ಕರ್ನಾಟಕಕ್ಕೆ ಬೇಕಿದೆ ಕೇರಳ ಮಾದರಿ ಶಿಕ್ಷಣ: ಶಾಸಕ ಹಿಟ್ನಾಳ
Team Udayavani, Sep 20, 2024, 2:17 PM IST
ಉದಯವಾಣಿ ಸಮಾಚಾರ
ಕೊಪ್ಪಳ : ಕೇರಳ ಮಾದರಿಯ ಶಿಕ್ಷಣವೂ ರಾಜ್ಯದಲ್ಲಿಯೂ ದೊರೆಯಬೇಕಿದೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದರು.
ನಗರದಲ್ಲಿ ಕೊಪ್ಪಳ ತಾಲೂಕು ಅನುದಾನ ರಹಿತ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟ (ಕುಸ್ಮಾ)ದಿಂದ ನಡೆದ ಶಿಕ್ಷಕರ ದಿನಾಚರಣೆ, ಉತ್ತಮ ಶಿಕ್ಷಕರ ಪ್ರಶಸ್ತಿ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಹಳೆ ಮೈಸೂರು, ದಕ್ಷಿಣ ಕರ್ನಾಟಕದ ಜಿಲ್ಲೆಗಳಿಗೆ ಹೋಲಿಸಿದರೆ ನಮ್ಮ ಭಾಗ ಶೈಕ್ಷಣಿಕವಾಗಿ ಹಿಂದುಳಿದಿದೆ. ಸರ್ಕಾರ
ಶಾಲೆಗಳಿಗೆ ಸಾಕಷ್ಟು ಸೌಲಭ್ಯ ಒದಗಿಸಿದರೂ ಶೈಕ್ಷಣಿಕ ಪ್ರಗತಿ ಕಂಡುಬರುತ್ತಿಲ್ಲ. ಇದು ಬದಲಾಗಬೇಕಿದೆ. ಅನುದಾನ ರಹಿತ ಶಾಲೆಗಳಿಗೆ ಸವಲತ್ತು ಕೊಡಿಸುವ ಕುರಿತು ಕಲ್ಯಾಣ ಕರ್ನಾಟಕ ಮಂಡಳಿಯಲ್ಲಿ ಚರ್ಚೆಮಾಡಿದ್ದೇವೆ.
ಪ್ರಾಥಮಿಕ ಹಂತದಲ್ಲಿಯೇ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡುವಂತಾಗಬೇಕು. ಮಕ್ಕಳಲ್ಲಿ ಪ್ರತಿಭೆಗಳನ್ನು ಗುರುತಿಸುವ ಕೆಲಸ
ಮಾಡಬೇಕು. ಪಾಲಕರೂ ಸಹ ಜವಾಬ್ದಾರಿ ತೆಗೆದುಕೊಳ್ಳಬೇಕು. ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಣಕ್ಕೆ ಹೆಚ್ಚು ಅನುದಾನ ಕೊಡುವ ಕೆಲಸ ಮಾಡಿದ್ದೇವೆ ಎಂದರು.
ಕೋಚಿಂಗ್ ಸೆಂಟರ್, ಟ್ರೇನಿಂಗ್ ಸೆಂಟರ್ ತೆರೆಯುವ ಕೆಲಸ ಮಾಡಿದ್ದೇವೆ. ನಾನು ಜಿಪಂ ಅಧ್ಯಕ್ಷನಾಗಿದ್ದಾಗ ಎಸ್‌ಎಸ್‌ಎಲ್‌ಸಿ ಫಲಿತಾಂಶ ಉತ್ತಮ ಸ್ಥಾನ ಹೊಂದಿತ್ತು. ಆದರೆ ಈಗ ಫಲಿತಾಂಶದಲ್ಲಿ 25ರ ಆಸುಪಾಸಿನಲ್ಲಿದೆ. ನಮ್ಮ ಜಿಲ್ಲೆ ಸಹ ರಾಜ್ಯದಲ್ಲಿಯೇ ಪ್ರಥಮ ಸ್ಥಾನಕ್ಕೆ ಬರುವಂತಾಗಬೇಕು ಎಂದರು.
ಸಾನಿಧ್ಯ ವಹಿಸಿದ್ದ ಶಿರಹಟ್ಟಿ ಬಾಳೆಹೊಸುರ ಭಾವೈಕ್ಯತಾ ಮಹಾಸಂಸ್ಥಾನ ಪೀಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಮಾತನಾಡಿ, ಸಾಕ್ಷರತೆ ಪ್ರಮಾಣ ಅಧಿಕವಾಗಿದ್ದರೂ ಜ್ಞಾನ ಸಂಪಾದನೆ ಕಡಿಮೆಯಾಗುತ್ತಿದೆ. ಕಲಿಯುವ ವಯಸ್ಸಿನಲ್ಲಿ ಸರಿಯಾಗಿ ಶಿಕ್ಷಣವನ್ನು ಕಲಿತಾಗ ಯಶಸ್ಸು ಸಿಗುತ್ತದೆ ಎಂದರು.
ಇನ್‌ಸೈಟ್ಸ್ ಐಎಎಸ್ ಸಂಸ್ಥಾಪಕ ವಿನಯಕುಮಾರ ಜಿ.ಬಿ ಉಪನ್ಯಾಸ ನೀಡಿದರು. ಎಂಎಲ್‌ಸಿ ಹೇಮಲತಾ ನಾಯಕ, ಕೊಪ್ಪಳ ಬಿಇಒ ಶಂಕರಯ್ಯ ಟಿ.ಎಸ್, ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ| ಬಸವರಾಜ ಕ್ಯಾವಟರ್, ಕುಸ್ಮಾ ಸಂಘಟನೆ ಅಧ್ಯಕ್ಷ ಶಾಹೀದಹುಸೇನ ತಹಶೀಲ್ದಾರ್, ಕಾರ್ಯದರ್ಶಿ ನಾಗರಾಜ ಗುಡಿ, ಪತ್ರಕರ್ತ ಸಿರಾಜ್ ಬಿಸರಳ್ಳಿ, ಮಂಜುನಾಥ ದಿವಟರ್ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್
MUST WATCH
ಹೊಸ ಸೇರ್ಪಡೆ
Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.