Udupi: ಅಪಾಯಕಾರಿಯಾಗಿ ಬಸ್ ಚಾಲನೆ: ಪ್ರಕರಣ ದಾಖಲು
Team Udayavani, Sep 20, 2024, 8:59 PM IST
ಉಡುಪಿ: ಬಸ್‌ನಲ್ಲಿ ನಿಗದಿತ ಸಂಖ್ಯೆಗಿಂತ ಅಧಿಕ ಪ್ರಯಾಣಿಕರನ್ನು ತುಂಬಿಸಿಕೊಂಡು ಅಪಾಯಕಾರಿ ರೀತಿಯಲ್ಲಿ ಕರೆದುಕೊಂಡು ಹೋಗುತ್ತಿದ್ದ ಬಸ್ ನಿರ್ವಾಹಕನ ಮೇಲೆ ಪ್ರಕರಣ ದಾಖಲಿಸಲಾಗಿದೆ.
ಸಂಚಾರ ಠಾಣೆಯ ಸಹಾಯಕ ಪೊಲೀಸ್ ಉಪನಿರೀಕ್ಷಕ ಚಂದ್ರಶೇಖರ್ ಅವರು ಶಾರದಾ ಕಲ್ಯಾಣ ಮಂಟಪದ ಬಳಿ ಕರ್ತವ್ಯ ನಿರ್ವಹಿಸಿಕೊಂಡಿದ್ದ ವೇಳೆ ಉಡುಪಿ- ಮಣಿಪಾಲ ರಸ್ತೆಯಲ್ಲಿ ಸಂಚರಿಸುತ್ತಿದ್ದ ಖಾಸಗಿ ಬಸ್ ನಿರ್ವಾಹಕ ತನ್ನ ಬಸ್ಸಿನಲ್ಲಿ ನಿಗದಿತ ಸಂಖ್ಯೆಗಿಂತ ಹೆಚ್ಚಿನ ಪ್ರಯಾಣಿಕರನ್ನು ತುಂಬಿಸಿಕೊಂಡು ಅಪಾಯಕಾರಿ ರೀತಿಯಲ್ಲಿ ಪ್ರಯಾಣಿಕರನ್ನು ಬಸ್ಸಿನ ಫುಟ್‌ಬೋರ್ಡ್‌ನಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಿದ್ದ. ಚಾಲಕ ಪ್ರಸಾದ್ ಎಂಬಾತ ಅಪಾಯಕಾರಿ ರೀತಿಯಲ್ಲಿ ಬಸ್ ಅನ್ನು ಚಲಾಯಿಸುತ್ತಿದ್ದ. ಈ ಬಗ್ಗೆ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.