Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ
Team Udayavani, Sep 19, 2024, 9:12 PM IST
ಮಂಗಳೂರು: ಚೈಲ್ಡ್ ಹೆಲ್ಪ್ ಲೈನ್‍ಗೆ ಸಾರ್ವಜನಿಕರಿಂದ ಬಂದ ದೂರಿನನ್ವಯ ಗುರುವಾರ(ಸೆ19) ಜಿಲ್ಲಾ ಮಟ್ಟದ ಟಾಸ್ಕ್ ಪೋರ್ಸ್ ಸಮಿತಿ ಸದಸ್ಯರು ಮಂಗಳೂರಿನ ಬಂದರಿನಲ್ಲಿ (ದಕ್ಕೆ) ಅನೀರೀಕ್ಷಿತ ತಪಾಸಣೆ ನಡೆಸಿದ ಸಂದರ್ಭದಲ್ಲಿ ಇಬ್ಬರು ಬಾಲ ಕಾರ್ಮಿಕರು ಪತ್ತೆಯಾಗಿದ್ದಾರೆ. ಇವರನ್ನು ಪುನರ್ವಸತಿಗಾಗಿ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರು ಪಡಿಸಲಾಗಿದೆ.
ಹಠಾತ್ ಕಾರ್ಯಾಚರಣೆಯಲ್ಲಿ ಕಾರ್ಮಿಕ ಇಲಾಖೆ, ಕೃಷಿ ಇಲಾಖೆ, ಶಿಕ್ಷಣ ಇಲಾಖೆ, ರೇಷ್ಮೆ ಇಲಾಖೆ, ಪೊಲೀಸ್ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಚೈಲ್ಡ್ ಹೆಲ್ಪ್ ಲೈನ್ ಹಾಗೂ ಇತರೆ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.
ಬಾಲಕಾರ್ಮಿಕ ಪದ್ಧತಿ ಒಂದು ಸಾಮಾಜಿಕ ಅನಿಷ್ಟ ಪಿಡುಗು ಆಗಿದ್ದು, 14 ವರ್ಷದೊಳಗಿನ ಬಾಲ್ಯಾವಸ್ಥೆ ಕಾರ್ಮಿಕರನ್ನು ಯಾವುದೇ ಸಂಸ್ಥೆಯಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. 15 ವರ್ಷದಿಂದ 18 ವರ್ಷದೊಳಗಿನ ಕಿಶೋರಾವಸ್ಥೆಯ ಕಾರ್ಮಿಕರನ್ನು ಅಪಾಯಕಾರಿ ಅಲ್ಲದ ಸಂಸ್ಥೆಯಲ್ಲಿ ದುಡಿಯುದನ್ನು ನಿಯಂತ್ರಿಸಲಾಗಿದ್ದು, ಅಪಾಯಕಾರಿ ಉದ್ದಿಮೆಗಳಲ್ಲಿ ದುಡಿಸಿಕೊಳ್ಳುವುದನ್ನು ನಿಷೇಧಿಸಲಾಗಿದೆ.
ಕಾಯ್ದೆಯನ್ನು ಉಲ್ಲಂಘಿಸಿದ ಮಾಲಕರಿಗೆ ರೂ.50,000ರೂ. ವರೆಗೆ ದಂಡ ಹಾಗೂ 2 ವರ್ಷದವರೆಗೆ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ. ತಪ್ಪಿತಸ್ಥ ಮಾಲಕರ ಮೇಲೆ ಪೊಲೀಸ್ ಇಲಾಖೆಯಿಂದ ಎಫ್.ಐ.ಆರ್ ದಾಖಲಿಸಲಾಗುತ್ತದೆ ಎಂದು ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.