B. Y. Vijayendra ಒಂದು ದೇಶ, ಒಂದು ಚುನಾವಣೆ ಐತಿಹಾಸಿಕ ತೀರ್ಮಾನ
ದೇಶದ ಹಿತಾಸಕ್ತಿ ದೃಷ್ಟಿಯಿಂದ ಉತ್ತಮ ನಡೆ
Team Udayavani, Sep 18, 2024, 10:55 PM IST
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಒಂದು ದೇಶ, ಒಂದು ಚುನಾವಣೆ ಪ್ರಸ್ತಾವಕ್ಕೆ ಅಂಗೀಕಾರ ನೀಡಿರುವುದು ಐತಿಹಾಸಿಕ ತೀರ್ಮಾನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅಭಿಪ್ರಾಯಪಟ್ಟಿದ್ದಾರೆ.
ದೇಶದ ಹಿತಾಸಕ್ತಿ ದೃಷ್ಟಿಯಿಂದ ಇದು ಮಹತ್ವದ ತೀರ್ಮಾನ. 1951, 1967ರಲ್ಲಿ ಏಕಕಾಲಕ್ಕೆ ಚುನಾವಣೆ ನಡೆದಿತ್ತು. ಕಾನೂನು ಆಯೋಗವು 1999ರ ತನ್ನ 170ನೇ ವರದಿಯಲ್ಲಿ 5 ವರ್ಷಗಳಿಗೆ ಒಮ್ಮೆ ಲೋಕಸಭೆ ಮತ್ತು ಎಲ್ಲ ರಾಜ್ಯಗಳ ವಿಧಾನಸಭೆಗಳಿಗೆ ಚುನಾವಣೆ ನಡೆಸುವ ಕುರಿತು ತಿಳಿಸಿತ್ತು ಎಂದು ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ನೇತೃತ್ವದ ಉನ್ನತ ಮಟ್ಟದ ಸಮಿತಿ ನೀಡಿದ ವರದಿ ಆಧರಿಸಿ ಈ ಕ್ರಮ ತೆಗೆದುಕೊಂಡಿರುವುದು ಶ್ಲಾಘನೀಯ ಎಂದು ಅಭಿಪ್ರಾಯಪಟ್ಟಿದ್ದಾರೆ.
ಮೊದಲ ಹಂತದಲ್ಲಿ ಲೋಕಸಭೆ ಮತ್ತು ಎಲ್ಲ ರಾಜ್ಯಗಳ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವುದು ಮತ್ತು ಈ ಸಾರ್ವತ್ರಿಕ ಚುನಾವಣೆ ನಡೆದ 100 ದಿನಗಳ ಒಳಗೆ ಎರಡನೇ ಹಂತದಲ್ಲಿ ಜಿ. ಪಂ., ತಾ. ಪಂ., ಗ್ರಾ. ಪಂ., ಪುರಸಭೆ ಮತ್ತಿತರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ಉದ್ದೇಶವಿದೆ. ಇದು ಅತ್ಯಂತ ಸ್ವಾಗತಾರ್ಹ ಕ್ರಮ ಎಂದಿ¨ªಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.