ಕೊಪ್ಪಳ: ಅದಾಲತ್‌ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು
ಜೋಡಿ ಮತ್ತೆ ಹೂವಿನ ಹಾರ ಬದಲಿಸಿಕೊಂಡು ಸಂಸಾರದ ಮತ್ತೂಂದು ಹೆಜ್ಜೆ ಹಾಕಿದರು.
Team Udayavani, Sep 16, 2024, 11:16 AM IST
■ ಉದಯವಾಣಿ ಸಮಾಚಾರ
ಕೊಪ್ಪಳ: ಮದುವೆಯಾಗಿ ಕೆಲವೇ ವರ್ಷಗಳಲ್ಲಿ ವೈ ಮನಸ್ಸುಗಳಿಂದ ಜಿಲ್ಲೆಯ ವಿವಿಧ ಕೋರ್ಟ್‌ನಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ 14 ಜೋಡಿಗಳಿಗೆ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ನ್ಯಾಯಾಧೀಶರು ಮನವೊಲಿಕೆ ಮಾಡಿ ಪತಿ-ಪತ್ನಿಗೆ ಬುದ್ದಿ ಹೇಳಿದ್ದಲ್ಲದೇ ಸಂಧಾನ ಮಾಡಿ ಮತ್ತೆ ಕುಟುಂಬದ ಬೆಸುಗೆ ಭಾಗ್ಯ ಕರುಣಿಸಿದರು.
ಹೌದು.. ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾ ಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಚಂದ್ರಶೇಖರ ಸಿ ಅವರು ವಿಶೇಷ ಮುತುವರ್ಜಿ ವಹಿಸಿ ಸೆ.14ರಂದು ಆಯೋಜನೆ ಮಾಡಿದ್ದ ರಾಷ್ಟೀಯ ಲೋಕ್ ಅದಾಲತ್ ಕಾರ್ಯಕ್ರಮವು ಇಂತಹ ವಿಶೇಷತೆಯ ಮೂಲಕ ಹೊಸ ಇತಿಹಾಸ ಬರೆಯಿತು. ರಾಜೀ ಸಂಧಾನದ ಮೂಲಕ ಹೆಚ್ಚಿನ ಪ್ರಕರಣಗಳು ಇತ್ಯರ್ಥವಾಗಿದ್ದು ಅದಾಲತ್‌ನ ವಿಶೇಷತೆಯಾಗಿತ್ತು.
ಕೌಟುಂಬಿಕ ಭಿನ್ನಾಭಿಪ್ರಾಯ, ಹಣಕಾಸು ಸಮಸ್ಯೆ, ಕುಡಿತ, ಸೋಮಾರಿತನ, ಅನುಮಾನ ಹೀಗೆ ನಾನಾ ಕಾರಣಕ್ಕೆ ಸಂಸಾರದಲ್ಲಿನ ಸಮಸ್ಯೆಯಿಂದ ವಿಚ್ಛೇದನ ಕೋರಿ ಹದಿನಾಲ್ಕು ಜೋಡಿಗಳು ನ್ಯಾಯಾಲಯದ ಮೆಟ್ಟಿಲು ಏರಿದ್ದರು. ಅದಾಲತ್‌ನಲ್ಲಿ ಜಿಲ್ಲೆಯ ಕೊಪ್ಪಳ, ಗಂಗಾವತಿ, ಕುಷ್ಟಗಿ ಹಾಗೂ ಯಲಬುರ್ಗಾ ಲೋಕ ಅದಾಲತ್‌ನಲ್ಲಿ ನ್ಯಾಯಾಧೀಶರು
ಹಾಗೂ ವಕೀಲರು ಆಪ್ತ ಸಮಾಲೋಚನೆ ಮೂಲಕ 14 ಜೋಡಿಗಳ ಸಂಸಾರದ ಅಪಸವ್ಯ ಹೋಗಲಾಡಿಸಿದರು.
ನ್ಯಾಯಾಧೀಶರು ಮತ್ತು ವಕೀಲರು ಆ ಜೋಡಿಗಳಿಗೆ ಅರಿವಿನ ಜ್ಞಾನ ಮೂಡಿಸಿದರು. ಅಜ್ಞಾನದ ದಾರಿ ತಪ್ಪಿಸಿ ಜೀವನದ ಪಯಣದತ್ತ ಸಾಗಲು ತಿಳಿ ಹೇಳಿದರು. ಎಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಹಾಗೂ ವಕೀಲರ ಸಮ್ಮುಖದಲ್ಲಿ ಕೋರ್ಟ್ ಆವರಣದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ ಜೋಡಿ ಮತ್ತೆ ಹೂವಿನ ಹಾರ ಬದಲಿಸಿಕೊಂಡು ಸಂಸಾರದ ಮತ್ತೂಂದು ಹೆಜ್ಜೆ ಹಾಕಿದರು.
3,328 ಪ್ರಕರಣಗಳು ಇತ್ಯರ್ಥ : ವಿಮೆ, ನೀರಿನ ಬಿಲ್, ಬ್ಯಾಂಕ್ ಸಾಲ, ಮನೆ ಕರ, ಕೌಟುಂಬಿಕ ದೌರ್ಜನ್ಯ, ಜೀವನಾಂಶ, ಚೆಕ್ ಬೌನ್ಸ್ ಪ್ರಕರಣ, ಜನನ ಮರಣ, ಸಿವಿಲ್ ಕೇಸ್, ಕ್ರಿಮಿನಲ್ ಕೇಸ್, ಮೋಟಾರ್ ವಾಹನ ಅಪಘಾತ, ಎಂಎಂಆರ್‌ಡಿ ಪ್ರಕರಣಗಳು ಹಾಗೂ ಇತ್ಯಾದಿ ಸೇರಿದಂತೆ ಕೊಪ್ಪಳ, ಗಂಗಾವತಿ, ಕುಷ್ಟಗಿ ಹಾಗೂ ಯಲಬುರ್ಗಾ ನ್ಯಾಯಾಲಯಗಳಲ್ಲಿ ಒಟ್ಟು 4,182
ಪ್ರಕರಣಗಳ ಪೈಕಿ 3,328 ಪ್ರಕರಣ ಇತ್ಯರ್ಥ ಮಾಡಲಾಯಿತು.
ವಿಮೆ, ನೀರಿನ ಬಿಲ್, ಮೋಟಾರ್ ವಾಹನ ಅಪಘಾತ ಸೇರಿದಂತೆ ವಿವಿಧ ಪ್ರಕರಣ ಇತ್ಯರ್ಥ ಮಾಡಲಾದ ಒಟ್ಟು ಮೌಲ್ಯ 55,38,75,322 ಆಗಿದೆ ಹಾಗೂ ಪೂರ್ವ ದಾವೇ ಪ್ರಕರಣಗಳಿಗೆ ಸಂಬಂಧಿ ಸಿದಂತೆ ಒಟ್ಟು 35,403 ಪ್ರಕರಣಗಳ ಪೈಕಿ 32,393 ಪ್ರಕರಣ ಇತ್ಯರ್ಥಪಡಿಸಲಾಗಿದೆ.
ಇದರ ಒಟ್ಟು ಮೌಲ್ಯ 2,40,85,455 ಇದ್ದು, ಒಟ್ಟು 39,583 ಪ್ರಕರಣಗಳ ಪೈಕಿ 35,721 ಪ್ರಕರಣ ಇತ್ಯರ್ಥಪಡಿಸಲಾಗಿದೆ. ಇತ್ಯರ್ಥಪಡಿಸಿದ ಒಟ್ಟು ಮೌಲ್ಯ 57,79,60,777 ರೂ.ನಷ್ಟಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾಂತೇಶ ಎಸ್ ದರಗದ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್
MUST WATCH
ಹೊಸ ಸೇರ್ಪಡೆ
Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.