Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ವಿರುದ್ಧ FIR


Team Udayavani, Sep 16, 2024, 11:12 AM IST

Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ವಿರುದ್ಧ FIR

ಚೆನ್ನೈ: ಲೈಂಗಿಕ ಕಿರುಕುಳದ ಆರೋಪದ ಮೇಲೆ ಖ್ಯಾತ ನೃತ್ಯ ಸಂಯೋಜಕ (Choreographer) ಜಾನಿ ಮಾಸ್ಟರ್‌ (Jani Master) ವಿರುದ್ಧ ಎಫ್‌ ಐಆರ್‌ (FIR) ದಾಖಲಾಗಿದೆ.

21 ವರ್ಷದ ಯುವತಿಯೊಬ್ಬಳು ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ (ಶೇಕ್ ಜಾನಿ ಬಾಷಾ) ಮೇಲೆ ಮೇಲೆ ಲೈಂಗಿಕ ಕಿರುಕುಳದ ಆರೋಪವನ್ನು ಮಾಡಿದ್ದಾರೆ.

ದೂರು ನೀಡಿದ ಯುವತಿ ಕೂಡ ನೃತ್ಯ ಸಂಯೋಜಕಿಯಾಗಿದ್ದು, ಕಳೆದ ಕೆಲ ತಿಂಗಳಿನಿಂದ ಈಕೆ ಜಾನಿ ಮಾಸ್ಟರ್‌ ಜೊತೆಗೆ ಕೆಲಸ ಮಾಡುತ್ತಿದ್ದಳು. ಜಾನಿ ಮಾಸ್ಟರ್‌ ಹೊರಾಂಗಣ ಚಿತ್ರೀಕರಣದ ವೇಳೆ ತನ್ನ ಮೇಲೆ ಹಲ್ಲೆ ನಡೆಸಿ ಲೈಂಗಿಕವಾಗಿ ಕಿರುಕುಳ ನೀಡಿದ್ದಾರೆ ಎಂದು ಯುವತಿ ದೂರಿನಲ್ಲಿ ಹೇಳಿದ್ದಾಳೆ ಎಂದು ʼದಿ ಹಿಂದೂʼ ವರದಿ ತಿಳಿಸಿದೆ.

ಚೆನ್ನೈ, ಮುಂಬೈ ಮತ್ತು ಹೈದರಾಬಾದ್ ಸೇರಿದಂತೆ ವಿವಿಧ ನಗರಗಳಲ್ಲಿ ಚಿತ್ರೀಕರಣದ ಸಮಯದಲ್ಲಿ ಜಾನಿ ಮಾಸ್ಟರ್ ತನ್ನ ಮೇಲೆ ಅನೇಕ ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಅವರು ನಾರ್ಸಿಂಗಿಯಲ್ಲಿರುವ ತನ್ನ ನಿವಾಸದಲ್ಲಿ ಹಲವಾರು ಬಾರಿ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರುದಾರೆ ಹೇಳಿದ್ದಾಳೆ.

ರಾಯದುರ್ಗದಲ್ಲಿ ಎಫ್‌ಐಆರ್ ದಾಖಲಾಗಿದ್ದು, ನಂತರ ಹೆಚ್ಚಿನ ತನಿಖೆಗಾಗಿ ನರಸಿಂಗಿ ಪೊಲೀಸರಿಗೆ ಪ್ರಕರಣವನ್ನು ವರ್ಗಾಯಿಸಲಾಗಿದೆ.

ಜಾನಿ ಮಾಸ್ಟರ್ ವಿರುದ್ಧ ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 376 (ಅತ್ಯಾಚಾರ), ಸೆಕ್ಷನ್ 506 (ಕ್ರಿಮಿನಲ್ ಬೆದರಿಕೆ), ಮತ್ತು ಸೆಕ್ಷನ್ 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ತೆಲಂಗಾಣ ಮಹಿಳಾ ಸುರಕ್ಷತಾ ವಿಭಾಗದ ಮಹಾನಿರ್ದೇಶಕಿ ಶಿಖಾ ಗೋಯೆಲ್, ಲೈಂಗಿಕ ಕಿರುಕುಳ ತಡೆ ಕಾಯ್ದೆಯಡಿ (ಪಿಒಎಸ್‌ಎಚ್) ಆಂತರಿಕ ವಿಚಾರಣೆ ನಡೆಸಿ ಪೊಲೀಸರಲ್ಲಿ ಪ್ರಕರಣ ದಾಖಲಿಸುವಂತೆ ಸಲಹೆ ನೀಡಿದ್ದಾರೆ.

ಕೊರಿಯೋಗ್ರಾಫರ್ ಜಾನಿ ಮಾಸ್ಟರ್ ವಿವಾದಕ್ಕೆ ಸಿಲುಕಿರುವುದು ಇದೇ ಮೊದಲಲ್ಲ. ‌ಈ ಹಿಂದೆ ಜಾನಿ ಮಾಸ್ಟರ್‌ ವಿರುದ್ಧ ಆರೋಪಗಳು ಕೇಳಿ ಬಂದಿತ್ತು. ಈ ಹಿಂದೆ ಸತೀಶ್ ಎಂಬ ಡ್ಯಾನ್ಸರ್ ಜಾನಿ ಮಾಸ್ಟರ್ ವಿರುದ್ಧ ಕಿರುಕುಳದ ಆರೋಪ ಮಾಡಿ ದೂರು ದಾಖಲಿಸಿದ್ದರು. ಸಿನಿಮಾ ಚಿತ್ರೀಕರಣದಲ್ಲಿ ಕೆಲಸ ಸಿಗದಂತೆ ನೃತ್ಯ ನಿರ್ದೇಶಕರು ತಡೆಯುತ್ತಿದ್ದಾರೆ ಎಂದು ಅವರು ಆರೋಪಿಸಿದ್ದರು. ಆ ಬಳಿಕ ಜಾನಿ ಮಾಸ್ಟರ್ ಈ ಆರೋಪಗಳನ್ನು ತಳ್ಳಿಹಾಕಿದ್ದರು.

ಇದಲ್ಲದೆ 2015 ರಲ್ಲಿ ಕಾಲೇಜಿನಲ್ಲಿ ನಡೆದ ಗಲಾಟೆಯಿಂದಾಗಿ 2019 ರಲ್ಲಿ ಜಾನಿ ಮಾಸ್ಟರ್‌ಗೆ ಹೈದರಾಬಾದ್‌ನ ಸ್ಥಳೀಯ ನ್ಯಾಯಾಲಯವು ಆರು ತಿಂಗಳ ಜೈಲು ಶಿಕ್ಷೆ ವಿಧಿಸಿತು.

ಜಾನಿ ಮಾಸ್ಟರ್‌ ʼರೌಡಿ ಬೇಬಿʼ ಮತ್ತು ಇತ್ತೀಚೆಗೆ ʼಸ್ತ್ರೀ-2ʼ ಚಿತ್ರ ʼಆಯಿ ನಾಯ್ʼ ಹಾಡಿಗೆ ನೃತ್ಯ ಸಂಯೋಜನೆ ಮಾಡಿದ್ದಾರೆ.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್‌ ಪತ್ನಿ ರಾದ್ಧಾಂತ

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

6

Kanguva Movie: ಸೂರ್ಯ ಪ್ಯಾನ್‌ ಇಂಡಿಯಾ ʼಕಂಗುವʼ ಹೊಸ ರಿಲೀಸ್‌ ಡೇಟ್‌ ಔಟ್

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

Suspend

Nagamangala ಗಲಭೆ: ಡಿವೈಎಸ್ಪಿ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.