Kinnigoli: ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ,ಜೂನಿಯರ್ ಇಂಜಿನಿಯರ್ ಲೋಕಾಯಕ್ತ ಬಲೆಗೆ
Team Udayavani, Sep 19, 2024, 8:14 PM IST
ಕಿನ್ನಿಗೋಳಿ: ಕಿನ್ನಿಗೋಳಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಹಾಗೂ ಜೂನಿಯರ್ ಇಂಜಿನಿಯರ್ ಕಾಮಗಾರಿಯೊಂದಕ್ಕೆ ಸಂಬಂಧಿಸಿ ಲಂಚ ಸ್ವೀಕರಿಸುವ ಸಂದರ್ಭ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಗುರುವಾರ (ಸೆ19) ಸಂಜೆ ನಡೆದಿದೆ.
ಪಿಡಬ್ಲ್ಯೂಡಿ ಕಾಸ್ಟ್-1 ಗುತ್ತಿಗೆದಾರರೊಬ್ಬರು 15ನೇ ಹಣಕಾಸು ಯೋಜನೆಯಲ್ಲಿ ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಎಸ್ ಕೋಡಿ ಸರಕಾರಿ ಕೆರೆ ಅಭಿವೃದ್ಧಿಪಡಿಸುವ ಕಾಮಗಾರಿ ಗುತ್ತಿಗೆ ಕೆಲಸವನ್ನು ನಿರ್ವಹಿಸಿದ್ದು, ಕಾಮಗಾರಿಯ 9,77,154 ರೂ.ಮೊತ್ತದ ಬಿಲ್ ಮಂಜೂರಾತಿಯ ಬಗ್ಗೆ ಕಿನ್ನಿಗೋಳಿ ಪಟ್ಟಣ ಪಂಚಾಯತ್ನ ಜೂನಿಯರ್ ಇಂಜಿನಿಯರ್ ನಾಗರಾಜು ಅವರಲ್ಲಿ ವಿಚಾರಿಸಿದಾಗ ಬಿಲ್ ಪಾಸ್ ಮಾಡಲು 37,000 ರೂ. ಲಂಚವನ್ನು ನೀಡುವಂತೆ ಮತ್ತು ಕಿನ್ನಿಗೊಳಿ ಪಟ್ಟಣ ಪಂಚಾಯತ್ನ ಮುಖ್ಯಾಧಿಕಾರಿಯವರಿಗೆ 15,000 ರೂ. ಲಂಚವನ್ನು ನೀಡಬೇಕೆಂದು ಬೇಡಿಕೆ ಇಟ್ಟಿದ್ದರು. ಜೂನಿಯರ್ ಇಂಜಿನಿಯರ್ ನಾಗರಾಜು ಮುಂಚಿತವಾಗಿ ರೂ 7000 ರೂ. ಹಣವನ್ನು ಪಡೆದಿದ್ದರು.
ಗುರುವಾರ ಕಿನ್ನಿಗೊಳಿ ಪಟ್ಟಣ ಪಂಚಾಯತ್ನ ಜೂನಿಯರ್ ಇಂಜಿನಿಯರ್ ನಾಗರಾಜು 30,000 ರೂ. ಮತ್ತು ಕಿನ್ನಿಗೋಳಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ 15,000 ರೂ. ಲಂಚದ ಹಣವನ್ನು ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎ ನಟರಾಜ ಮಾರ್ಗದರ್ಶನದಲ್ಲಿ, ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರಾದ ಡಾ|ಗಾನ ಪಿ ಕುಮಾರ್, ಪೊಲೀಸ್ ನಿರೀಕ್ಷಕ ಅಮಾನುಲ್ಲಾ.ಎ, ಸುರೇಶ್ ಕುಮಾರ್ ಪಿ, ಚಂದ್ರಶೇಖರ್ ಕೆ.ಎನ್, ಚಂದ್ರಶೇಖರ್ ಸಿ.ಎಲ್ ಮತ್ತು ಸಿಬಂದಿ ಟ್ರ್ಯಾಪ್ ಕಾರ್ಯಾಚರಣೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.