BJP ಭಿನ್ನಮತ ಸ್ಫೋಟ ಬೆನ್ನಲ್ಲೇ ದಿಲ್ಲಿಗೆ ಹಾರಿದ ಬಿ.ವೈ ವಿಜಯೇಂದ್ರ
ಅಮಿತ್ ಶಾ ಭೇಟಿ ಸಾಧ್ಯತೆ ; ಬಿಎಸ್‌ವೈ ಭೇಟಿಯಾದ ಶೆಟ್ಟರ್
Team Udayavani, Sep 14, 2024, 6:45 AM IST
ಬೆಂಗಳೂರು: ಆರ್‌ಎಸ್‌ಎಸ್ ಸಮನ್ವಯ ಸಭೆಯಲ್ಲಿ ಭಿನ್ನಮತ ಸ್ಫೋಟಗೊಂಡ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ದಿಲ್ಲಿಗೆ ಪ್ರಯಾಣ ಬೆಳೆಸಿದ್ದು, ಈ ಬೆಳವಣಿಗೆ ಯಡಿಯೂರಪ್ಪ ಬಣದಲ್ಲಿ ಆಕ್ರೋಶ ಮಡುಗಟ್ಟುವುದಕ್ಕೆ ಕಾರಣವಾಗಿದೆ.
ವಿಜಯೇಂದ್ರ ಅವರ ಹಠಾತ್ ದಿಲ್ಲಿ ಭೇಟಿಯ ಉದ್ದೇಶ ಏನೆಂಬುದು ಇನ್ನೂ ದೃಢಪಟ್ಟಿಲ್ಲ. ದಿಲ್ಲಿಯಿಂದ ವಾಪಸಾಗುವುದಕ್ಕೆ ಮುನ್ನ ಅವರು ಅಮಿತ್ ಶಾ ಭೇಟಿಗೆ ಪ್ರಯತ್ನ ನಡೆಸುವರು ಎಂದು ಹೇಳಲಾಗುತ್ತಿದೆ. ವಿಜಯೇಂದ್ರ ವಿರೋಧಿ ಬಣದ ಪ್ರಸ್ತಾವ ಆಧರಿಸಿ ಬಿಜೆಪಿ ಹೈಕಮಾಂಡ್ ವಾಲ್ಮೀಕಿ ಪಾದಯಾತ್ರೆಗೂ ಅನುಮತಿ ನೀಡಿದೆ.
ಜತೆಗೆ ಆರ್‌ಎಸ್‌ಎಸ್ ನಾಯಕರ ಸಮ್ಮುಖದಲ್ಲೇ ಅತೃಪ್ತರು ದೊಡ್ಡ ಧ್ವನಿ ಎತ್ತಿರುವುದು ವಿಜಯೇಂದ್ರ ಹಾಗೂ ಯಡಿಯೂರಪ್ಪ ಅವರಿಗೆ ಆದ ಹಿನ್ನಡೆ ಎಂದೇ ವ್ಯಾಖ್ಯಾನಿಸಲಾಗುತ್ತಿದೆ. ಪಕ್ಷವನ್ನು ಕಟ್ಟಿ ನಿಲ್ಲಿಸಿದ ಮಾಸ್ ಲೀಡರ್ ವಿರುದ್ಧ ಮಾತನಾಡುವ ಜತೆಗೆ ಯಡಿಯೂರಪ್ಪನವರನ್ನು ಪಕ್ಷದ ವೇದಿಕೆಗೆ ಕರೆದರೆ ಅವಮಾನವಾಗುತ್ತದೆ ಎಂದು ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ ಸಭೆಯಲ್ಲಿ ಹೇಳಿರುವುದು ಅವರ ಆಪ್ತರಲ್ಲಿ ತೀವ್ರ ಬೇಸರ ಸೃಷ್ಟಿಸಿದೆ.
ಈ ಹಿನ್ನೆಲೆಯಲ್ಲಿ ನಾವೆಲ್ಲರೂ ಸಭೆ ನಡೆಸಿ ಇದಕ್ಕೆ ಸೂಕ್ತ ತಿರುಗೇಟು ನೀಡಬೇಕೆಂಬ ಪ್ರಸ್ತಾಪ ವ್ಯಕ್ತವಾಗಿದೆಯಾದರೂ ಸದ್ಯಕ್ಕೆ ಇಂಥ ಯಾವುದೇ ಪ್ರಯತ್ನ ಬೇಡ ಎಂದು ಸೂಚನೆ ನೀಡಲಾಗಿದೆ.
ಸುಮಾರು ನಾಲ್ಕೂವರೆ ಗಂಟೆಗಳ ಕಾಲ ನಡೆದ ಈ ಸಭೆಯ ಬಳಿಕ ಸಂಸದ ಜಗದೀಶ್ ಶೆಟ್ಟರ್, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದರು ಎಂದು ಹೇಳಲಾಗುತ್ತಿದೆ. ಸಭೆಯಲ್ಲಿ ಒಂದೂ ಮಾತನಾಡದ ಶೆಟ್ಟರ್, ಬಳಿಕ ಯಡಿಯೂರಪ್ಪ ಭೇಟಿ ಮಾಡಿರುವುದು ಕೂಡ ಚರ್ಚೆಗೆ ಕಾರಣವಾಗಿದೆ.
ಈ ಮಧ್ಯೆ ಅರವಿಂದ ಲಿಂಬಾವಳಿ ನೇತೃತ್ವದ ನಿಯೋಗದಲ್ಲಿ ಯಡಿಯೂರಪ್ಪ ಬಣದ ಸದಸ್ಯರಾಗಲಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಸಂಘಟನಾತ್ಮಕ ಜವಾಬ್ದಾರಿ ಇರುವವರಾಗಲಿ ಇರಲಿಲ್ಲ. ಸಂಘದ ಸಭೆಯ ಬಳಿಕವೂ ಸಮನ್ವಯ ಕಾಣಿಸಿಕೊಂಡಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RTO; ಫಿಟ್‌ನೆಸ್ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!
High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್
Havyaka Sammelana; ಹೆಚ್ಚು ಮಕ್ಕಳನ್ನು ಹೆರಿ, ಮಠ ಸಲಹುತ್ತದೆ: ಸ್ವಾಮೀಜಿ ಕರೆ
Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್ ಪಾವತಿ ಪದ್ಧತಿ ಜಾರಿ
Belagavi; ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ: ಮಾಜಿ ಪ್ರಧಾನಿ ನಿಧನದಿಂದ ಆಘಾತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.