![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Sep 15, 2024, 7:30 PM IST
ಗಂಗೊಳ್ಳಿ: ಗುಜ್ಜಾಡಿ ಗ್ರಾಮದ ನಾಯಕವಾಡಿ ಬಳಿ ಜಾನುವಾರುಗಳನ್ನು ಕಳವು ಮಾಡಲು ಬಂದು ಪೊಲೀಸರನ್ನು ಕಂಡು ಜಾನುವಾರು ಹಾಗೂ ಕಾರು ಬಿಟ್ಟು ಪರಾರಿಯಾಗಿದ್ದ ಆರೋಪಿಗಳಿಬ್ಬರನ್ನು ಗಂಗೊಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಗುಲ್ವಾಡಿ ಗ್ರಾಮದ ಮೊಹಮ್ಮದ್ ಸೀನಾನ್(19)ನನ್ನು ಬಂಧಿಸಿದ್ದು, ಇನ್ನೊರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಗಂಗೊಳ್ಳಿ ಎಸ್‌ಐಗಳಾದ ಹರೀಶ್ ಆರ್., ಬಸವರಾಜ ಕನಶೆಟ್ಟಿ, ಸಿಬಂದಿ ರಾಜು, ಶಾಂತರಾಮ ಹಾಗೂ ರಾಘವೇಂದ್ರ ಅವರ ತಂಡ ಆರೋಪಿಗಳನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದೆ. ಆರೋಪಿ ಕೃತ್ಯಕ್ಕೆ ಬಳಸಿದ ಮಾರುತಿ ಸುಜುಕಿ ರಿಟ್ಜ್ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ರಕ್ಷಿಸಿದ ಮೂರು ಜಾನುವಾರುಗಳನ್ನು ನೆಂಚಾರು ಗೋಶಾಲೆಗೆ ಬಿಡಲಾಗಿದೆ.
You seem to have an Ad Blocker on.
To continue reading, please turn it off or whitelist Udayavani.