By Election: ದ. ಕನ್ನಡ ಸ್ಥಳೀಯ ಸಂಸ್ಥೆಗಳ ಪರಿಷತ್ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ
Team Udayavani, Sep 19, 2024, 4:36 PM IST
ಉಡುಪಿ: ಸಂಸದ ಕೋಟ ಶ್ರೀನಿವಾಸ್ ಪೂಜಾರಿ (Kota Shrinivas Poojary) ಅವರಿಂದ ತೆರವಾದ ವಿಧಾನ ಪರಿಷತ್ತಿನ ಉಪಚುನಾವಣೆಗೆ ದಿನಾಂಕ ಘೋಷಣೆ ಮಾಡಲಾಗಿದೆ. ಭಾರತೀಯ ಚುನಾವಣಾ ಆಯೋಗವು ಸೆ.19ರಂದು ಚುನಾವಣೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ.
ವಿಧಾನ ಪರಿಷತ್ತಿನ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ಅಕ್ಟೋಬರ್ 21ರಂದು ಮತದಾನ ನಡೆಯಲಿದೆ ಎಂದು ಘೋಷಿಸಿದೆ.
ಈ ಕ್ಷೇತ್ರದಿಂದ ಪರಿಷತ್ ಸದಸ್ಯರಾಗಿದ್ದ ಕೋಟ ಶ್ರೀನಿವಾಸ್ ಪೂಜಾರಿ ಅವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸಿ ಆಯ್ಕೆಯಾಗಿದ್ದರು. ಹೀಗಾಗಿ ಈ ಕ್ಷೇತ್ರದಲ್ಲಿ ಮತ್ತೆ ಚುನಾವಣೆ ನಡೆಯಲಿದೆ.
ನಾಮಪತ್ರ ಸಲ್ಲಿಕೆಗೆ ಅ.3 ಕೊನೆಯ ದಿನಾಂಕವಾಗಿದ್ದು, ಅ.21ರಂದು ಮತದಾನ ನಡೆಯಲಿದೆ. ಅ.21ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಅ.24ರಂದು ಮತ ಎಣಿಕೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
MUST WATCH
ಹೊಸ ಸೇರ್ಪಡೆ
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.