Liver transplant: ಲಿವರ್ ದಾನದ ಬಳಿಕ ಉಪನ್ಯಾಸಕಿ ಸಾವು
ಇನ್ನೂ ಸ್ಪಷ್ಟವಾಗದ ಸಾವಿನ ಕಾರಣ, ಕಸಿ ಮಾಡಿಸಿಕೊಂಡ ಮಹಿಳೆ ಚೇತರಿಕೆ
Team Udayavani, Sep 17, 2024, 2:02 AM IST
ಮಂಗಳೂರು: ತನ್ನ ಸಂಬಂಧಿಯೋರ್ವರಿಗೆ ಲಿವರ್ (ಯಕೃತ್ತು) ದಾನ ಮಾಡಿದ್ದ ನಗರದ ಉಪನ್ಯಾಸಕಿ ಅರ್ಚನಾ ಕಾಮತ್ (33) ಅವರು ದಿಢೀರ್ ಅಸ್ಪಸ್ಥಗೊಂಡು ಮೃತಪಟ್ಟಿದ್ದಾರೆ.
ತನ್ನ ಪತಿಯ ಸಂಬಂಧಿ ಮಹಿಳೆಯೋರ್ವರಿಗೆ ಲಿವರ್ ಕಸಿ ಮಾಡಬೇಕಾಗಿತ್ತು. ಹಲವರನ್ನು ತಪಾಸಣೆಗೆ ಒಳಪಡಿಸಿದ್ದರೂ ಹೊಂದಾಣಿಕೆಯಾಗಿರಲಿಲ್ಲ. ಅರ್ಚನಾ ಅವರ ರಕ್ತದ ಗುಂಪು ಹೊಂದಾಣಿಕೆಯಾಗಿತ್ತು ಹಾಗೂ ಅವರು ಲಿವರ್ ದಾನಕ್ಕೆ ಒಪ್ಪಿದ್ದರು. ಅದರಂತೆ 12 ದಿನಗಳ ಹಿಂದೆ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಅರ್ಚನಾ ಅವರ ಲಿವರ್‌ನ ಸ್ವಲ್ಪ ಭಾಗವನ್ನು ಮಹಿಳೆಗೆ ಕಸಿ ಮಾಡಲಾಗಿತ್ತು. ಆರೋಗ್ಯದಿಂದಿದ್ದ ಅರ್ಚನಾ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದರು.
ಆದರೆ ಕಳೆದ ನಾಲ್ಕು ದಿನಗಳ ಹಿಂದೆ ಅರ್ಚನಾ ದಿಢೀರ್ ಅಸ್ವಸ್ಥಗೊಂಡಿದ್ದು, ಸೆ.15ರಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಲಿವರ್ ಕಸಿ ಮಾಡಿಸಿಕೊಂಡಿರುವ ಮಹಿಳೆ ಆರೋಗ್ಯವಾಗಿದ್ದಾರೆ ಎಂದು ತಿಳಿದುಬಂದಿದೆ. ಮಂಗಳೂರಿನ ಕೆನರಾ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿದ್ದ ಅವರು ಬಳಿಕ ನಗರದ ಹೊರವಲಯದ ಮಣೇಲ್ ಶ್ರೀನಿವಾಸ ನಾಯಕ್ ಎಂಬಿಎ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿದ್ದರು.
ಅರ್ಚನಾ ಅವರು ಪತಿ ಸಿಎ ಚೇತನ್ ಕುಮಾರ್ ಹಾಗೂ ನಾಲ್ಕು ವರ್ಷದ ಪುತ್ರನನ್ನು ಅಗಲಿದ್ದಾರೆ. ಅರ್ಚನಾ ಅವರ ಸಾವಿಗೆ ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ ಇವರ ಸಾವು ಎಲ್ಲರ ಕಣ್ಣನ್ನೂ ಒದ್ದೆ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ
MUST WATCH
ಹೊಸ ಸೇರ್ಪಡೆ
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.