ED ಬಂಧನ ಭೀತಿ:ನಿರೀಕ್ಷಣಾ ಜಾಮೀನು ಕೋರಿದ ಅಧಿಕಾರಿ ಕಲ್ಲೇಶ್-ವಿಚಾರಣೆ ಇಂದಿಗೆ ಮುಂದೂಡಿಕೆ
Team Udayavani, Sep 17, 2024, 6:45 AM IST
ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ಇಡಿ) ಬಂಧನ ಭೀತಿಗೆ ಒಳಗಾಗಿರುವ ಹಾಗೂ ಇಡಿ ಅಧಿಕಾರಿಗಳ ವಿರುದ್ಧ ದೂರು ನೀಡಿದ್ದ ರಾಜ್ಯ ಸಮಾಜ ಕಲ್ಯಾಣ ಇಲಾಖೆಯ ಹಿಂದಿನ ಹೆಚ್ಚುವರಿ ನಿರ್ದೇಶಕ ಬಿ ಕಲ್ಲೇಶ್ ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಕಲ್ಲೇಶ್ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ನಡೆಸಿದ್ದರು. ಈ ಸಂದರ್ಭದಲ್ಲಿ ವಾದಿಸಿದ ಅರ್ಜಿದಾರರ ಪರ ವಕೀಲ ರೋಹನ್ ತಿಗಾಡಿ ಅವರು ಜಾರಿ ನಿರ್ದೇಶನಾಲಯ ನ್ಯಾಯಾಲಯಕ್ಕೆ ಸಲ್ಲಿಸಿರುವ ಅಂತಿಮ ವರದಿ/ದೂರನ್ನು ಇನ್ನಷ್ಟೇ ಸ್ವೀಕರಿಸಬೇಕಿದೆ. ಇದಕ್ಕಾಗಿ ಕಾಲಾವಕಾಶ ನೀಡಬೇಕು ಎಂದು ಕೋರಿದ್ದಾರೆ. ಈ ಹಿನ್ನೆಲೆಯಲ್ಲಿ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 17ಕ್ಕೆ ಮುಂದೂಡಲಾಗಿದೆ ಎಂದು ನ್ಯಾಯಾಲಯ ತಿಳಿಸಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.