Sep.20: ಮುನಿಯಾಲ್ ಇನ್ಸ್ಟಿಟ್ಯೂಟ್ ಆಫ್ ಆಯುರ್ವೇದ ಮೆಡಿಕಲ್ ಕಾಲೇಜು ಘಟಿಕೋತ್ಸವ
Team Udayavani, Sep 19, 2024, 4:50 PM IST
ಮಣಿಪಾಲ: ಮಣಿಪಾಲದ ಮುನಿಯಾಲ್ ಇನ್ಸ್ಟಿಟ್ಯೂಟ್ ಆಫ್ ಆಯುರ್ವೇದ ಮೆಡಿಕಲ್ ಸೈನ್ಸಸ್ ಕಾಲೇಜಿನಲ್ಲಿ ಶುಕ್ರವಾರ (ಸೆ.20) ದಂದು ಘಟಿಕೋತ್ಸವ ಸಮಾರಂಭ, ವಾರ್ಷಿಕ ದಿನಾಚರಣೆ, ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭವು ಜರುಗಲಿದೆ.
ಬೆಳಗ್ಗೆ 9.30ಕ್ಕೆ ವಿಧ್ಯಾರ್ಥಿ ಸಂಘದ ಉಧ್ಘಾಟನಾ ಸಮಾರಂಭವು ಉಡುಪಿಯ ಶ್ರೀಮತಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ನಡೆಯಲಿದೆ. ಮುಖ್ಯ ಅಥಿತಿಯಾಗಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಹಾಗೂ ವಕೀಲರಾದ ಮತ್ತರ್ ರತ್ನಾಕರ ಹೆಗ್ಡೆ ಭಾಗವಹಿಸಲಿದ್ದಾರೆ. ಈ ಸಂದರ್ಭ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಲಿದೆ.
ಮಧ್ಯಾಹ್ನ 2.30ಕ್ಕೆ ಘಟಿಕೋತ್ಸವ ಸಮಾರಂಭ ಹಾಗೂ ವಾರ್ಷಿಕ ದಿನಾಚರಣೆ ನಡೆಯಲಿದ್ದು, ಮುಖ್ಯ ಅಥಿತಿಯಾಗಿ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ, ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವ
ಪಾಲ್ಗೊಳ್ಳಲಿದ್ದಾರೆ. ಈ ಸಂದರ್ಭ ವಾರ್ಷಿಕ ವರದಿ ಮಂಡನೆ, ಘಟಿಕೋತ್ಸವ ಸಮಾರಂಭ ನಡೆಯಲಿದೆ. ನಂತರ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.