Mangaluru: ಮೀಸಲಾತಿ ವ್ಯವಸ್ಥೆ ಕುರಿತು ಅಮೆರಿಕದಲ್ಲಿ ರಾಹುಲ್ ಹೇಳಿಕೆಗೆ ಬಿಜೆಪಿ ಖಂಡನೆ
Team Udayavani, Sep 13, 2024, 5:16 PM IST
ಮಂಗಳೂರು: ‘ಸೂಕ್ತ ಸಂದರ್ಭದಲ್ಲಿ ದೇಶದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸ್ಥಗಿತಗೊಳಿಸುತ್ತೇವೆ’ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಅಮೆರಿಕದಲ್ಲಿ ಮಾಡಿರುವ ಭಾಷಣ ಬಿಜೆಪಿ ಖಂಡಿಸುತ್ತದೆ. ರಾಹುಲ್ ಭಾರತಕ್ಕೆ ಬಂದ ತತ್‌ಕ್ಷಣ ದೇಶದಲ್ಲಿ ಕೋಟ್ಯಂತರ ಸಂಖ್ಯೆಯಲ್ಲಿರುವ ದಲಿತರ ಕ್ಷಮೆ ಯಾಚಿಸುವುದರೊಂದಿಗೆ ಮತ್ತೊಮ್ಮೆ ಇಂತಹ ದುಸ್ಸಾಹಸಕ್ಕೆ ಕೈ ಹಾಕುವುದಿಲ್ಲ ಎಂದು ಪ್ರಮಾಣ ಮಾಡಬೇಕು ಎಂದು ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ್ ಕೋಣೆ ಮನೆ ಆಗ್ರಹಿಸಿದ್ದಾರೆ.
ಶುಕ್ರವಾರ ನಗರದ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆಗೆ ಮೊದಲು ವಿದೇಶಗಳಲ್ಲಿ ಕುಳಿತು ಭಾರತದ ಆಡಳಿತ ವ್ಯವಸ್ಥೆ ಕುರಿತು ತಪ್ಪು ಕಲ್ಪನೆ ಮೂಡುವಂತೆ ಮಾತನಾಡುತ್ತಿದ್ದ ರಾಹುಲ್ ಗಾಂಧಿ ಅವರು ಹಳೆ ಚಾಳಿ ಮತ್ತೆ ಮುಂದುವರಿಸಿದ್ದು, ಅಮೆರಿಕದಲ್ಲಿ ಕುಳಿತು ಭಾರತದ ಚುನಾವಣೆ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿದ್ದಾರೆ. ಅವರ ತಪ್ಪು ನಡವಳಿಕೆ ದಿನೇ ದಿನೇ ಹೆಚ್ಚಾಗುತ್ತಿದ್ದು, ದೇಶ ವಿರೋಧಿ ಶಕ್ತಿ ಗಳ ಜತೆ ಗುರುತಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕ್ಷಣದಿಂದ ದೇಶವಿರೋಧಿ ಮತಾಂಧ ಶಕ್ತಿಗಳು ಬಾಲ ಬಿಚ್ಚಲು ಆರಂಭಿಸಿವೆ. ಸತತ ಎರಡನೇ ವರ್ಷ ನಾಗಮಂಗಲದಲ್ಲಿ ಗಣಪತಿ ವಿಜರ್ಸನೆ ಮೆರವಣೆಗೆ ವೇಳೆ ಮತಾಂಧ ಶಕ್ತಿಗಳು ಧಾಳಿ ಮಾಡಿದ್ದರೂ, ಗೃಹ ಸಚಿವರು ಅದೊಂದು ಸಣ್ಣ ಘಟನೆ ಎಂದು ಹೇಳಿದ್ದಾರೆ. ಇದರ ವಿರುದ್ಧ ಪ್ರತಿ ತಾಲೂಕಿನಲ್ಲಿ ಹಿಂದೂ ಸಂಘಟನೆಗಳ ಜತೆ ಸೇರಿ ಬಿಜೆಪಿ ಪ್ರತಿಭಟನೆ ಮಾಡಲಿದೆ ಎಂದರು.
ಇದನ್ನೂ ಓದಿ: Politics; ರಾಹುಲ್ ಸುಳ್ಳು ಮಾತಿನಿಂದ ಭಾರತ ವಿರೋಧಿಗಳಿಗೆ ಹೊಸ ಶಕ್ತಿ: ತೇಜಸ್ವಿ ಸೂರ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ
Vertex Workspace ಸಂಸ್ಥೆಗೆ ಬೆಸ್ಟ್ ಇನ್ನೋವೇಟಿವ್ ಎಂಟರ್‌ಪೈಸ್ ಅವಾರ್ಡ್
MUST WATCH
ಹೊಸ ಸೇರ್ಪಡೆ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.