Shirva ಮಲಗಿದ್ದಲ್ಲಿಯೇ ಪೊಲೀಸ್ ಅಧಿಕಾರಿ ಸಾವು
ಮಲಗಿದ್ದಲ್ಲಿಯೇ ಪೊಲೀಸ್ ಅಧಿಕಾರಿ ಸಾವು
Team Udayavani, Sep 17, 2024, 11:59 AM IST
![Udupi: ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಹೃದಯಾಘಾತದಿಂದ ನಿಧನ](https://www.udayavani.com/wp-content/uploads/2024/09/udupi-7-620x429.jpg)
![Udupi: ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಹೃದಯಾಘಾತದಿಂದ ನಿಧನ](https://www.udayavani.com/wp-content/uploads/2024/09/udupi-7-620x429.jpg)
ಶಿರ್ವ: ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಸೇವೆಯಲ್ಲಿದ್ದ ಪೊಲೀಸ್ ಉಪ ನಿರೀಕ್ಷಕ ರೋರ್ವರು ತನ್ನ ಮನೆಯಲ್ಲಿ ಮಲಗಿದ್ದಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಸೆ. 17 ರ ಮಂಗಳವಾರ ಮುಂಜಾನೆ ಶಿರ್ವದಲ್ಲಿ ನಡೆದಿದೆ.
ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯ ವಯರ್‌ಲೆಸ್ ಕಂಟ್ರೋಲ್ ರೂಂನಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಉಪನಿರೀಕ್ಷಕ, ಶಿರ್ವನ್ಯಾರ್ಮ ಶ್ರೀ ಧರ್ಮಜಾರಂದಾಯ ದೈವಸ್ಥಾನದ ರಸ್ತೆ ಬದಿಯ ನಿವಾಸಿ ನಿತ್ಯಾನಂದ ಶೆಟ್ಟಿ (51) ಮೃತಪಟ್ಟ ಪೊಲೀಸ್ ಅಧಿಕಾರಿ. ಮೃತರು ತಾಯಿ, ಪತ್ನಿ, ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.
ಪೊಲೀಸ್ ಇಲಾಖೆಯಲ್ಲಿ 28 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಅವರು ಮಲ್ಪೆ ಕರಾವಳಿ ಕಾವಲು ಪಡೆಯಲ್ಲಿ ಸೇವೆ ಸಲ್ಲಿಸಿದ್ದರು. ಕಳೆದ 4 ವರ್ಷಗಳಿಂದ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯ ವಯರ್‌ಲೆಸ್ ಕಂಟ್ರೋ ಲ್ ರೂಂನಲ್ಲಿ ಪಿಎಸ್‌ಐ ಆಗಿ ಸೇವೆ ಸಲ್ಲಿಸುತ್ತಿದ್ದರು.
ಇದನ್ನೂ ಓದಿ: Nagamangala Incident: ತನಿಖೆ ಬಳಿಕ ಇನ್ನಷ್ಟು ಕ್ರಮ… ಗೃಹ ಸಚಿವ ಪರಮೇಶ್ವರ್ ಹೇಳಿಕೆ