Congress Govt; ಕರ್ನಾಟಕವೇನು ಇಸ್ಲಾಮಿಕ್ ರಿಪಬ್ಲಿಕ್ಕಾ: ಅಶೋಕ್ ಆಕ್ರೋಶ
ಕೇವಲ ಹಿಂದೂಗಳನ್ನೂ ಟಾರ್ಗೆಟ್ ಮಾಡುವ ಹುನ್ನಾರ : ವಿಪಕ್ಷ ನಾಯಕ
Team Udayavani, Sep 13, 2024, 11:46 PM IST
ಬೆಂಗಳೂರು: ರಾಜ್ಯದಲ್ಲಿ ಮೂಲ ಭೂತವಾದಿಗಳಿಗೆ ಬೆಂಬಲ ಕೊಡುವ ತಾಲಿಬಾನ್ ಸರಕಾರ ಅಧಿಕಾರದಲ್ಲಿದೆ. ಕೇವಲ ಹಿಂದೂ ಗಳನ್ನು ಮಾತ್ರ ಟಾರ್ಗೆಟ್ ಮಾಡುವ ಈ ಹುನ್ನಾರ ಕೈಬಿಡದಿದ್ದರೆ ಬಿಜೆಪಿ ನಾಗಮಂಗಲದಲ್ಲಿ ಬೀದಿಗಿಳಿದು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಎಚ್ಚರಿಕೆ ನೀಡಿದ್ದಾರೆ.
ನಾಗಮಂಗಲದ ಘಟನೆಯಿಂದ ಹೀಗಾದರೆ ನಮ್ಮ ಗತಿ ಏನು ಎಂದು ಇಡೀ ಹಿಂದೂ ಸಮಾಜ ಆತಂಕಗೊಂಡಿದೆ. ರಾಜ್ಯದ ಹಿಂದೂಗಳ ಮನಸ್ಸಿನಲ್ಲಿ ಕಾಡುತ್ತಿರುವ ಈ ಪ್ರಶ್ನೆಗಳಿಗೆ ಕಾಂಗ್ರೆಸ್ ಸರಕಾರ ಉತ್ತರ ಕೊಡಬೇಕು ಎಂದು ಪ್ರಶ್ನೆ ಎತ್ತಿದ್ದಾರೆ.
-ಕಳೆದ ವರ್ಷ ಅದೇ ಸ್ಥಳದಲ್ಲೇ ಗಲಭೆ ಆಗಿದ್ದರೂ ಈ ವರ್ಷ ಮುಂಜಾಗ್ರತ ಕ್ರಮವಾಗಿ ಬಂದೋಬಸ್ತ್ ಮಾಡಲಿಲ್ಲವೇಕೆ?
-ಇದು ಪೊಲೀಸ್ ಇಲಾಖೆಯ ವೈಫಲ್ಯ ಅಲ್ಲವೇ? ಅಥವಾ ಗುಪ್ತಚರ ಮಾಹಿತಿ ಇದ್ದೂ ಸಹ ನಿರ್ಲಕ್ಷ್ಯ ಮಾಡಲಾಯಿತೇ?
-ಗಣಪತಿ ಮೆರವಣಿಗೆಗೆ ರೂಟ್ ಮ್ಯಾಪ್ ಹಾಕಿಕೊಟ್ಟು ಅನುಮತಿ ನೀಡಿದ್ದರೂ, ಪೊಲೀಸರು ಏಕೆ ಭದ್ರತೆ ನೀಡಲಿಲ್ಲ?
-ಪಟ್ಟಣದಲ್ಲಿ ಇದ್ದ ಡಿಎಆರ್ ವ್ಯಾನ್ ಅನ್ನು ಮೆರವಣಿಗೆ ಆರಂಭವಾದ ಬಳಿಕ ಬೇರೆಡೆ ಕಳುಹಿಸಿದ್ದು ಏಕೆ?
-ಬುಧವಾರ ರಾತ್ರಿ ಗಲಭೆ ಆರಂಭವಾಗಿ ಎರಡು ಗಂಟೆ ಕಳೆದರೂ ಕೇವಲ 40 ಕಿ.ಮೀ. ದೂರದಲ್ಲಿರುವ ಹೆಚ್ಚಿನ ಸಿಬಂದಿಯನ್ನು ಏಕೆ ತುರ್ತಾಗಿ ಕರೆಸಿಕೊಳ್ಳಲಿಲ್ಲ?
-ಪೊಲೀಸರ ಅನುಮತಿ ಪಡೆದು ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದವರನ್ನೇ ಎಫ್ಐಆರ್ ನಲ್ಲಿ ಎ 1 ಮಾಡಿರುವುದೇಕೆ?
-ಎ 1 ನಿಂದ ಎ 23 ವರೆಗೆ ಕೇವಲ ಹಿಂದೂಗಳ ಮೇಲೆ ಎಫ್ ಐಆರ್ ಮಾಡಿ ಶನಂತರ ಮುಸ್ಲಿಮರ ಹೆಸರು ಸೇರಿಸಿರುವುದು ಯಾವ ಸೀಮೆ ನ್ಯಾಯ?
-ಮಸೀದಿ ಅಥವಾ ದರ್ಗಾ ಮುಂದೆ ಗಣೇಶೋತ್ಸವ ಮೆರವಣಿಗೆ ಹಾದು ಹೋಗಬಾರದು ಎನ್ನುವುದಕ್ಕೆ ಕರ್ನಾಟಕವೇನು ಇಸ್ಲಾಮಿಕ್ ರಿಪಬ್ಲಿಕ್ಕಾ?
-25 ಕೋಟಿ ರೂಪಾಯಿ ಮೊತ್ತದ ಆಸ್ತಿ-ಪಾಸ್ತಿ ನಷ್ಟ ಸಂಭವಿಸಿದ್ದರೂ, ಗೃಹ ಸಚಿವರಿಗೆ ಇದೊಂದು ಸಣ್ಣ ಘಟನೆ, ಆಕಸ್ಮಿಕ ಘಟನೆ ಅನ್ನಿಸಲು ಕಾರಣ ಏನು?
– ಇಷ್ಟೆಲ್ಲಾ ಅನಾಹುತ ಆಗಿದ್ದರೂ ಬೆಂಗಳೂರಿನಿಂದ ಕೇವಲ 130 ಕಿ.ಮೀ. ದೂರವಿರುವ ನಾಗಮಂಗಲಕ್ಕೆ ಗೃಹ ಸಚಿವರು ಇನ್ನೂ ಭೇಟಿ ನೀಡಿಲ್ಲವೇಕೆ?
ಬಿಜೆಪಿ ಸತ್ಯಶೋಧನ ಸಮಿತಿ ರಚನೆ
ಬೆಂಗಳೂರು: ನಾಗಮಂಗಲ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಡಿಸಿಎಂ ಡಾ| ಸಿ.ಎನ್. ಅಶ್ವತ್ಥನಾರಾಯಣ ನೇತೃತ್ವದಲ್ಲಿ ಬಿಜೆಪಿ ಸತ್ಯಶೋಧನ ಸಮಿತಿಯನ್ನು ರಚನೆ ಮಾಡಿದೆ. ಈ ಸಮಿತಿಯಲ್ಲಿ ಮಾಜಿ ಸಚಿವರಾದ ಬೈರತಿ ಬಸವರಾಜ, ಕೆ.ಸಿ. ನಾರಾಯಣಗೌಡ, ರಾಜ್ಯ ಕಾರ್ಯದರ್ಶಿ ಲಕ್ಷ್ಮಿ ಅಶ್ವಿನ್ ಗೌಡ, ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಸದಸ್ಯರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.