Democracy Day: ದಕ್ಷಿಣ ಕನ್ನಡ: 130 ಕಿ.ಮೀ. ವ್ಯಾಪ್ತಿಯಲ್ಲಿ 84,200 ಮಂದಿ
ವಿವಿಧೆಡೆ ತಿರಂಗಾ ಧ್ವಜಗಳು, ಕೇಸರಿ, ಬಿಳಿ, ಹಸಿರಿನ ಬಂಟಿಂಗ್ಸ್, ಬಲೂನುಗಳು ಮಾನವ ಸರಪಳಿಗೆ ಮೆರಗು
Team Udayavani, Sep 16, 2024, 1:31 AM IST
ಮಂಗಳೂರು: ಮೂಲ್ಕಿ ತಾಲೂಕಿನ ಹೆಜಮಾಡಿ ಟೋಲ್‌ಗೇಟ್‌ನಿಂದ ಆರಂಭವಾಗಿ ಸುಳ್ಯ ತಾಲೂಕಿನ ಸಂಪಾಜೆ ಗೇಟ್‌ವರೆಗೆ ಬರೋಬ್ಬರಿ 130 ಕಿ.ಮೀ. ಉದ್ದ ರಾಷ್ಟ್ರೀಯ ಹೆದ್ದಾರಿಯಲ್ಲಿ ರವಿವಾರ ಬೆಳಗ್ಗೆ ಪ್ರಜಾಪ್ರಭುತ್ವದ ಸಂದೇಶ ಸಾರುವ ಅತ್ಯಪೂರ್ವ ಮಾನವ ಸರಪಳಿಗೆ ದಕ್ಷಿಣ ಕನ್ನಡ ಜಿಲ್ಲೆ ಸಾಕ್ಷಿಯಾಯಿತು.
ದ.ಕ. ಜಿಲ್ಲಾಡಳಿತದ ವತಿಯಿಂದ ವಿವಿಧ ಇಲಾಖೆಗಳು ಹಾಗೂ ಸಾರ್ವಜನಿಕರ ಸಹಕಾರದಿಂದ ಆಯೋಜಿಸಲಾದ ಮಾನವ ಸರಪಳಿಯಲ್ಲಿ ಸಹಸ್ರ ಸಂಖ್ಯೆಯ ವಿದ್ಯಾರ್ಥಿಗಳು, ಜನಪ್ರತಿನಿಧಿಗಳು, ಸಂಘಸಂಸ್ಥೆಗಳ ಪ್ರಮುಖರು, ಸರಕಾರಿ ಇಲಾಖೆಗಳ ಸಿಬಂದಿ ಭಾಗವಹಿಸಿ ಪ್ರಜಾಪ್ರಭುತ್ವ ದೇಶದ ಹಿರಿಮೆ ಹಾಗೂ ಸಂವಿಧಾನದ ಆಶಯವನ್ನು ಪ್ರತಿಬಿಂಬಿಸಿದರು. ವಿವಿಧೆಡೆ ತಿರಂಗಾ ಧ್ವಜಗಳು, ಕೇಸರಿ, ಬಿಳಿ, ಹಸಿರಿನ ಬಂಟಿಂಗ್ಸ್, ಬಲೂನುಗಳು ಮಾನವ ಸರಪಳಿಗೆ ಮೆರಗು ನೀಡಿದವು. ಈ ಮೊದಲೇ ನಿಗದಿಪಡಿಸಿದ ಹೆದ್ದಾರಿಯ ವಿವಿಧ ಸ್ಥಳದಲ್ಲಿ ಬೆಳಗ್ಗೆ 9ರ ಸುಮಾರಿಗೆ ವಿದ್ಯಾರ್ಥಿಗಳು, ಸಾರ್ವಜನಿಕರು ಜಮಾಯಿಸಿದ್ದರು. 9.30ರಿಂದ 10ರ ವರೆಗೆ ನಾಡಗೀತೆ, ಸಂವಿಧಾನದ ಪೀಠಿಕೆ ಪ್ರಮಾಣ ವಚನ ಹಾಗೂ ಕೈ ಕೈ ಹಿಡಿದು ಮಾನವ ಸರಪಳಿ ನಿರ್ಮಿಸಲಾಯಿತು.
ಕರ್ತವ್ಯ ನಿರ್ವಹಿಸಿ: ಕ್ಯಾ| ಚೌಟ
ದ.ಕ. ಜಿಲ್ಲಾ ಮಟ್ಟದ ಸಭಾ ಕಲಾಪ ಮಂಗಳೂರಿನ ಸಕೀìಟ್ ಹೌಸ್ ಮುಂಭಾಗದಲ್ಲಿ ನಡೆಯಿತು. ಸಂಸದ ಕ್ಯಾ| ಬ್ರಿಜೇಶ್ ಚೌಟ ಮಾತನಾಡಿ, ಪ್ರಜಾಪ್ರಭುತ್ವ ನೆನಪಿನಲ್ಲಿ ಅರ್ಥಪೂರ್ಣ ಕಾರ್ಯಕ್ರಮ ಆಯೋಜಿಸಿದ್ದು ಅಭಿನಂದನೀಯ. ನಮ್ಮ ಪ್ರಜಾಪ್ರಭುತ್ವ, ಸಂಸ್ಕೃತಿಯ ನೆಲೆಗಟ್ಟಿನಲ್ಲಿ ದೇಶದ ಭವಿಷ್ಯವನ್ನು ಕಟ್ಟಬೇಕಾಗಿದೆ. ಇದರೊಂದಿಗೆ ನಮ್ಮ ಕರ್ತವ್ಯಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸಿಕೊಂಡು, ಹಕ್ಕುಗಳನ್ನು ಪಡೆಯುವ ಕಾರ್ಯ ಆಗಲಿ ಎಂದು ಆಶಿಸಿದರು.
ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಮಾತನಾಡಿ, 2007ರಿಂದ ಪ್ರಜಾಪ್ರಭುತ್ವ ದಿನವನ್ನು ವಿಶ್ವಸಂಸ್ಥೆ ಆರಂಭಿಸಿದೆ. ನಮ್ಮ ದೇಶದ ಸಂವಿಧಾನದ ಮೂಲಕ ಡಾ| ಬಿ.ಆರ್. ಅಂಬೇಡ್ಕರ್ ಅವರು ಹಲವು ಕರ್ತವ್ಯ, ಹಕ್ಕುಗಳ ಜತೆ ಸಮಾನತೆಯನ್ನು ಒದಗಿಸಿದ್ದಾರೆ. ಸಂವಿಧಾನದ ಆಶಯದಂತೆ ಎಲ್ಲರೂ ಭಾತೃತ್ವ ಭಾವದಿಂದ ಒಗ್ಗಟ್ಟಾಗಿ ಬದುಕಬೇಕು ಎಂದು ಹೇಳಿದರು.
ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಉಪಮೇಯರ್ ಸುನೀತಾ, ಪಾಲಿಕೆ ವಿಪಕ್ಷ ನಾಯಕ ಪ್ರವೀಣ್‌ಚಂದ್ರ ಆಳ್ವ, ಕಾರ್ಪೊರೆಟರ್‌ಗಳಾದ ಎಂ. ಶಶಿಧರ ಹೆಗ್ಡೆ, ನವೀನ್ ಡಿ’ಸೋಜಾ, ಎ.ಸಿ. ವಿನಯರಾಜ್, ಸಂಗೀತಾ ನಾಯಕ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂಪಿ., ಅಪರ ಜಿಲ್ಲಾಧಿಕಾರಿ ಸಂತೋಷ್ ಕುಮಾರ್, ಜಿಪಂ ಸಿಇಒ ಡಾ|ಆನಂದ್, ಐಜಿಪಿ ಅಮಿತ್ ಸಿಂಗ್, ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್., ಮಹಾನಗರ ಪಾಲಿಕೆ ಆಯುಕ್ತ ಆನಂದ್ ಸಿ.ಎಲ್. ಮುಂತಾದವರು ಉಪಸ್ಥಿತರಿದ್ದರು.
ಗಿಡ ನೆಟ್ಟು ಆಚರಣೆ; ಕಲಾ ತಂಡಗಳ ಸೊಬಗು
ಮಾನವ ಸರಪಳಿ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ಸಭಾ ಕಲಾಪ ಸಕೀìಟ್ ಹೌಸ್ ಮುಂಭಾಗದಲ್ಲಿ ನಡೆಯಿತು. ಚೆಂಡೆ, ಬ್ಯಾಂಡ್, ಗೊಂಬೆ ವೇಷಗಳು, ಕೊರಗರ ಡೋಲು, ಹುಲಿ ವೇಷ ಸೇರಿದಂತೆ ವಿವಿಧ ಕಲಾ ತಂಡಗಳು ಕಾರ್ಯಕ್ರಮದ ಮೆರುಗು ಹೆಚ್ಚಿಸಿದವು. ಜಿಲ್ಲಾಧಿಕಾರಿ ಮುಲ್ಲೆ$ç ಮುಗಿಲನ್ ಎಂ.ಪಿ. ಅವರು ಸಂವಿಧಾನದ ಪೀಠಿಕೆ ಪ್ರಮಾಣವಚನ ಬೋಧಿಸಿದರು. ಕೊನೆಯಲ್ಲಿ ಎರಡೂ ಕೈಗಳನ್ನು ಮೇಲಕ್ಕೆತ್ತಿ ಜೈ ಹಿಂದ್, ಜೈ ಕರ್ನಾಟಕ ಘೋಷಣೆ ಕೂಗಲಾಯಿತು. ಅತಿಥಿಗಳೂ ಸೇರಿದಂತೆ ಹಲವರು ಮಾನವ ಸರಪಳಿಯಲ್ಲಿ ಭಾಗಿಯಾದರು. ವಿವಿಧ ಕಲಾ ತಂಡಗಳ ಪ್ರತಿಭಾ ಪ್ರದರ್ಶನದೊಂದಿಗೆ ಮೆರವಣಿಗೆ ಮೂಲಕ ಸಾಗಿ ಕದ್ರಿ ಪಾರ್ಕ್‌ನಲ್ಲಿ ಗಿಡ ನೆಡುವ ಕಾರ್ಯಕ್ರಮ ನೆರವೇರಿತು. ಜಿಲ್ಲೆಯಾದ್ಯಂತ ಸಾವಿರಕ್ಕೂ ಅಧಿಕ ಗಿಡ ನೆಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train: ಮುರುಡೇಶ್ವರ ಎಕ್ಸ್‌ಪ್ರೆಸ್ ಸಮಯ ಬದಲಾವಣೆ ಬೇಡ
Mangaluru: ಮದ್ಯ ಅಕ್ರಮ ಸಾಗಾಟ, ದಾಸ್ತಾನು; ಆರೋಪಿ ಖುಲಾಸೆ
National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ
Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು
Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.