Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ
Team Udayavani, Sep 17, 2024, 12:40 AM IST
ಪಡುಬಿದ್ರಿ: ಇಲ್ಲಿನ ಬೇಂಗ್ರೆ ನಿವಾಸಿ ಶ್ರೀಧರ ಪೂಜಾರಿ (67) ಅವರು ತನ್ನ ಮನೆಯ ಬಚ್ಚಲು ಕೋಣೆಯಲ್ಲಿ ಯಾವುದೋ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸೆ. 15ರಂದು ಸಂಜೆಯ ವೇಳೆ ಕುತ್ತಿಗೆಗೆ ನೈಲಾನ್ ಹಗ್ಗ ಬಿಗಿದು ಕೊಂಡು ಬಚ್ಚಲು ಕೋಣೆಯಲ್ಲಿ ವಿಷ ಸೇವಿಸಿ ಬಿದ್ದಿದ್ದವರನ್ನು ಮನೆಯವರು ಉಡುಪಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆಗಾಗಲೇ ಅವರು ಸಾವನ್ನಪ್ಪಿದ್ದಾರೆ. ಮನೆಯ ಕೋಣೆಯಲ್ಲಿ ವಿಷದ ಬಾಟಲಿ ಪತ್ತೆಯಾಗಿದೆ. ಮೃತರಿಗೆ ರಕ್ತದೊತ್ತಡ ಹಾಗೂ ಕಾಲು ನೋವು ಇದ್ದು, ಇದರ ಕೊರಗಿನಿಂದ ಅಥವಾ ಇನ್ಯಾವುದೋ ಕಾರಣದಿಂದ ಕೃತ್ಯವೆಸಗಿರಬಹುದು ಎಂದು ಅವರ ಪುತ್ರ ಸುಧೀರ್ ನೀಡಿದ ದೂರಿನಂತೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಹಿಂದೆ ಅವರು ಪಡುಬಿದ್ರಿ ಯಲ್ಲಿ ಕಬ್ಬಿನ ಜ್ಯೂಸ್ ಅಂಗಡಿಯನ್ನು ಹೊಂದಿದ್ದರು. ಅನಂತರ ಕ್ಯಾಂಟೀನ್ ವ್ಯವಹಾರ ನಡೆಸಿಕೊಂಡಿದ್ದು, ಬಳಿಕ ಅವರು ಕೋಳಿ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ಅನಾರೋಗ್ಯದ ಹಿನ್ನೆಲೆಯಿಂದಾಗಿ ಕೆಲವು ಸಮಯದಿಂದ ಮನೆಯಲ್ಲೇ ಇದ್ದರು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Vikram Gowda Case: ವಿಕ್ರಂ ಗೌಡ ಎನ್ಕೌಂಟರ್; ತನಿಖೆ ಚುರುಕು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.