Delhi CM; ಕೇಜ್ರಿವಾಲ್‌ರನ್ನು ಮತ್ತೆ ಸಿಎಂ ಮಾಡುವುದೇ ಗುರಿ: ಆತಿಷಿ

Team Udayavani, Sep 18, 2024, 5:59 AM IST

Delhi CM; Aim to make Kejriwal CM again: Atishi

ಹೊಸದಿಲ್ಲಿ: “ದಿಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಅರವಿಂದ ಕೇಜ್ರಿವಾಲ್‌ ರಾಜೀನಾಮೆ ನೀಡಿರುವುದು ನೋವಿನ ವಿಚಾರ. ಅವರನ್ನು ಮತ್ತೆ ಸಿಎಂ ಹುದ್ದೆಯಲ್ಲಿ ಕೂರಿಸುವುದೇ ನನ್ನ ಗುರಿ’ ಎಂದು ಆಪ್‌ ಶಾಸಕಾಂಗ ಪಕ್ಷದ ನಾಯಕಿ ಆತಿಷಿ ಮರ್ಲೆನಾ ಸಿಂಗ್‌ ಹೇಳಿದ್ದಾರೆ.

ಹೊಸದಿಲ್ಲಿಯಲ್ಲಿ ಮಂಗಳವಾರ ಆಪ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ನಾಯಕಿಯಾಗಿ ಆಯ್ಕೆಯಾದ ಬಳಿಕ ಮಾತನಾಡಿದ ಆತಿಷಿ, ಕೇಜ್ರಿವಾಲ್‌ರನ್ನು “ನನ್ನ ಗುರು’ ಎಂದರಲ್ಲದೇ, “ಕೇಜ್ರಿವಾಲ್‌ ನನ್ನ ಮೇಲೆ ನಂಬಿಕೆ ಇರಿಸಿದ್ದಾರೆ. ಹೀಗಾಗಿಯೇ ನನಗೆ ಮುಖ್ಯಮಂತ್ರಿ ಎಂಬ ದೊಡ್ಡ ಹೊಣೆ ಲಭಿಸಿದೆ. ದಿಲ್ಲಿಗೆ ಇರುವುದು ಏಕೈಕ ಮುಖ್ಯಮಂತ್ರಿ. ಅವರೇ ಕೇಜ್ರಿವಾಲ್‌. ಮುಂದಿನ ವರ್ಷದ ಫೆಬ್ರವರಿಯಲ್ಲಿ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ನಮ್ಮ ನಾಯಕನ ವಿರುದ್ಧ ಬಿಜೆಪಿ ಸಂಚು ರೂಪಿಸಿದೆ. ದಿಲ್ಲಿಯ ಮತದಾರರು ನಿಮ್ಮ ಮಗ, ಸಹೋದರನಾಗಿರುವ ಕೇಜ್ರಿವಾಲ್‌ರನ್ನು ಮುಂದಿನ ಚುನಾವಣೆಯಲ್ಲಿ ಗೆಲ್ಲಿಸಬೇಕು’ ಎಂದು ಮನವಿ ಮಾಡಿದ್ದಾರೆ.

10 ವರ್ಷದ ಬಳಿಕ ದಿಲ್ಲಿಗೆ ಮಹಿಳಾ ಸಿಎಂ

ಸಿಎಂ ಆಗಿ ಆತಿಷಿ ನೇಮಕದ ಮೂಲದ ದಿಲ್ಲಿ ಯಲ್ಲಿ ಬರೋಬ್ಬರಿ 10 ವರ್ಷಗಳ ಬಳಿಕ ಮಹಿಳೆಯೊಬ್ಬರು ಮುಖ್ಯಮಂತ್ರಿ ಸ್ಥಾನ ಅಲಂಕರಿಸಿದಂತಾಗಿದೆ. ಬಿಜೆಪಿಯ ದಿ| ಸುಷ್ಮಾ ಸ್ವರಾಜ್‌, ಕಾಂಗ್ರೆಸ್‌ನ ದಿ| ಶೀಲಾ ದೀಕ್ಷಿತ್‌ ಬಳಿಕ 3ನೇ ಮಹಿಳಾ ಸಿಎಂ ಎಂಬ ಖ್ಯಾತಿಗೆ ಆತಿಶಿ ಪಾತ್ರರಾಗಿದ್ದಾರೆ. ಕಾಲ್ಕಾಜಿ ಕ್ಷೇತ್ರದ ಶಾಸಕಿಯಾಗಿರುವ ಆತಿಶಿ ಅವರು ಕೇಜ್ರಿವಾಲ್‌ರ ನಂಬಿಕಸ್ಥ ನಾಯಕಿ. ಕೇಜ್ರಿವಾಲ್‌ ಜೈಲಲ್ಲಿದ್ದಾಗ ರಾಜ್ಯದ ಅಷ್ಟೂ ಆಡಳಿತ ನಿರ್ವಹಿಸಿದ ಹೆಗ್ಗಳಿಕೆ ಆತಿಷಿಯವರದ್ದು.  ಶಿಕ್ಷಣ, ಲೋಕೋಪಯೋಗಿ, ಸಂಸ್ಕೃತಿ, ಪ್ರವಾಸೋದ್ಯಮ, ಮಹಿಳಾ- ಮಕ್ಕಳ ಕಲ್ಯಾಣ ಸೇರಿ 14 ಖಾತೆಗಳನ್ನು ಅವರು ನಿಭಾಯಿಸಿದ್ದಾರೆ. 1981ರ ಜೂ.8ಕ್ಕೆ ಜನಿಸಿದ ಆತಿಷಿ ದೆಹ ಲಿಯ ಸಂತ ಸ್ಟೀಫ‌ನ್‌ ಕಾಲೇಜಿನಿಂದ ಪದವಿ, ಆಕ್ಸ್‌ಫ‌ರ್ಡ್‌ ವಿವಿಯಿಂದ ಇತಿಹಾ ಸದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ರಾಜಕೀಯ ಪ್ರವೇಶದ ಮೊದಲು ಆಂಧ್ರಪ್ರದೇಶದಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡಿದ್ದರು. 2013ರಲ್ಲಿ ಆಪ್‌ ಸೇರಿದ ಅವರು, 2015ರಲ್ಲಿ ಡಿಸಿಎಂ ಆಗಿದ್ದ ಸಿಸೋಡಿಯಾಗೆ ಸಲಹೆಗಾರ್ತಿಯಾದರು. ತಮ್ಮ ಸಿದ್ಧಾಂತಕ್ಕೆ ಅನುಗುಣವಾಗಿ ಮಾರ್ಕ್ಸ್ ಮತ್ತು ಲೆನಿನ್‌ ಹೆಸರು ಗಳನ್ನು ಸೇರಿಸಿ “ಮರ್ಲೆನಾ’ ಎಂಬುದನ್ನು ತಮ್ಮ ಹೆಸರಿನ ಮುಂದೆ ಸೇರಿಸಿಕೊಂಡಿದ್ದಾರೆ. ದಿಲ್ಲಿಯ ಶಿಕ್ಷಣ ಕಾಯ್ದೆ ರೂಪಿಸುವಲ್ಲಿ ಆತಿಷಿ ಪಾತ್ರ ಮಹತ್ವದ್ದು. ಅವರ ಪತಿ ಪ್ರವೀಣ್‌ ಸಿಂಗ್‌ 2012ರಿಂದ ಆಪ್‌ಗಾಗಿ ಕೆಲಸ ಮಾಡುತ್ತಿದ್ದಾರೆ.

ಆತಿಷಿ ಆಯ್ಕೆ ಏಕೆ?

ಕೇಜ್ರಿ ಬಂಧನದ ಬಳಿಕ ಆಪ್‌ ಸರಕಾರ ಮುನ್ನಡೆಸುವಲ್ಲಿ ಪ್ರಧಾನ ಪಾತ್ರ.

ಏಕೈಕ ಮಹಿಳಾ ಸಚಿವೆ. ಶಿಕ್ಷಣ, ಹಣಕಾಸು,ಲೋಕೋಪಯೋಗಿ ಸೇರಿ 14 ಪ್ರಮುಖ ನಿರ್ವಹಣೆ.

ಸರಕಾರಿ ಶಾಲೆಗಳಲ್ಲಿ ಮೂಲಸೌರ್ಯ ಬಲಪಡಿಸುವಲ್ಲಿ ದೊಡ್ಡ ಕೊಡುಗೆ.

ಲೋಕಸಭೆ ಚುನಾವಣೆ ವೇಳೆ ಪ್ರಚಾರದ ಹೊಣೆ ನಿರ್ವಹಣೆ.

ಹರಿಯಾಣದಿಂದ ನೀರು ಪೂರೈಕೆಗಾಗಿ ಉಪವಾಸ ಸತ್ಯಾಗ್ರಹ ನಡೆಸಿದ್ದ ಖ್ಯಾತಿ

ಉನ್ನತ ಶಿಕ್ಷಣ ಪಡೆದಿರುವ ವಿದ್ಯಾ ವಂತೆ. ನಗರ ಪ್ರದೇಶದವರ, ಮಧ್ಯಮ ವರ್ಗದ ಮತ ಸೆಳೆಯಲು ನೆರವು

ಟಾಪ್ ನ್ಯೂಸ್

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

J-P-Nadda

PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

J-P-Nadda

PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.