Bengaluru: ಮೆಜೆಸ್ಟಿಕ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು
Team Udayavani, Sep 19, 2024, 11:23 AM IST
ಬೆಂಗಳೂರು: ಮೆಜೆಸ್ಟಿಕ್ ಬಳಿಯ ಅಮರ್ ಜಂಕ್ಷನ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ದಿವ್ಯಾಂಗ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉಪ್ಪಾರಪೇಟೆ ಸಂಚಾರ ಠಾಣೆ ವ್ಯಾಪ್ತಿ ಯಲ್ಲಿ ನಡೆದಿದೆ.
ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಮೃತರಿಗೆ 40 ರಿಂದ 45 ವರ್ಷ ಇರಬಹುದು ಎಂದು ಅಂದಾಜಿಸಲಾಗಿದೆ. ಮಂಗಳವಾರ ರಾತ್ರಿ 11.30ರ ಸುಮಾರಿಗೆ ವ್ಯಕ್ತಿಯೊಬ್ಬರು ಸರ್ವೀಸ್ ರಸ್ತೆ ಬಳಿ ನಡೆದುಕೊಂಡು ಹೋಗುತ್ತಿದ್ದರು. ಅದೇ ವೇಳೆ ಅತೀ ವೇಗವಾಗಿ ಬಂದ ಯಶವಂತಪುರ ಡಿಪೋಗೆ ಸೇರಿದ ಬಸ್, ಅಂಗವಿಕಲ ವ್ಯಕ್ತಿಗೆ ಡಿಕ್ಕಿ ಹೊಡೆದಿದ್ದು, ಬಸ್‌ನ ಚಕ್ರಗಳು ಆತನ ತಲೆ ಮತ್ತು ದೇಹದ ಮೇಲೆ ಹರಿದ ಪರಿಣಾಮ ಆತ ಸ್ಥಳದದಲ್ಲೇ ಮೃತಪಟ್ಟಿದ್ದಾನೆ. ಮೃತ ವ್ಯಕ್ತಿ ಅಂಗವಿಕಲರಾಗಿದ್ದರು. ಮೃತದೇಹವನ್ನು ಶವಾಗಾರದಲ್ಲಿ ಇಡಲಾಗಿದೆ. ಅವರ ಕುಟುಂಬಸ್ಥರನ್ನು ಪತ್ತೆ ಮಾಡಲಾಗುತ್ತಿದೆ. ಕೃತ್ಯವೆಸಗಿದ ಬಸ್ ಚಾಲಕ ಗೋಪಾಲ್‌ನನ್ನು ವಶಕ್ಕೆ ಪಡೆಯಲಾಗಿದೆ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದರು. ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಡಿಕ್ಕಿ ಹೊಡೆದರೂ ಬಸ್ ನಿಲ್ಲಿಸದ ಚಾಲಕ:
ಘಟನೆ ಸಂಬಂಧ ಬಸ್‌ನ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಚಾಲಕ ಮತ್ತು ನಿರ್ವಾಹಕನಿಗೆ ನಿಂದಿಸಿದ್ದಾರೆ. ಅಂಗವಿಕಲ ವ್ಯಕ್ತಿ ನಡೆದುಕೊಂಡು ಹೋಗುತ್ತಿದ್ದರು. ಆದರೆ, ಚಾಲಕ ವೇಗವಾಗಿ ಬಸ್ ಚಲಾಯಿಸಿದ್ದರಿಂದ ಅಪಘಾತ ಸಂಭವಿಸಿದೆ. ವ್ಯಕ್ತಿಗೆ ಬಸ್ ಡಿಕ್ಕಿಯಾದರೂ ಬಸ್ ಅನ್ನು ನಿಲುಗಡೆ ಮಾಡಲಿಲ್ಲ. ಪ್ರಯಾಣಿಕರು ಕಿರುಚಾಟ ನಡೆಸಿದ ಮೇಲೆ ಬಸ್ ನಿಲುಗಡೆ ಮಾಡಲಾಯಿತು ಎಂದು ಪ್ರಯಾಣಿಕರು ಅಸಮಾಧಾನ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ!
Bengaluru: ಇವಿ ಬೈಕ್ ಶೋರೂಮ್ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್ ಬಂಧನ, ಬಿಡುಗಡೆ
Bengaluru: ನಗರದಲ್ಲಿ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ತಯಾರಿಕಾ ಘಟಕ ಬಂದ್
Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ
Arrested: ನಕಲಿ ದಾಖಲೆ ನೀಡಿ ಟಿಡಿಎಸ್ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ
MUST WATCH
ಹೊಸ ಸೇರ್ಪಡೆ
Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ
New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ
Yasin Malik ವಿಚಾರಣೆಗೆ ತಿಹಾರ್ ಜೈಲಿನಲ್ಲೇ ಕೋರ್ಟ್ ರೂಂ: ಸುಪ್ರೀಂ
General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ
Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.