Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
Team Udayavani, Sep 19, 2024, 3:03 PM IST
ಚೆನ್ನೈ: ರಸ್ತೆ ಬದಿಯಲ್ಲಿ ಪತ್ತೆಯಾದ ಸೂಟ್ಕೇಸ್ನಲ್ಲಿ ಮಹಿಳೆಯ ತುಂಡರಿಸಿದ ದೇಹದ ಭಾಗಗಳು ಪತ್ತೆಯಾಗಿರುವ ಘಟನೆ ಚೆನ್ನೈ ತೊರೈಪಾಕ್ಕಂನಲ್ಲಿ ಗುರುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.
ಮೃತ ಮಹಿಳೆಯನ್ನು ಮಾಧವರಂ ಮೂಲದ ದೀಪಾ ಎಂದು ಗುರುತಿಸಲಾಗಿದೆ. ಘಟನೆಗೆ ಸಂಬಂಧಿಸಿ ತೊರೈಪಾಕ್ಕಂ ಪೊಲೀಸರು ಓರ್ವನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಏನಿದು ಪ್ರಕರಣ:
ಚೆನ್ನೈ ನ ಐಟಿ ಕಾರಿಡಾರ್ ಬಳಿ ಇಂದು (ಗುರುವಾರ) ಬೆಳಿಗ್ಗೆ ಸುಮಾರು ಏಳು ಗಂಟೆಯ ಸುಮಾರಿಗೆ ವಾಕಿಂಗ್ ಹೋಗುವವರಿಗೆ ದುರ್ನಾತ ಬಂದಿದೆ ಈ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿದ ವೇಳೆ ರಸ್ತೆ ಬದಿಯಲ್ಲಿ ಸೂಟ್ಕೇಸ್ ಒಂದು ಪತ್ತೆಯಾಗಿದೆ ಇದನ್ನು ಗಮನಿಸಿದ ಸ್ಥಳೀಯರು ಸೂಟ್ಕೇಸ್ ಓಪನ್ ಮಾಡಿದ್ದಾರೆ ಈ ವೇಳೆ ಅದರಲ್ಲಿ ಮಹಿಳೆಯೊಬ್ಬರ ತುಂಡರಿಸಿದ್ದ ದೇಹ ಪತ್ತೆಯಾಗಿದೆ ಗಾಬರಿಗೊಂಡ ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ, ಕೂಡಲೇ ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರು ಸೂಟ್ಕೇಸ್ ನಲ್ಲಿದ್ದ ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಲು ಆಸ್ಪತ್ರೆಗೆ ಸಾಗಿಸಿದ್ದಾರೆ.
ಘಟನೆಗೆ ಸಂಬಂಧಿಸಿ ಸೂಟ್ಕೇಸ್ ಪತ್ತೆಯಾದ ಪ್ರದೇಶದ ಸುತ್ತ ಮುತ್ತಲಿನ ಸಿಸಿ ಟಿವಿ ಪರಿಶೀಲನೆ ನಡೆಸಿದ ವೇಳೆ ಅದೇ ಪ್ರದೇಶದ ನಿವಾಸಿಯಾಗಿರುವ ಮಣಿಕಂದನ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಇತ್ತ ಮಾಧವರಂ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರು ಕಳೆದ ಮೂರೂ ದಿನಗಳಿಂದ ನಾಪತ್ತೆಯಾಗಿರುವುದಾಗಿ ಮಹಿಳೆಯ ಸಹೋದರ ದೂರು ನೀಡಿದ್ದು ಇದೀಗ ಅದೇ ಮಹಿಳೆ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ.
ಪ್ರಾಥಮಿಕ ಮಾಹಿತಿ ಪ್ರಕಾರ ಹಣದ ವಿಚಾರಕ್ಕೆ ಮಣಿಕಂದನ್, ದೀಪಾ ಅವರನ್ನು ಕೊಲೆಗೈದು ಬಳಿಕ ದೇಹವನ್ನು ತುಂಡರಿಸಿ ಸೂಟ್ಕೇಸ್ನಲ್ಲಿ ತುಂಬಿಸಿ ಬೆಳ್ಳಂಬೆಳಗ್ಗೆ ರಸ್ತೆಯ ಬದಿ ಎಸೆದು ಹೋಗಿದ್ದಾನೆ ಎನ್ನಲಾಗಿದೆ. ಪೊಲೀಸರು ಇನ್ನು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಇದನ್ನೂ ಓದಿ: Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.