Census ಈ ಬಾರಿ ಜಾತಿ ಕಾಲಂ ಸೇರ್ಪಡೆಗೆ ಕೇಂದ್ರ ಸರಕಾರ ಚಿಂತನೆ?
Team Udayavani, Sep 17, 2024, 6:16 AM IST
ಹೊಸದಿಲ್ಲಿ: ಜನಗಣತಿ ವೇಳೆ ಜಾತಿ ಕಾಲಂ ಸೇರಿಸುವ ಬಗ್ಗೆ ಕೇಂದ್ರ ಸರಕಾರವು ಯೋಚಿಸುತ್ತಿದೆ ಎಂದು ತಿಳಿದು ಬಂದಿದೆ. ಕಾಂಗ್ರೆಸ್ ಸೇರಿದಂತೆ ಬಹುತೇಕ ಎಲ್ಲ ವಿಪಕ್ಷಗಳು ಜಾತಿಗಣತಿಗೆ ಒತ್ತಾಯಿಸುತ್ತಿವೆ. ಜತೆಗೆ, ಎನ್ಡಿಎ ಮಿತ್ರ ಪಕ್ಷಗಳಾದ ಎಲ್ಜೆಪಿ (ಪಾಸ್ವಾನ್) ಮತ್ತು ಜೆಡಿಯು ಕೂಡ ಜಾತಿಗಣತಿಗೆ ಆಗ್ರಹಿಸುತ್ತಿವೆ. ಜಾತಿ ಗಣತಿಯನ್ನು ಮೊದಲಿನಿಂದಲೂ ವಿರೋಧಿಸಿಕೊಂಡು ಬಂದಿರುವ ಬಿಜೆಪಿ ನೇತೃತ್ವದ ಕೇಂದ್ರವು ಈಗ ಗಣತಿ ವೇಳೆ, ಜಾತಿ ಕಾಲಂ ಸೇರಿಸುವ ಬಗ್ಗೆ ಮಾತುಕತೆ ನಡೆಸುತ್ತಿದೆ ಎನ್ನಲಾಗಿದೆ. ಪ್ರತೀ 10 ವರ್ಷಕ್ಕೊಮ್ಮೆ ನಡೆಯುವ ಜನಗಣತಿ ಯನ್ನು ಕೋವಿಡ್ ಕಾರಣದಿಂದ ಕಳೆದ ಮೂರ್ನಾಲ್ಕು ವರ್ಷಗಳಿಂದ ಮುಂದೂಡಿಕೊಂಡು ಬರಲಾಗಿತ್ತು. ಆದರೆ ಈ ಸೆಪ್ಟಂಬರ್ನಲ್ಲಿ ಜನಗಣತಿಯನ್ನು ಕೇಂದ್ರ ಸರಕಾರ ಕೈಗೊಳ್ಳುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.