Kasaragodu: ಶಿಕ್ಷಕಿ ಆತ್ಮಹತ್ಯೆ: ಪತಿಗೆ 9 ವರ್ಷ, ಅತ್ತೆಗೆ 7 ವರ್ಷ ಕಠಿನ ಜೈಲು ಶಿಕ್ಷೆ
Team Udayavani, Sep 19, 2024, 1:40 AM IST
ಕಾಸರಗೋಡು: ದೈಹಿಕ ಶಿಕ್ಷಣ ಶಿಕ್ಷಕಿ, ರಾಷ್ಟ್ರೀಯ ಕಬಡ್ಡಿ ಪಟು ಮುನ್ನಾಡ್ ನಿವಾಸಿ ಪ್ರೀತಿ (33) ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಪತಿ ವೆಳ್ಳರಿಕುಂಡು ಪೊಲೀಸ್ ಠಾಣೆ ವ್ಯಾಪ್ತಿಯ ರಾಕೇಶ್ ಕೃಷ್ಣನ್(38)ಗೆ 9 ವರ್ಷ ಕಠಿನ ಸಜೆ ಹಾಗೂ 2 ಲಕ್ಷ ರೂ. ದಂಡ, ಪತಿಯ ತಾಯಿ ಶ್ರೀಲತಾಗೆ 7 ವರ್ಷ ಕಠಿನ ಸಜೆ ಹಾಗೂ 2 ಲಕ್ಷ ರೂ. ದಂಡ ವಿಧಿಸಿ ಕಾಸರಗೋಡು ಅಡಿಷನಲ್ ಆ್ಯಂಡ್ ಸೆಶನ್ಸ್ ನ್ಯಾಯಾಲಯ(ಒಂದು) ತೀರ್ಪು ನೀಡಿದೆ.
ದಂಡ ಪಾವತಿಸದಿದ್ದಲ್ಲಿ ಇಬ್ಬರೂ 8 ತಿಂಗಳು ಹೆಚ್ಚುವರಿ ಸಜೆ ಅನುಭವಿಸುವಂತೆ ತೀರ್ಪಿನಲ್ಲಿ ತಿಳಿಸಿದೆ. 2017 ಆ.18ರಂದು ಪತಿ ಮತ್ತು ಅತ್ತೆಯ ನಿರಂತರ ಹಿಂಸೆಯಿಂದ ಪ್ರೀತಿ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಬೇಡಗ ಪೊಲೀಸರು ಪ್ರಕರಣ ದಾಖಲಿಸಿದ್ದರು. ಇನ್ನೋರ್ವ ಆರೋಪಿ, ಪತಿಯ ತಂದೆ ರಮೇಶನ್ ವಿಚಾರಣೆ ಸಂದರ್ಭದಲ್ಲಿ ನಿಧನ ಹೊಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.