Siddaramaiah ದಲಿತರ ಜಾಗ ಕಬಳಿಸಿ ಮನೆ ಕಟ್ಟಿಕೊಂಡಿದ್ದಾರೆ: ಎಚ್‌ಡಿಕೆ ಗಂಭೀರ ಆರೋಪ
Team Udayavani, Sep 15, 2024, 6:40 AM IST
ಬೆಂಗಳೂರು: ಮುಖ್ಯಮಂತ್ರಿ ಸಿದ್ದ ರಾಮಯ್ಯ ಅವರು ಮುಡಾದಿಂದ ಹಂಚಿಕೆ ಆಗಿದ್ದ ದಲಿತರೊಬ್ಬರ ನಿವೇಶನ ಕಬಳಿಸಿ ಮನೆ ಕಟ್ಟಿಸಿದ್ದಾರೆ. ಬಳಿಕ ಆ ಮನೆಯನ್ನು ಮಾರುವ ನಾಟಕ ಆಡಿ ಸಿಕ್ಕಿಬಿದ್ದಿದ್ದಾರೆ. ಈ ಕುರಿತ ದಾಖಲೆಗಳು ನನ್ನ ಬಳಿ ಇವೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ಜೆಡಿಎಸ್‌ನ ಪ್ರಧಾನ ಕಚೇರಿಯಲ್ಲಿ ಶನಿವಾರ ಮಾತನಾಡಿ, ಡಿಸಿಎಂ ಆಗಿದ್ದಾಗ ನೀವು ಯಾರ ಜಾಗವನ್ನು ಲಪಟಾಯಿಸಿ ಮನೆ ಕಟ್ಟಿದಿರಿ? ಅದರ ದಾಖಲೆ ಬೇಕಾ? ದಲಿತರಿಗೆ ಮುಡಾದಿಂದ ಹಂಚಿಕೆ ಆಗಿದ್ದ ನಿವೇಶನದಲ್ಲಿ ಅಕ್ರಮವಾಗಿ ಮನೆ ಕಟ್ಟಿದವರು ಯಾರು, ಹೇಳುತ್ತೀರಾ? 15 ನಿವೇಶನ ಬರೆಸಿಕೊಂಡದ್ದಷ್ಟೇ ಅಲ್ಲ, ಅದಕ್ಕೆ ಮೀರಿದ ಹಗರಣಗಳನ್ನು ಮಾಡಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ಸ್ಫೋಟಕ ಆರೋಪವನ್ನು ಹೊರಿಸಿದ್ದಾರೆ.ದಲಿತ ವಿಶೇಷ ಚೇತನರೊಬ್ಬರ ಬಳಿ 24,000 ರೂ. ಕಟ್ಟಿಸಿಕೊಂಡು ಮುಡಾದಲ್ಲಿ ಸೈಟ್ ಹಂಚಿಕೆ ಮಾಡಲಾಗಿತ್ತು.
ಆ ಜಾಗದ ಸುಳ್ಳು ದಾಖಲೆ ಸೃಷ್ಟಿ ಮಾಡಿಕೊಂಡು ಸಾಕಮ್ಮ ಎಂಬವರ ಹೆಸರಿನಲ್ಲಿ 10 ಸಾವಿರ ಚದರ ಅಡಿ ಜಾಗದಲ್ಲಿ ಅಕ್ರಮವಾಗಿ ಮನೆ ಕಟ್ಟಿಕೊಂಡವರು ಇವರು. ಆಮೇಲೆ ನಿವೇಶನದ ನಿಜ ಮಾಲಕರು ಬಂದು ನೋಡಿದರೆ ಅಲ್ಲಿ ಮನೆ ಕಟ್ಟಲಾಗಿತ್ತು. ಈ ಬಗ್ಗೆ ಜನ ಮರೆತಿರಬಹುದು, ಆದರೆ ಈ ಕುಮಾರಸ್ವಾಮಿ ಬಳಿ ಈಗಲೂ ದಾಖಲೆ ಇದೆ ಎಂದರು.
ನನ್ನ ಜೀವನ ತೆರೆದ ಪುಸ್ತಕ ಎಂದು ಸಿದ್ದರಾಮಯ್ಯ ಯಾವಾಗಲೂ ಹೇಳುತ್ತಾರೆ. ಆ ತೆರೆದ ಪುಸ್ತಕವನ್ನು ಜನ ಒಮ್ಮೆ ತೆರೆದು ನೋಡಬೇಕು. ನಿವೇಶನ ಹೊಡೆದುಕೊಂಡರು, ಆಮೇಲೆ ಅಕ್ರಮವಾಗಿ ಮನೆ ಕಟ್ಟಿಕೊಂಡರು, ಅನಂತರ ಅದನ್ನು ಯಾರಿಗೆ ಮಾರಾಟ ಮಾಡಿದರು? ಈಗ ಅದು ಯಾರ ಬಳಿಯಿದೆ? ಸುಮ್ಮನೆ ಜನರ ಕಣ್ಣಿಗೆ ಮಂಕುಬೂದಿ ಎರಚಲು ಮಾರಾಟ ಎಂದು ತೋರಿಸಿಕೊಂಡಿ¨ªಾರೆ. ಎಲ್ಲವನ್ನೂ ತೆಗೆದು ನೋಡಿದರೆ ಅಸಲಿ ಬಣ್ಣ ಗೊತ್ತಾಗುತ್ತದೆ. ಆಗ ಇನ್ನೊಂದು ಹಗರಣ ಆರಂಭವಾಗುತ್ತದೆ ಎಂದು ಕುಮಾರಸ್ವಾಮಿ ಹೇಳಿದರು.
ವೈಫಲ್ಯ ಮರೆಮಾಚಲು ನಾಗಮಂಗಲ ಗಲಭೆ ಸೃಷ್ಟಿ
ಸಿಎಂ ಹಾಗೂ ರಾಜ್ಯ ಸರಕಾರದ ವಿರುದ್ಧ ನಿತ್ಯ ಕೇಳಿಬರುತ್ತಿರುವ ಭ್ರಷ್ಟಾ ಚಾರ ಹಗರಣಗಳಿಂದ ಜನರ ಗಮನ ವನ್ನು ಬೇರೆಡೆಗೆ ಸೆಳೆಯಲು ಸರಕಾರ ನಾಗ ಮಂಗಲ ಗಲಭೆಯನ್ನು ಸೃಷ್ಟಿಸಿರುವ ಸಾಧ್ಯತೆ ಇದೆ. ಎಸ್‌ಐಟಿ ತನಿಖೆಯ ಆರೋಪ ಪಟ್ಟಿಗಳ ಬಗ್ಗೆ, ವೈಯಕ್ತಿಕ ಚಾಟ್ ಬಗ್ಗೆ ಚರ್ಚೆ ಆರಂಭವಾಗುತ್ತದೆ. ಇದೆಲ್ಲ ಹೇಗೆ ಬಹಿರಂಗವಾಗಲು ಸಾಧ್ಯ? ತನಿಖಾ ಸಂಸ್ಥೆಗಳೇ ಸೋರಿಕೆ ಮಾಡು ತ್ತಿವೆ. ಜನರ ಗಮನವನ್ನು ಬೇರೆಡೆಗೆ ಹೊರಳಿಸಲು ಸರಕಾರ ಇಂಥ ತಂತ್ರ ಗಾರಿಕೆ ಮಾಡುತ್ತಿದೆ ಎಂದು ಕುಮಾರ ಸ್ವಾಮಿ ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.