Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!
ಶೀಘ್ರ 21 ವಿಮಾನ ನಿಲ್ದಾಣಗಳಲ್ಲಿ ಹೊಸ ವ್ಯವಸ್ಥೆ ; ಪ್ರಕ್ರಿಯೆಯೇನು?
Team Udayavani, Sep 20, 2024, 6:55 AM IST
ಹೊಸದಿಲ್ಲಿ: ಇನ್ನು ಬೆಂಗಳೂರು ವಿಮಾನ ನಿಲ್ದಾಣಕ್ಕೆ ವಿದೇಶಗಳಿಂದ ಬರುವವರಿಗೆ ವಲಸೆ ಪ್ರಕ್ರಿಯೆ ಚಿಟಿಕೆ ಹೊಡೆಯುವಷ್ಟರಲ್ಲಿ ಮುಗಿಯಲಿದೆ. ಹೀಗಾಗಿ, ಈಗಿನ 30 ನಿಮಿಷಕ್ಕಿಂತ ಹೆಚ್ಚು ಬೇಕಾಗಿರುವ ಕಾಲಾವಧಿ ಭಾರೀ ಪ್ರಮಾಣದಲ್ಲಿ ಕಡಿಮೆಯಾಗಲಿದೆ. “ಫಾಸ್ಟ್ ಟ್ರ್ಯಾಕ್ ಇಮಿಗ್ರೇಶನ್ ಟ್ರಸ್ಟೆಡ್ ಟ್ರಾವೆಲರ್ ಪ್ರೊಗ್ರಾಂ(ಎಫ್ಟಿಐ- ಟಿಟಿಪಿ) ಯೋಜನೆಯ ಅನ್ವಯ ಹೊಸ ವ್ಯವಸ್ಥೆ ಜಾರಿಯಾಗಲಿದೆ.
ಸದ್ಯ ಹೊಸದಿಲ್ಲಿ ವಿಮಾನ ನಿಲ್ದಾಣ ದಲ್ಲಿ ಇದನ್ನು ಅಳವಡಿಸಲಾಗಿದೆ. ಬೆಂಗ ಳೂರು, ಮುಂಬಯಿ, ಚೆನ್ನೈ,ಕೋಲ್ಕತಾ, ಹೈದರಾಬಾದ್, ಕೊಚ್ಚಿ, ಅಹ್ಮದಾಬಾ ದ್‑ ವಿಮಾನ ನಿಲ್ದಾಣಗಳಲ್ಲಿ ಅದನ್ನು ಅಳವಡಿಸಲು ಸಿದ್ಧತೆ ನಡೆದಿವೆ. ಅದರ ಜತೆಗೆ ಇನ್ನೂ 21 ವಿಮಾನ ನಿಲ್ದಾಣಗಳಲ್ಲಿ ಈ ವ್ಯವಸ್ಥೆ ಲಭ್ಯವಾಗಲಿದೆ.
ಪ್ರಕ್ರಿಯೆಯೇನು?
ಎಫ್ಟಿಐ-ಟಿಟಿಪಿಯನ್ನು ವಲಸೆ ಬ್ಯೂರೋ ಮೂಲಕ ಜಾರಿಗೊಳಿಸ ಲಾಗುತ್ತದೆ. ಅದಕ್ಕಾಗಿ www.ftittp.mha.gov.in ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕು. ಜತೆಗೆ ಬೇಕಾಗಿರುವ ವಿವರಗಳನ್ನೂ ನೀಡಬೇಕು. ಅದನ್ನು ವಲಸೆ ಇಲಾಖೆ ಖಚಿತಪಡಿಸಿದ ಬಳಿಕ ಅವರಿಗೆ ಈ ಸೌಲಭ್ಯ ಸಿಗಲಿದೆ. ಆನ್‌ಲೈನ್ ಮೂಲಕ ನೋಂದಣಿ ಮಾಡಿಸಿಕೊಂಡ ಪ್ರಯಾಣಿಕರು ಇ- ಗೇಟ್ ಸಮೀಪ ಬಂದಾಗ ವಿಮಾನಯಾನ ಕಂಪೆನಿಯಿಂದ ನೀಡಲಾಗಿರುವ ಬೋರ್ಡಿಂಗ್ ಪಾಸ್ ಅನ್ನು ಸ್ಕ್ಯಾನ್ ಮಾಡಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maha Election; ಕಾಂಗ್ರೆಸ್ ಸಂವಿಧಾನ ಬದಲಾಯಿಸಿ ನಮ್ಮನ್ನು ದೂರುತ್ತಿದೆ: ನಿತಿನ್ ಗಡ್ಕರಿ
Final Verdict: ಬುಲ್ಡೋಜರ್ ನ್ಯಾಯ ಒಪ್ಪಲು ಅಸಾಧ್ಯ: ಸಿಜೆಐ ಚಂದ್ರಚೂಡ್ ಅಂತಿಮ ತೀರ್ಪು
ISRO; ಶೀಘ್ರ ದೇಸಿ ನ್ಯಾವಿಗೇಶನ್ ವ್ಯವಸ್ಥೆ ಜಾರಿ
Congress guarantees; ಕರ್ನಾಟಕಕ್ಕೆ ಬಂದು ಯಶಸ್ಸು ನೋಡಿ: ಮಹಾ ಬಿಜೆಪಿಗೆ ಡಿಕೆಶಿ ಚಾಟಿ
Kejriwal ಮನೆಯಲ್ಲಿ 100 ಎಸಿ, 73 ಲಕ್ಷದ ಟಿವಿ: ಬಿಜೆಪಿ ಟೀಕೆ
MUST WATCH
ಹೊಸ ಸೇರ್ಪಡೆ
Gangavathi: ಆನೆಗೊಂದಿ ರಾಜವಂಶಸ್ಥ ಎಸ್.ಆರ್.ಕೆ. ರಾಜಬಹಾದ್ದೂರ್ ನಿಧನ
Belagavi: ಮರಾಠ ರೆಜಿಮೆಂಟ್‌ನಲ್ಲಿ ನೇಮಕಾತಿ ರಾಲಿ; ಯುವಕರಿಂದ ನೂಕುನುಗ್ಗಲು, ತಳ್ಳಾಟ
BMTC Bus: ಎಲ್ಲ ಬಿಎಂಟಿಸಿ ಬಸ್ಸಲ್ಲೂ ಸಿಗ್ತಿಲ್ಲ ಯುಪಿಐ ಟಿಕೆಟ್
Bellary: ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
Jnanpith Award: ಭೃಂಗದ ಬೆನ್ನೇರಿ ಬಂತು ಜ್ಞಾನಪೀಠ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.