Kannada Movie: ಮಿ.ರಾಣಿ ಎಂದ ದೀಪಕ್ ಸುಬ್ರಹ್ಮಣ್ಯ
Team Udayavani, Sep 15, 2024, 4:32 PM IST
ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ ಚಿತ್ರದ ನಿರ್ದೇಶಕ ಮಧುಚಂದ್ರ ಈಗ ಹೊಸ ಚಿತ್ರದೊಂದಿಗೆ ಮತ್ತೆ ಬಂದಿದ್ದಾರೆ. ಈ ಬಾರಿ ಅವರು ಕಾಮಿಡಿ ಜಾನರ್ ಮೊರೆ ಹೋಗಿದ್ದು, ಚಿತ್ರಕ್ಕೆ “ಮಿ.ರಾಣಿ’ ಎಂಬ ಟೈಟಲ್ ಇಡಲಾಗಿದೆ. ಕಿರುತೆರೆಯಲ್ಲಿ ಗುರುತಿಸಿಕೊಂಡಿರುವ ದೀಪಕ್ ಸುಬ್ರಹ್ಮಣ್ಯ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.
ಪ್ರಸ್ತುತ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಈಗ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿದೆ. ನಟ ದೀಪಕ್ ಸುಬ್ರಹ್ಮಣ್ಯ ಅವರಿಗೆ ದೊಡ್ಡ ಅಭಿಮಾನಿ ವರ್ಗವಿದೆ. ಆ ಪೈಕಿ 108 ಜನ ಅಭಿಮಾನಿಗಳ ಮನೆಗೆ ಮಿ.ರಾಣಿ ಚಿತ್ರತಂಡ ಭೇಟಿ ನೀಡಿ ಅವರ ಮನೆಯಲ್ಲಿ ಪ್ರತಿಷ್ಠಾಪಿಸಲ್ಪಟ್ಟ ಗಣೇಶನ ದರ್ಶನ ಪಡೆದು, ಅವರ ಮೂಲಕ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿಸಿದ್ದಾರೆ.
ಈ ಮೂಲಕ ವಿನೂತನ ಪ್ರಚಾರಕ್ಕೆ ತಂಡ ನಾಂದಿಯಾಡಿದೆ. ಈಗಾಗಲೇ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ನವೆಂಬರ್ ನಲ್ಲಿ ಚಿತ್ರವನ್ನು ತೆರೆಗೆ ಪ್ರಯತ್ನ ನಡೆಯುತ್ತಿದೆ. ದೀಪಕ್ ಸುಬ್ರಹ್ಮಣ್ಯ ಅವರಿಗೆ ನಾಯಕಿಯಾಗಿ ಪಾರ್ವತಿ ನಾಯರ್ ನಟಿಸಿದ್ದಾರೆ. ಎಕ್ಸೆಲ್ ಆರ್ಬಿಟ್ ಕ್ರಿಯೇಶನ್ಸ್ನಡಿ ನೂರಕ್ಕೂ ಹೆಚ್ಚು ಜನರು ಬಂಡವಾಳ ಹೂಡಿ ನಿರ್ಮಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.