Kolkata ಹೃದಯ ಭಾಗದಲ್ಲಿ ಸ್ಫೋ*ಟ ; ವ್ಯಕ್ತಿ ಮೃ*ತ್ಯು : ತನಿಖೆ ಚುರುಕು
Team Udayavani, Sep 14, 2024, 5:27 PM IST
ಕೋಲ್ಕತಾ: ನಗರದ ಬ್ಲೋಚ್‌ಮನ್ ಸ್ಟ್ರೀಟ್ ಮತ್ತು ಎಸ್‌ಎನ್ ಬ್ಯಾನರ್ಜಿ ರಸ್ತೆಯಲ್ಲಿ ಶನಿವಾರ(ಸೆ 14) ಮಧ್ಯಾಹ್ನ 1.45 ರ ಸುಮಾರಿಗೆ ಸಂಭವಿಸಿದ ಸ್ಫೋ*ಟದಲ್ಲಿ 58 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ಬ್ಲೋಚ್‌ಮನ್ ಸ್ಟ್ರೀಟ್‌ನ ಪ್ರವೇಶಿಸುವಲ್ಲೇ ಪ್ಲಾಸ್ಟಿಕ್ ಚೀಲ ಗಮನಿಸಿದ ತಲ್ತಾಲಾ ಪೊಲೀಸ್ ಠಾಣೆಯ ಅಧಿಕಾರಿಗಳು ತತ್ ಕ್ಷಣ ಕಾರ್ಯಾಚರಣೆಗೆ ಇಳಿದಿದ್ದಾರೆ. ಪ್ರದೇಶವನ್ನು ತತ್ ಕ್ಷಣವೇ ಭದ್ರತಾ ಟೇಪ್‌ನಿಂದ ಸುತ್ತುವರಿಸಿ ತನಿಖೆಗಾಗಿ ಬಾಂಬ್ ಪತ್ತೆ ಮತ್ತು ವಿಲೇವಾರಿ ಸ್ಕ್ವಾಡ್ (BDDS) ಅನ್ನು ಕರೆಸಲಾಯಿತು. ಸ್ಫೋಟದ ಕಾರಣ ಮತ್ತು ಸ್ವರೂಪವನ್ನು ನಿರ್ಧರಿಸಲು ವಿಧಿವಿಜ್ಞಾನ ತನಿಖೆಗಳು ನಡೆಯುತ್ತಿವೆ.
ಮೃತ ದುರ್ದೈವಿ ಬಾಪಿ ದಾಸ್ ಎಂದು ಗುರುತಿಸಲಾಗಿದ್ದು, ಚಿಂದಿ ಆಯುವ ಕೆಲಸ ಮಾಡಿಕೊಂಡಿದ್ದರು ಎಂದು ತಿಳಿಸು ಬಂದಿದೆ. ಎನ್ಆರ್ ಎಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಬಂಗಾಳದ ಬಿಜೆಪಿ ನಾಯಕ, ಕೇಂದ್ರ ಸಚಿವ ಸುಕಾಂತ ಮಜುಂದಾರ್ ”ಘಟನೆಯ ಕುರಿತು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಯಿಂದ ಸಮಗ್ರ ತನಿಖೆಗೆ ಒತ್ತಾಯಿಸಿದ್ದಾರೆ.”ಸ್ಫೋಟವು ಅತ್ಯಂತ ಕಳವಳಕಾರಿಯಾಗಿದ್ದು, ಇದನ್ನು ಕೂಲಂಕಷವಾಗಿ ತನಿಖೆ ಮಾಡಬೇಕು. ನಿರ್ದಿಷ್ಟವಾಗಿ, ಎನ್ಐಎಯಿಂದ ತನಿಖೆಯ ಅಗತ್ಯವಿದೆ ಎಂದು ನಾನು ಭಾವಿಸುತ್ತೇನೆ. ಈ ಘಟನೆಯ ತನಿಖೆ ಮಾಡಲು ಪೊಲೀಸರಿಗೆ ಅಂತಹ ವೃತ್ತಿಪರತೆ ಇದೆ ಎಂದು ನಾನು ಭಾವಿಸುವುದಿಲ್ಲ” ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹವಾಮಾನ ಹಣಕಾಸು ಪ್ಯಾಕೇಜ್ ತಿರಸ್ಕರಿಸಿದ ಭಾರತ
Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.