Ranaksha: ಫ್ಯಾಮಿಲಿ ಡ್ರಾಮಾದಲ್ಲಿ ಸೀರುಂಡೆ ರಘು
Team Udayavani, Sep 16, 2024, 7:09 PM IST
ರಿಯಾಲಿಟಿ ಶೋ, ಕಾಮಿಡಿ ಶೋಗಳಲ್ಲಿ ಪ್ರತಿಭಾ ಪ್ರದರ್ಶನ ಮಾಡಿದವರು ಹೀರೋ ಆಗಿ ಅದೃಷ್ಟ ಪರೀಕ್ಷೆಗಿಳಿಯುತ್ತಿದ್ದಾರೆ. ಈ ಸಾಲಿಗೆ ಹೊಸ ಸೇರ್ಪಡೆ ಸೀರುಂಡೆ ರಘು. ಈಗಾಗಲೇ ಕಾಮಿಡಿ ಕಿಲಾಡಿಗಳು ಸೇರಿದಂತೆ ಬೇರೆ ಬೇರೆ ಟಿವಿ ಶೋಗಳಲ್ಲಿ ಕಾಣಿಸಿಕೊಂಡಿರುವ ರಘು ಈಗ “ರಣಾಕ್ಷ’ ಎಂಬ ಸಿನಿಮಾದಲ್ಲಿ ನಾಯಕರಾಗಿ ನಟಿಸಿದ್ದಾರೆ. ಈ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದೆ ತಂಡ. ರಾಮು ನಿರ್ಮಾಣದ ಈ ಚಿತ್ರವನ್ನು ರಾಘವ್ ನಿರ್ದೇಶನ ಮಾಡಿದ್ದಾರೆ.
ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ರಾಘವ್, ರಣಾಕ್ಷ ಎಂದರೆ ಹದ್ದಿನಂತೆ ಕಣ್ಣಿಟ್ಟು ಕಾಯುವವನು ಎಂದರ್ಥ. ಫ್ಯಾಮಿಲಿ ಹಿನ್ನೆಲೆಯಲ್ಲಿ ನಡೆಯುವ ಸಸ್ಪೆನ್ಸ್ , ಥ್ರಿಲ್ಲರ್ ಚಿತ್ರವಿದು. ದೇವರು ಹಾಗೂ ದೆವ್ವ ಎರಡರ ನಡುವಿನ ಸಂಘರ್ಷವೇ ಚಿತ್ರದ ಹೈಲೈಟ್. ಯಾವುದೇ ಮಂತ್ರ, ತಂತ್ರ , ಶಕ್ತಿ ಏನೇ ಸಮಸ್ಯೆ ಎದುರಾದರೂ ಅದನ್ನು ಎದುರಿಸುವುದಕ್ಕೆ ಮನುಷ್ಯನೇ ಬರಬೇಕು ಅದು ಹೇಗೆ ಎಂಬುದನ್ನು ಚಿತ್ರದಲ್ಲಿ ಹೇಳಿದ್ದೇವೆ’ ಎಂದರು.
ನಿರ್ಮಾಪಕ ರಾಮು ಪ್ರಕಾರ, ಇದು ಮನೆಮಂದಿಯೆಲ್ಲಾ ಕುಳಿತು ನೋಡುವ ಸಿನಿಮಾ. ನಾಯಕ ಸೀರುಂಡೆ ರಘು ಮಾತನಾಡಿ, “ಮೊದಲ ಬಾರಿಗೆ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. 4 ಜನ ಸ್ನೇಹಿತರ ಜೊತೆ ಸಾಗುವ ಪಾತ್ರ’ ಎಂದರು. ನಾಯಕಿ ರಕ್ಷಾ ಇಲ್ಲಿ ಹಳ್ಳಿಯ ಮುಗ್ಧ ಹುಡುಗಿಯಾಗಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಸಂಗೀತ ವಿಶಾಲ್ ಆಲಾಪ್ ಸಂಗೀತವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.