Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ
Team Udayavani, Sep 19, 2024, 8:17 AM IST
ಹೊಸದಿಲ್ಲಿ: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 5 ಗ್ಯಾರಂಟಿಗಳನ್ನು ನೀಡಿದ್ದ ಕಾಂಗ್ರೆಸ್ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ 7 ಗ್ಯಾರಂಟಿಗಳನ್ನು ನೀಡಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೊಸದಿಲ್ಲಿಯಲ್ಲಿ ಬುಧವಾರ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದರು.
ಈ ಬಾರಿ ಗೆದ್ದರೆ ರಾಜ್ಯದಲ್ಲಿ ಜಾತಿ ಗಣತಿ ನಡೆಸುವುದಾಗಿ ವಾಗ್ಧಾನ ಮಾಡಿದೆ. 18-60 ವರ್ಷ ವಯಸ್ಸಿನ ಮಹಿಳೆಯರಿಗೆ ಮಾಸಿಕ 2,000 ರೂ.ಗಳ ನೆರವು ನೀಡುವುದಾಗಿಯೂ ಘೋಷಿಸಲಾಗಿದೆ. 500 ರೂ.ಗೆ ಎಲ್ಪಿಜಿ ಸಿಲಿಂಡರ್, ವೃದ್ಧರು, ವಿಧವೆಯರು ಮತ್ತು ಅಂಗವಿಕಲರಿಗೆ 6,000 ರೂ.ಗಳ ಪಿಂಚಣಿ ಮತ್ತು ಸರಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆಯನ್ನು ಜಾರಿ, 300 ಯೂನಿಟ್ ಉಚಿತ ವಿದ್ಯುತ್ ಮತ್ತು 25 ಲಕ್ಷ ರೂ.ಗಳವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆಯ ಭರವಸೆಯನ್ನು ಕಾಂಗ್ರೆಸ್ ನೀಡಿದೆ.
ಬಳಿಕ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ “ನಾವು 7 ಭರವಸೆಗಳನ್ನು ನೀಡುತ್ತಿದ್ದು, ಅವುಗಳನ್ನು ಈಡೇರಿಸುತ್ತೇವೆ. ಅಲ್ಲದೆ, ಇನ್ನೂ ಅನೇಕ ಭರವಸೆಗಳನ್ನು ನೀಡಲಿದ್ದೇವೆ.
ಚಂಡೀಗಢದಲ್ಲಿ ಬಿಡುಗಡೆಯಾಗಲಿರುವ 53 ಪುಟಗಳ ಪ್ರಣಾಳಿಕೆಯಲ್ಲಿ ಅವುಗಳನ್ನು ಘೋಷಿಸಲಾಗುವುದು’ ಎಂದರು. ಅ.5ರಂದು ಹರಿಯಾಣ ಚುನಾವಣೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.