆಗಳ ಮೂಲಕ ಗೊಂದಲ ಸೃಷ್ಟಿ ಮಾಡಬೇಡಿ ಎಂದು ಕಟ್ಟಪ್ಪಣೆ ನೀಡಲಾಗಿದೆ.

ಸಂಘದ ಸಲಹೆಗಳೇನು
-ಸಂಘಟನಾತ್ಮಕ ಮನೋಭಾವವಿಲ್ಲದಿರುವುದರಿಂದಲೇ ಪಕ್ಷ ಹಾಗೂ ಸಂಘಟನೆಯ ಮಧ್ಯೆ ಕಂದಕ ಸೃಷ್ಟಿಯಾಗಿದೆ. ಇದಕ್ಕೆ ಇಲ್ಲೇ , ಈಗಲೇ ತಡೆ ಹಾಕೋಣ.
– ಈಗ ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್‌ಗೆ ಮುಡಾ, ವಾಲ್ಮೀಕಿ ಹಗರಣಗಳು ತಲೆಬಿಸಿ ತಂದಿದೆ. ಮೈಕೊಡವಿ ಎದ್ದು ನಿಲ್ಲಲು ಬಿಜೆಪಿಗೆ ಇದು ಸರಿಯಾದ ಸಮಯ.
– ಇದು ಕೇಡರ್‌ ಆಧಾರಿತ ಪಕ್ಷವಾಗಿದ್ದು, ಸಂಘಟನೆಗೂ ಹೆಚ್ಚು ಒತ್ತು ಅಗತ್ಯ.
– ವೈಚಾರಿಕವಾಗಿಯೂ ಪಕ್ಷದ ವಿರುದ್ಧ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಂಚು ನಡೆಯುತ್ತಿದ್ದು, ಇದರ ವಿರುದ್ಧ ಜಾಗೃತರಾಗಬೇಕು.
-2018ರ ವಿಧಾನಸಭಾ, 2019ರ ಲೋಕಸಭಾ ಚುನಾವಣೆ ಮಾದರಿಯಲ್ಲಿ ಈ ಬಾರಿ ಬಿಜೆಪಿ ಚುನಾವಣೆ ನಡೆಸಿಲ್ಲ
-ಸಮಾಜಮುಖೀಯಾಗಿದ್ದ ಹಲವರಿಗೆ ಮಣೆ ಹಾಕಲು ಆರೆಸ್ಸೆಸ್‌ ಸೂಚಿಸಿದ್ದರೂ ಬಿಜೆಪಿಯಿಂದ ಪ್ರಯೋಗ
-ಹೋರಾಟಗಳಲ್ಲಿ ಏಕಪಕ್ಷೀಯ ನಿರ್ಧಾರ ಬೇಡ; ಆರೆಸ್ಸೆಸ್‌ ಜತೆಗೆ ಮಾತುಕತೆ ನಡೆಸಬೇಕು

“ಬಿಜೆಪಿ ನಿಷ್ಠ’ರ ವಾದ?
ಮೊದಲಿನಿಂದಲೂ ವ್ಯಕ್ತಿಗಿಂತ ಪಕ್ಷಕ್ಕೆ ನಿಷ್ಠೆ ಹೊಂದಿದ್ದೇವೆ ಎಂದು ಹೇಳಿಕೊಳ್ಳುವ ಹಲವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಸಭೆಯಲ್ಲಿ ಮುಗಿಬಿದ್ದರೆನ್ನಲಾಗಿದೆ. ಹಿರಿಯ ನಾಯಕರಾದ ಬಸನಗೌಡ ಪಾಟೀಲ್‌ ಯತ್ನಾಳ್‌, ಪ್ರತಾಪ್‌ ಸಿಂಹ, ಅರವಿಂದ ಲಿಂಬಾವಳಿ, ರಮೇಶ್‌ ಜಾರಕಿಹೊಳಿ ಅವರು ವಿಜಯೇಂದ್ರ ವಿರುದ್ಧ ನೇರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.