MLA Munirathna Case; ನಿಂದನೆ ತಪ್ಪು, ಕ್ರಮ ಆಗಲಿ: ನಿರ್ಮಲಾನಂದನಾಥ ಶ್ರೀ
ಶಾಸಕ ಮುನಿರತ್ನ ಆಡಿಯೋ ಬಗ್ಗೆ ಪ್ರತಿಕ್ರಿಯೆ; ತಾಯಂದಿರ ನಿಂದನೆ ಸರಿಯಲ್ಲ: ಶ್ರೀಗಳು
Team Udayavani, Sep 18, 2024, 6:40 AM IST
ಬೆಂಗಳೂರು: ವೈರಲ್ ಆಗಿರುವ ಆಡಿಯೋ ಕೇಳಿಸಿಕೊಂಡಿದ್ದೇನೆ. ತಾಯಂದಿರ ಕುರಿತ ಅವಾಚ್ಯ ಮಾತುಗಳಿವೆ. ಇದು ಕೇವಲ ಒಕ್ಕಲಿಗ ಅಥವಾ ದಲಿತ ಸಮುದಾಯದವರ ಬಗ್ಗೆ ಮಾತನಾಡಿದ್ದಾರೆ ಅನ್ನುವುದಲ್ಲ. ಸಮಾಜದ ಪ್ರತಿಯೊಂದು ಜನಾಂಗದವ ರೂ ಮುಖ್ಯ. ಹಾಗಾಗಿ, ಯಾರೇ ಮಾತನಾಡಿದರೂ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದನಾಥ ಸ್ವಾಮೀಜಿ ತಿಳಿಸಿದ್ದಾರೆ.
ಬಿಜೆಪಿ ಶಾಸಕ ಮುನಿರತ್ನ ಅವರ ಜಾತಿ ನಿಂದನೆಯ ಆಡಿಯೋ ವೈರಲ್ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸ್ವಾಮೀಜಿಗಳು, ಈಗಾಗಲೇ ಆಡಿಯೋ ಧ್ವನಿ ಪರೀಕ್ಷೆಗೆ ಕಳಿಸಿಕೊಡಲಾಗಿದೆ ಅಂತ ಗೊತ್ತಾಗಿದೆ. ಅವರು (ಮುನಿರತ್ನ) ಮಾತನಾಡಿದ್ದಾರೋ ಇನ್ನೊಬ್ಬರು ಮಾತನಾಡಿದ್ದಾರೋ ಎಂಬುದು ಗೊತ್ತಾಗುತ್ತದೆ. ಯಾರೇ ಮಾತನಾಡಿದ್ದರೂ ಇಂದಿನ ನಾಗರಿಕ ಸಮಾಜದಲ್ಲಿ ಅದನ್ನು ಒಪ್ಪತಕ್ಕಂತಹ ವಿಚಾರವಲ್ಲ ಎಂದು ಹೇಳಿದ್ದಾರೆ.
ಮಾತನಾಡಿದವರು ಯಾರೇ ಆದರೂ ಸೂಕ್ತವಾಗಿರುವಂತಹ ನಿರ್ಧಾರ ಹಾಗೂ ಕ್ರಮ ತೆಗೆದುಕೊಳ್ಳಬೇಕು. ಈ ರೀತಿ ಮಾತನಾಡಿದವರನ್ನು ಕ್ಷಮಿಸಲು ಸಾಧ್ಯವಿಲ್ಲ. ಅದು ಕೇವಲ ಒಕ್ಕಲಿಗ ಅಥವಾ ದಲಿತ ಸಮುದಾಯಕ್ಕೆ ಮಾತನಾಡಿದ್ದಾರೆ ಅನ್ನುವುದಲ್ಲ. ಒಟ್ಟು ಸಮಾಜದಲ್ಲಿರುವ ಪ್ರತಿಯೊಂದು ಜನಾಂಗದವ ರೂ ಬಹು ಮುಖ್ಯವಾಗಿದ್ದಾರೆ.ಪ್ರತಿಯೊಂದು ಜನಾಂಗವನ್ನೂ ನಮ್ಮ ಸಂವಿಧಾನ ಒಪ್ಪಿಕೊಂಡಿದೆ. ಅದರಲ್ಲೂ ಬಹುಮುಖ್ಯವಾಗಿ ದೇಶದ ಅಸ್ಮಿತೆ ಎಂದರೆ ನಮ್ಮ ತಾಯಂದಿರು. ಅದಕ್ಕೆ ನಮ್ಮ ದೇಶವನ್ನು ಭಾರತ ಮಾತೆ ಎಂದು ಕರೆಯುತ್ತಾರೆ.
ಕ್ಷಮಿಸಲು ಅರ್ಹವಲ್ಲದ ವಿಚಾರ
ರಾಮನಗರದಲ್ಲಿ ಉರಿಗೌಡ-ನಂಜೇಗೌಡ ವಿಚಾರವಾಗಿ ಸಿನಿಮಾ ಮಾಡುತ್ತಿದ್ದ ವಿಚಾರಕ್ಕೆ ಕರೆದು ಮುನಿರತ್ನಗೆ ಬುದ್ಧಿ ಹೇಳಿದ್ದೆ. ಆಗ ಅವರು ಅದನ್ನು ನಿಲ್ಲಿಸಿದ್ದರು. ಈಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಧ್ವನಿ ಮುದ್ರಣದ ವಿಚಾರದಲ್ಲಿ ನಿಜ ಆಯ್ತು ಅಂದರೆ, ಯಾರು ಮಾತನಾಡಿದ್ದಾರೋ ಅವರಿಗೆ ಖಂಡಿತಾ ಕ್ಷಮಿಸಲು ಅರ್ಹವಲ್ಲದಾಗಿರುವಂತಹ ವಿಚಾರ. ಒಕ್ಕಲಿಗ ಸಮುದಾಯ ಅಥವಾ ಇನ್ನೊಂದು ಸಮುದಾಯದ ತಾಯಂದಿರು ಅಂತಲ್ಲ. ಇಡೀ ಸಮಾಜದ ನಮ್ಮ ತಾಯಂದಿರ ಬಗ್ಗೆ ಮಾತನಾಡಿರೋದು ಸರಿಯಲ್ಲ ಎಂದು ಹೇಳಿದರು.
ನಾಗಮಂಗಲ ಗಲಭೆ ನೋವಿನ ಸಂಗತಿ:
ನಾಗಮಂಗಲದಲ್ಲಿ ನಡೆದ ಗಲಭೆ ಕುರಿತು ಮಾತನಾಡಿದ ಶ್ರೀಗ ಳು, ನಾಗಮಂಗಲ ಶಾಂತಿಯಿಂದ ಈಗಾಗಲೇ ಕೂಡಿದೆ. ಇದ್ದಕ್ಕಿದ್ದಂತೆ ಅಂತಹ ಘಟನೆ ನಡೆದಿರುವಂತದ್ದು ನೋವಿನ ಸಂಗತಿ. ಸಾಮಾನ್ಯವಾಗಿ ಹಿಂದೂ, ಮುಸ್ಲಿಂ ಬಾಂಧವರು ಆ ಭಾಗದಲ್ಲಿ ಸೌಹಾರ್ದಯುತವಾಗಿ ಅಣ್ಣ-ತಮ್ಮಂದಿರಂತೆ ಬದುಕುತ್ತಿರುವುದನ್ನು ನಾವು ಕಂಡಿದ್ದೇವೆ. ಆದರೆ, ಈ ಸಂದರ್ಭದಲ್ಲಿ ಏಕಾಯಿತು ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ನಾವೆಲ್ಲರೂ ಒಂದೇ ನಾಡಿನ ಮಕ್ಕಳು. ನಮ್ಮ ಧರ್ಮಗಳು ಬೇರೆಯಾದರೂ ಮನುಷ್ಯತ್ವ ಒಂದೇ ಆಗಿರುವುದರಿಂದ ಸಹಬಾಳ್ವೆಯಿಂದ ಬದುಕೋಣ ಎಂದು ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಸಲಹೆ ನೀಡಿದರು.
ಕೇಳದೇ ಕಮೆಂಟ್ ಮಾಡಲ್ಲ: ಸುಮಲತಾ
ಮುನಿರತ್ನ ಆಡಿಯೋ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ಸುಮಲತಾ ಅವರನ್ನು ಮಾಧ್ಯಮದವರು ಪ್ರಶ್ನಿಸಿದಾಗ, ನಾನು ಕೇಳದೇ ಇರುವುದು ನೋಡದೇ ಇರೋದರ ಬಗ್ಗೆ ಕಮೆಂಟ್ ಮಾಡೋದು ಸರಿ ಇರಲ್ಲ. ಅದರ ಬಗ್ಗೆ ಮಾಹಿತಿ ತಿಳಿದುಕೊಂಡು ಮಾತಾಡುತ್ತೇನೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್ ಅಮಾನತು
Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.