![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Sep 16, 2024, 7:00 AM IST
ಬೆಂಗಳೂರು: “ತಪ್ಪಾಗಿದೆ, ಸರಿಪಡಿಸಿ ಕೊಳ್ಳೋಣ…’ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಮೀಸಲಿಟ್ಟ ಅನುದಾನ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಆಗಿದೆ ಎಂಬ ವಿಪಕ್ಷಗಳ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ರೀತಿ ಪ್ರತಿಕ್ರಿಯಿಸುವ ಮೂಲಕ ತಪ್ಪಾಗಿರುವುದನ್ನು ಒಪ್ಪಿಕೊಂಡಿದ್ದಾರೆ.
ವಿಧಾನಸೌಧದ ಮುಂಭಾಗ ರವಿವಾರ ಪ್ರಜಾಪ್ರಭುತ್ವ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಜನಸಂಖ್ಯೆಗೆ ಅನುಗುಣವಾಗಿ ಅಭಿವೃದ್ಧಿ ಹಣ ನೀಡಲು ದೇಶದಲ್ಲೇ ಮೊದಲ ಬಾರಿಗೆ ಕಾನೂನು ತಂದವರು ನಾವು. ನೀವು ಏನು ಮಾಡಿದಿರಿ? ಕೇವಲ ಟೀಕೆ ಮಾಡಿದರೆ ಸಾಕೇ? ಕೇಂದ್ರ ಸರಕಾರ ಈ ಬಾರಿ 48 ಲಕ್ಷ ಕೋಟಿ ರೂ. ಬಜೆಟ್ ಮಂಡಿಸಿದೆ. ಅದರಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಮೀಸಲಿಟ್ಟದ್ದು ಬರೀ 60 ಸಾವಿರ ಕೋಟಿ ರೂ. ಜನಸಂಖ್ಯೆಗೆ ಅನುಗುಣವಾಗಿ ಹಣ ಕೊಡಿ ನೋಡೋಣ ಎಂದು ಸವಾಲು ಹಾಕಿದರು.
ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡಗಳ ಉಪಯೋಜನೆ (ಎಸ್‌ಸಿಎಸ್‌ಪಿ-ಟಿಎಸ್‌ಪಿ)ಗೆ ಮೀಸಲಿಟ್ಟ ಹಣವನ್ನು ಅನ್ಯ ಉದ್ದೇಶಕ್ಕೆ ಬಳಕೆ ಮಾಡಿದ್ದೇವೆ ಎಂದು ಬಿಜೆಪಿಯವರು ಆರೋಪಿಸಿದ್ದಾರೆ. ತಪ್ಪಾಗಿದೆ, ಸರಿಪಡಿಸಿಕೊಳ್ಳೋಣ. ಈ ಕಾಯ್ದೆ ಜಾರಿಗೊಳಿಸಿ, ಆ ವರ್ಗಗಳ ಜನಸಂಖ್ಯೆಗೆ ಅನುಗುಣವಾಗಿ ಶೇ. 24.1ರಷ್ಟು ಹಣ ಕೊಟ್ಟೆವು. ಆದರೆ ಬಿಜೆಪಿಯವರು ಏನು ಮಾಡಿದಿರಿ ಎಂದು ಪ್ರಶ್ನಿಸಿದರು.
ಕೇಂದ್ರದಲ್ಲಿ ನೀವೂ ಈ ಕಾಯ್ದೆ ಜಾರಿಗೊಳಿಸಬಹು ದಲ್ಲವೇ? ಕೊನೆಯ ಪಕ್ಷ ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಾದರೂ ಜಾರಿಗೆ ತರಬಹುದಲ್ಲವೇ ಎಂದು ಪ್ರಶ್ನಿಸಿದ ಸಿಎಂ, ಅನ್ನಭಾಗ್ಯಕ್ಕೆ ನಾವು ದುಡ್ಡು ಕೊಡುತ್ತಿದ್ದೇವೆ ಎಂದು ಹೇಳುತ್ತಾರೆ. ಆ ಹಣ ಯಾರದ್ದು? ನೀವೇನು ನೋಟು ಪ್ರಿಂಟ್ ಮಾಡುತ್ತೀರಾ? ಆ ಹಣ ನರೇಂದ್ರ ಮೋದಿ ಅಥವಾ ಜೆ.ಪಿ. ನಡ್ಡಾ ಅವರದ್ದಲ್ಲ. ಅದು ಕರ್ನಾಟಕ ಸಹಿತ ಎಲ್ಲ ರಾಜ್ಯಗಳ ತೆರಿಗೆ ಹಣ ಎಂದು ತಿರುಗೇಟು ನೀಡಿದರು.
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
Jayalalithaa Assets: ಮಾಜಿ ಸಿಎಂ ಜಯಲಲಿತಾ 27 ಕೆ.ಜಿ. ಚಿನ್ನಾಭರಣ ತಮಿಳುನಾಡು ವಶಕ್ಕೆ
You seem to have an Ad Blocker on.
To continue reading, please turn it off or whitelist Udayavani.