Jammu Kashmir Election: ಮೂರು ಕುಟುಂಬಗಳಿಂದ ಕಾಶ್ಮೀರ ನಾಶ: ಪ್ರಧಾನಿ ಮೋದಿ
ಕಣಿವೆ ರಾಜ್ಯದಲ್ಲಿ ಚುನಾವಣ ರ್ಯಾಲಿ ಉದ್ದೇಶಿಸಿ ಪ್ರಧಾನಿ ಮಾತು, ವಿಪಕ್ಷಗಳ ವಿರುದ್ಧ ವಾಗ್ಧಾಳಿ
Team Udayavani, Sep 15, 2024, 5:46 PM IST
ಜಮ್ಮು: ಜಮ್ಮು- ಕಾಶ್ಮೀರದಲ್ಲಿ ನಾಯಕತ್ವಕ್ಕಾಗಿ ಪಿಡಿಪಿ, ಕಾಂಗ್ರೆಸ್ ಮತ್ತು ನ್ಯಾಶನಲ್ ಕಾನ್ಫರೆನ್ಸ್ ನಡುವೆ ತಿಕ್ಕಾಟ ನಡೆಯುತ್ತಿದೆ. ಈ 3 ಮನೆತನಗಳು ಸೇರಿಕೊಂಡು ಜಮ್ಮು-ಕಾಶ್ಮೀರವನ್ನು ನಾಶ ಮಾಡಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ವಾಗ್ಧಾಳಿ ನಡೆಸಿದ್ದಾರೆ.
ಜಮ್ಮು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ದೋಡಾದಲ್ಲಿ ಪ್ರಚಾರ ರ್ಯಾಲಿಯನ್ನುದ್ದೇ ಶಿಸಿ ಮಾತನಾಡಿದ ಅವರು, ಈ 3 ಕುಟುಂಬಗಳು ಅವರ ಮನೆಯ ಮಕ್ಕಳಿಗೆ ಮಾತ್ರ ಅವಕಾಶ ನೀಡುತ್ತಿ ದ್ದಾರೆ. ಅಧಿಕಾರವನ್ನು ತಮ್ಮಲ್ಲೇ ಉಳಿಸಿಕೊಳ್ಳುವುದ ಕ್ಕಾಗಿ ಪರ್ಯಾಯ ನಾಯಕತ್ವ ಬೆಳೆಯಲು ಅವರು ಅವಕಾಶ ನೀಡಿಲ್ಲ ಎಂದು ಗುಡುಗಿದ್ದಾರೆ. ಅಲ್ಲದೇ ಎನ್‌ಸಿ, ಪಿಡಿಪಿ, ಕಾಂಗ್ರೆಸ್ 370ನೇ ವಿಧಿಯನ್ನು ಮರಳಿ ತರಲು ಯತ್ನಿಸುತ್ತಿವೆ. ಅವರು ಮೀಸಲಾತಿಯನ್ನು ಕಿತ್ತುಕೊಂಡು, ಹಿಂದಿನ ಭಯದ ವಾತಾವರಣ ಸೃಷ್ಟಿಸಲು ಯತ್ನಿಸುತ್ತಿದ್ದಾರೆ. ನೀವು ಇದಕ್ಕೆ ಅವಕಾಶ ಕೊಡುತ್ತೀರಾ ಎಂದು ಜನರನ್ನು ಪ್ರಶ್ನಿಸಿದ್ದು, ಇದಕ್ಕೆ ಅವಕಾಶ ಕೊಡಬೇಡಿ ಎಂದು ಹೇಳಿದ್ದಾರೆ.
ಭಯೋತ್ಪಾದನೆ ಅಂತಿಮ ಹಂತದಲ್ಲಿದೆ
ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದನೆ ಕೊನೆಯ ಉಸಿರಾಡುತ್ತಿದೆ. ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಭಯೋತ್ಪಾದನೆಯನ್ನು ನಿಗ್ರಹಿಸಲು ಸಕಲ ಕ್ರಮ ಕೈಗೊಳ್ಳಲಾಗುತ್ತದೆ. ಈ ಮೊದಲು ಆಡಳಿತ ನಡೆಸಿದ ಪಕ್ಷಗಳು, ಜನರ ಹಾದಿ ತಪ್ಪಿಸಿ ಅಧಿಕಾರವನ್ನು ಅನುಭವಿಸಿದ್ದಾರೆ ಎಂದು ಆರೋಪಿಸಿದರು.
42 ವರ್ಷ ಬಳಿಕ ಮೊದಲ ಬಾರಿಗೆ ಪ್ರಧಾನಿ ಭೇಟಿ
ದೋಡಾ ಜಿಲ್ಲೆಗೆ 1982ರಲ್ಲಿ ಆಗ ಪ್ರಧಾನಿಯಾಗಿದ್ದ ಇಂದಿರಾ ಗಾಂಧಿಯವರು ಭೇಟಿ ನೀಡಿದ್ದರು. ಆ ಬಳಿಕ ಯಾವ ಪ್ರಧಾನಿಯೂ ಜಿಲ್ಲೆಗೆ ಭೇಟಿ ನೀಡಿರಲಿಲ್ಲ. ಚುನಾವಣ ಪ್ರಚಾರಕ್ಕಾಗಿ ಮೋದಿ ಯವರು ಶನಿವಾರ ಭೇಟಿ ನೀಡಿದ್ದಾರೆ. ಹೀಗಾಗಿ 42 ವರ್ಷಗಳ ಬಳಿಕ ಅಲ್ಲಿಗೆ ಪ್ರಧಾನಿ ಭೇಟಿ ನೀಡಿದ್ದಾರೆ.
ಯುವಕರಿಗೆ ಅವಕಾಶ
ಬಿಜೆಪಿ ಅಧಿಕಾರಕ್ಕೆ ಬಂದರೆ ಯುವಕರಿಗೆ ನಾಯಕತ್ವದ ಜವಾಬ್ದಾರಿ ನೀಡಲಿದೆ. ಕಾಶ್ಮೀರದಲ್ಲಿ ಈವರೆಗೆ ಆಡಳಿತ ನಡೆಸಿರುವ ಕುಟುಂಬಗಳು ಯುವಕರಿಗೆ ಹೆಚ್ಚಿನ ಅವಕಾಶ ನೀಡಿಲ್ಲ. ತಮ್ಮ ಮನೆ ಮಕ್ಕಳನ್ನು ಮಾತ್ರ ಬೆಳೆಸಿದ್ದಾರೆ. ಇದರಿಂದಾಗಿ ರಾಜ್ಯದ ಬಹುತೇಕ ಯುವಕರಿಗೆ ಮೋಸವಾಗಿದೆ ಎಂದರು.
“ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ ಭದ್ರತೆ ಕುಗ್ಗಿಸಿದೆ. ಹೀಗಾಗಿಯೇ ಉಗ್ರ ದಾಳಿಗಳು ನಡೆಯುತ್ತಿವೆ. 370ನೇ ವಿಧಿ ತೆಗೆದು 5 ವರ್ಷವಾದರೂ ದಾಳಿ ನಡೆಯುತ್ತಿವೆ.” – ಒಮರ್ ಅಬ್ದುಲ್ಲಾ, ಎನ್‌ಸಿ ಉಪಾಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.