Kannada Short Movie: ದುಡ್ಡಿನ ಸುತ್ತ ಜೋಕರ್ ಆಲ್ಬಮ್
Team Udayavani, Sep 17, 2024, 1:19 PM IST
“ಜೋಕರ್ ಆಕ್ಟರ್’ ಎಂಬ ಕಿರುಚಿತ್ರವೊಂದು ತಯಾರಾಗಿದೆ. ಪ್ರಶಾಂತ್ ಮಯೂರ ನಿರ್ದೇಶನದ ಕಿರುಚಿತ್ರ ಇದು.ದುಡ್ಡು ತುಂಬಾ ಕೆಟ್ಟದು… ಎನ್ನುವ ವಿಷಯವನ್ನು ಮುಂದಿಟ್ಟುಕೊಂಡು 33 ನಿಮಿಷಗಳಲ್ಲಿ ಕಿರುಚಿತ್ರದ ಮೂಲಕ ಹೇಳುವ ಪ್ರಯತ್ನ ಮಾಡಿದ್ದಾರೆ ನಿರ್ದೇಶಕರು.
ಕಲೆ, ಕೊಲೆ, ಹಣದ ಸುತ್ತ ನಡೆಯುವ ಕಥೆಯನ್ನು ಪ್ರಶಾಂತ್ ಮಯೂರ ಅವರು ಜೋಕರ್ ಆಕ್ಟರ್ ಮೂಲಕ ಕಟ್ಟಿಕೊಟ್ಟಿದ್ದಾರೆ. ಕಿರುಚಿತ್ರದ ಪ್ರದರ್ಶನದ ನಂತರ ಮಾತನಾಡಿದ ನಿರ್ದೇಶಕ, ನಟ ನಿರ್ಮಾಪಕ ಪ್ರಶಾಂತ್ ಮಯೂರ, “ನಾನು ಅಣ್ಣಾವ್ರ ಅಭಿಮಾನಿ.ಅಣ್ಣಾವ್ರ ಧ್ವನಿಯಿಂದ ಆರಂಭವಾಗಿ ಅಣ್ಣಾವ್ರ ಧ್ವನಿಯಿಂದ ಕಿರುಚಿತ್ರ ಪೂರ್ಣಗೊಳ್ಳಲಿದೆ. ಮಯೂರ ಟಾಕೀಸ್ ವತಿಯಿಂದ ನಿರ್ಮಾಣವಾಗಿರುವ ಎರಡನೇ ಕಿರುಚಿತ್ರವಿದು. ಸ್ನೇಹಿತರೆಲ್ಲಾ ಸೇರಿ ಸೀಮಿತ ಬಜೆಟ್ ನಲ್ಲಿ ಈ ಕಿರುಚಿತ್ರ ಮಾಡಿದ್ದೇವೆ. ಸಿಂಕ್ ಸೌಂಡ್ ನಲ್ಲಿ ಮಾಡಿರುವ ಕಿರುಚಿತ್ರ ಇದು’ ಎಂದರು.
ಈ ಕಿರುಚಿತ್ರವನ್ನು ಯೂಟೂಬ್ ಚಾನೆಲ್ ನಲ್ಲಿ ಪ್ರಕಟಿಸಲಾಗುವುದು, ಕಿರುಚಿತ್ರ ಇಷ್ಟವಾದವರೂ ಕ್ಯೂ ಆರ್ ಕೋಡ್ ಮೂಲಕ ಕನಿಷ್ಠ 20 ರೂಪಾಯಿ ಪಾವತಿಸಬಹುದು. ನಟಿ ಯುಕ್ತ ಪರ್ವಿ, ಶೈಲೇಶ್ ,ಮಧುಸೂದನ್, ಉಗ್ರಂ ಸುರೇಶ್ ಕಿರುಚಿತ್ರದ ಬಗ್ಗೆ ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.