Karkala:ಪಶ್ಚಿಮಘಟ್ಟದ ತಪ್ಪಲಿನ ಶಾಲೆಗಳ ಮಕ್ಕಳಲ್ಲಿ ಕಾಡಿನ ಬಗ್ಗೆ ಪ್ರೀತಿ ಮೂಡಿಸುವ ಕಲಾವಿದೆ


Team Udayavani, Sep 18, 2024, 1:29 PM IST

Karkala:ಪಶ್ಚಿಮಘಟ್ಟದ ತಪ್ಪಲಿನ ಶಾಲೆಗಳ ಮಕ್ಕಳಲ್ಲಿ ಕಾಡಿನ ಬಗ್ಗೆ ಪ್ರೀತಿ ಮೂಡಿಸುವ ಕಲಾವಿದೆ

ಕಾರ್ಕಳ: ಪಶ್ಚಿಮ ಘಟ್ಟದ ತಪ್ಪಲಿನ ಮಕ್ಕಳಲ್ಲಿ  ಕಾಡಿನ ಬಗ್ಗೆ ಪ್ರೀತಿ ಉಳಿದರೆ ಮಾತ್ರ ಮುಂದಿನ ದಿನಗಳಲ್ಲಿ  ಅರಣ್ಯ ಉಳಿದೀತು.  ಇದನ್ನು ಮನಗಂಡ ಕಲಾವಿದೆಯೊಬ್ಬರು ಕಾಡಂಚಿನ ಶಾಲೆಗಳ ಮಕ್ಕಳಲ್ಲಿ ಪರಿಸರ ಪ್ರೀತಿ ಹೆಚ್ಚಿಸುವ, ಜಾಗೃತಿ ಮೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ.

ಕಾಪು ಮೂಲದ ಚಿತ್ರ ಕಲಾವಿದೆಯಾಗಿರುವ  ರಕ್ಷಾ ಪೂಜಾರಿ ಪಶ್ಚಿಮ ಘಟ್ಟಗಳ ಸಾಲಿನ ಕುದುರೆಮುಖ ವನ್ಯಜೀವಿ ವಿಭಾಗದ ವ್ಯಾಪ್ತಿಯಲ್ಲಿ ಬರುವ ಹಳ್ಳಿ ವಿದ್ಯಾರ್ಥಿಗಳಿಗೆ ಚಿತ್ರಕಲೆಯ ಮೂಲಕ ಪರಿಸರದ ಪಾಠ ಮಾಡಿ ಜಾಗೃತಿ ಮೂಡಿಸುತ್ತಿದ್ದಾರೆ. ಆಳ್ವಾಸ್‌ ಕಾಲೇಜಿನಲ್ಲಿ ವಿಷ್ಯುವಲ್‌ ಆರ್ಟ್ಸ್ ನಲ್ಲಿ ಪದವಿ ಪಡೆದ ಇವರು ತಮ್ಮ ಕಾಯಕಕ್ಕೆ ಇಟ್ಟಿರುವ ಹೆಸರು: ವನಗಿರಿಯ ರಂಗು!

ಯಾವ್ಯಾವ ಶಾಲೆಯಲ್ಲಿ  ಜಾಗೃತಿ?
ಪಶ್ಚಿಮ ಘಟ್ಟಗಳ ಸಾಲಿನಲ್ಲಿರುವ ಹಿಂದುಳಿದಿರುವ ಶಾಲೆಗಳಿಗೆ ತೆರಳಿ ವಿದ್ಯಾರ್ಥಿಗಳಿಗೆ ಚಿತ್ರ ಕಲೆಗಳಲ್ಲಿ  ಆಸಕ್ತಿ ಮೂಡಿಸುವುದು, ಆ ಮೂಲಕ ಪರಿಸರ ಪಾಠ ಹೇಳಿಕೊಡುವುದು  ಇವರ ಉದ್ದೇಶ. ಕುಂದಾಪುರ ತಾ|ನ ಹಾಲಾಡಿಯ ಕೆಳಸುಂಕ ಶಾಲೆಯಲ್ಲಿ ವನಗಿರಿ ರಂಗು ಕಾರ್ಯಕ್ರಮಕ್ಕೆ ಚಾಲನೆ ಸಿಕ್ಕಿತ್ತು.

ತಪ್ಪಲಿನ ಊರುಗಳಾದ ಅಮಾವಾಸ್ಯೆಬೈಲು, ಹೆಬ್ರಿ, ನಾಡಾ³ಲು, ಮುದ್ರಾಡಿ, ಕಬ್ಬಿನಾಲೆ, ಮುನಿಯಾಲು, ಮುಟ್ಲುಪಾಡಿ, ಅಂಡಾರು, ಕಾರ್ಕಳ ತಾಲೂಕಿನ ಶಿರ್ಲಾಲು, ಅಜೆಕಾರು ಕೆರುವಾಶೆ, ಮಾಳ, ನೂರಾಳಬೆಟ್ಟು, ನಾರಾವಿ, ಹೊಸ್ಮಾರು, ಬೆಳ್ತಂಗಡಿ ತಾಲೂಕಿನ ಅಳದಂಗಡಿ, ಚಿಕ್ಕಮಗಳೂರಿನ ಕುದುರೆಮುಖ, ಕಳಸ, ಜಾಂಬಳೆ, ಸಂಸೆ, ಹೊರನಾಡು, ಶೃಂಗೇರಿ, ಕೊಗ್ರೆ, ಕಿಗ್ಗ, ಶಿವಮೊಗ್ಗ ಜಿಲ್ಲೆಯ ಆಗುಂಬೆ ಹೊಸನಗರ, ತಾಲೂಕಿನ ಭಾಗಗಳಲ್ಲಿ  ಪ್ರಯಾಣಿಸಿ  ಅಲ್ಲಿನ  ಸರಕಾರಿ ಶಾಲೆಗಳಲ್ಲಿ ಚಿತ್ರಕಲೆಯೊಂದಿಗೆ ಪರಿಸರದ ಪಾಠ ಕಲಿಸಲಿದ್ದಾರೆ.

ಮಗಳ ಈ ಕೆಲಸಕ್ಕೆ ತಂದೆ ರಮೇಶ್‌ ಅವರು ಸಹಕಾರ ನೀಡುತ್ತಿದ್ದಾರೆ. ಆಕೆಯ ಕೆಲಸ ಹೆಮ್ಮೆ ತಂದಿದೆ ಎನ್ನುತ್ತಾರೆ ಅವರು.

ಸ್ವಂತ ಹಣದಿಂದಲೇ ಪರಿಕರ ಖರೀದಿ
ರಕ್ಷಾ ಪೂಜಾರಿ ಅವರು  ಬೆಂಗಳೂರು, ಕೋಲ್ಕತ್ತಾ ಸೇರಿದಂತೆ ದೇಶದ ಹಲವೆಡೆ ಕಲಾಕೃತಿಗಳ ಪ್ರದರ್ಶನ ನೀಡಿದ್ದಾರೆ. ವಿವಿಧ ಕಲಾಕೃತಿ  ರಚಿಸಿ ಮಾರಾಟ ಮಾಡುತ್ತಾರೆ. ಆಯಿಲ್‌ ಪೈಂಟಿಂಗ್‌, ವಾಲ್‌ ಮ್ಯೂರಲ್ಸ…, ವಾಲ್‌ ಪೈಂಟಿಂಗ್‌ಗಳಲ್ಲಿ ಅನುಭವಿಗಳು. ಇವರು ವಿದ್ಯಾರ್ಥಿಗಳಿಗೆ ಚಿತ್ರಕಲೆ ಗಳಿಗೆ ಬೇಕಾದ ಪರಿಕರಗಳನ್ನು  ಸ್ವಂತ ಖರ್ಚಿನಿಂದಲೇ ಒದಗಿಸುತ್ತಿದ್ದಾರೆ.

ಚಿತ್ರ, ಫೋಟೊಗಳ ಮೂಲಕ ಜಾಗೃತಿ
ಪ್ರಾಥಮಿಕ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಚಿತ್ರಕಲೆ ಹಾಗೂ ಕಲಾಕೃತಿಗಳನ್ನು ತಯಾರಿಸುವ ಕಾರ್ಯಾಗಾರ ಮಾಡುತ್ತಾರೆ ರಕ್ಷಾ. ಇದು ಮಕ್ಕಳ ಮನೋವಿಕಾಸ, ಕಲ್ಪನಾ ಶಕ್ತಿ ಹೆಚ್ಚಿಸಲು ಸಹಕಾರಿ ಆಗುವುದರ ಜತೆಗೆ ಪರಿಸರದ ಮೇಲೆ ಪ್ರೀತಿಯನ್ನು ಹೊಂದುತ್ತದೆ ಎನ್ನುವುದು ಅವರು ಕಂಡುಕೊಂಡ ಸತ್ಯ.  ಸಾಸ್ತಾನದ ವನ್ಯಜೀವಿ ಛಾಯಾಗ್ರಾಹಕ ಮನೋಜ್‌ ಭಂಡಾರಿ ತೆಗೆದಿರುವ ವಿವಿಧ ಕಾಡು ಪ್ರಾಣಿ ಪಕ್ಷಿಗಳ ಚಿತ್ರಗಳನ್ನೂ ವಿದ್ಯಾರ್ಥಿ ಗಳಿಗೆ ತೋರಿಸಲಾಗುತ್ತಿದೆ.  ಪರಿಸರ ಸಂರಕ್ಷಣೆ ಸಂಬಂಧಿತ  ಪ್ರಬಂಧಗಳನ್ನೂ ಬರೆಸಲಾಗುತ್ತದೆ.

ಹೆತ್ತವರೇ ಸ್ಫೂರ್ತಿ
ಕಲೆಯ ಬಗ್ಗೆ ನನಗೆ ಎಳವೆ ಯಿಂದಲೂ ಆಸಕ್ತಿ. ಹೆತ್ತವರೇ ನನಗೆ ಸ್ಫೂರ್ತಿ. ಸ್ನೇಹಿತರ ಪ್ರೋತ್ಸಾಹದಿಂದ ರಾಜ್ಯ, ರಾಷ್ಟ್ರಮಟ್ಟದಲ್ಲಿ  ಕಲಾ ಪ್ರದರ್ಶನ ನೀಡಲು ಸಾಧ್ಯವಾಗಿದೆ. ರಾಜ್ಯದ 80ಕ್ಕೂ ಹೆಚ್ಚು ಕಡೆ ಸಂಚರಿಸಿ ಶಿಬಿರ ಏರ್ಪಡಿಸಿದ್ದೇನೆ. ಮುಂದೆ ಹಳ್ಳಿಯ ಶಾಲೆಗಳಲ್ಲಿ ಜಾಗೃತಿ ಮೂಡಿಸಿ ವಿಸ್ತರಿಸಲಾಗುವುದು.
-ರಕ್ಷಾ ಪೂಜಾರಿ, ಚಿತ್ರಕಲಾವಿದೆ

– ಬಾಲಕೃಷ್ಣ ಭೀಮಗುಳಿ 

ಟಾಪ್ ನ್ಯೂಸ್

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

Smart water meters revolutionize water conservation

Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್

Viral Pics: ಡೇಟಿಂಗ್‌ ರೂಮರ್ಸ್‌ ನಡುವೆ ವಿಜಯ್‌ – ರಶ್ಮಿಕಾ ಸೀಕ್ರೆಟ್‌ ಲಂಚ್‌ ಡೇಟ್

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

Perth test: Jasprit Bumrah’s bowling style in doubt: What is the controversy?

Perth test: ಜಸ್ಪ್ರೀತ್‌ ಬುಮ್ರಾ ಬೌಲಿಂಗ್‌ ಶೈಲಿ ಅನುಮಾನ: ಏನಿದು ವಿವಾದ?

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura: ರಿಕ್ಷಾದಿಂದ ಬಿದ್ದು ಮಹಿಳೆಗೆ ಗಂಭೀರ ಗಾಯ

Kundapura: ರಿಕ್ಷಾದಿಂದ ಬಿದ್ದು ಮಹಿಳೆಗೆ ಗಂಭೀರ ಗಾಯ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ : ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

Smart water meters revolutionize water conservation

Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್

Viral Pics: ಡೇಟಿಂಗ್‌ ರೂಮರ್ಸ್‌ ನಡುವೆ ವಿಜಯ್‌ – ರಶ್ಮಿಕಾ ಸೀಕ್ರೆಟ್‌ ಲಂಚ್‌ ಡೇಟ್

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.