Dasara: ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ; ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

ಗಂಗಾರತಿ ಮಹಾಸಭಾದ ಪದಾಧಿಕಾರಿಗಳ ಜತೆ ಸಭೆ

Team Udayavani, Sep 21, 2024, 6:40 AM IST

ದಸರೆಗೆ ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ: ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

ಹರಿದ್ವಾರ: ದಕ್ಷಿಣ ಭಾರತದ ಜೀವನದಿಯಾದ ಕಾವೇರಿ ನದಿಗೂ ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿಯನ್ನು ದಸರಾ ಸಂದರ್ಭದಲ್ಲೇ ಪ್ರಾಯೋಗಿಕವಾಗಿ ನಡೆಸಲು ಸರಕಾರ ಚಿಂತನೆ ನಡೆಸಿದೆ. ಇದಕ್ಕಾಗಿ ಕಾವೇರಿ ಆರತಿ ಸಂಚಾಲಕರೂ ಆಗಿರುವ ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ನೇತೃತ್ವದ ನಿಯೋಗ ಉತ್ತರ ಭಾರತದಲ್ಲಿ ಎರಡು ದಿನಗಳ ಅಧ್ಯಯನ ಪ್ರವಾಸ ಕೈಗೊಂಡಿದ್ದು ಮೊದಲ ದಿನವಾದ ಶುಕ್ರವಾರ ಸಂಜೆ ಉತ್ತರಾ ಖಂಡ ರಾಜ್ಯದ ಹರಿದ್ವಾರದಲ್ಲಿ ನಡೆದ ಗಂಗಾರತಿ
ಯಲ್ಲಿ ಪಾಲ್ಗೊಂಡಿತಲ್ಲದೆ, ಗಂಗಾರತಿ ಮಹಾ ಸಭಾದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿತು.

ಕಾವೇರಿ ನದಿಯ ಯಾವ ಜಾಗದಲ್ಲಿ ಗಂಗಾರತಿ ಮಾದರಿಯ ಆರತಿ ಕೈಗೊಳ್ಳಬೇಕು? ಅದಕ್ಕಾಗಿ ಯಾವೆಲ್ಲ ಮೂಲಸೌಕರ್ಯ ಒದಗಿಸಬೇಕು? ಖರ್ಚು-ವೆಚ್ಚ ಇತ್ಯಾದಿಗಳನ್ನು ಅಂದಾಜಿಸುವ ಸಲುವಾಗಿ ಗಂಗಾರತಿ ಮಹಾಸಭೆಯ ಸಲಹೆಗಳನ್ನು ಪಡೆಯಲಾಯಿತು.

ಸಹಸ್ರಾರು ವರ್ಷಗಳ ಪೌರಾಣಿಕ ಹಿನ್ನೆಲೆಯುಳ್ಳ ಹರಿದ್ವಾರದ ಹರ್‌ ಕೀ ಪೌಡಿಯಲ್ಲಿ ಪ್ರತಿ ದಿನ ಸೂರ್ಯೋದಯ ಹಾಗೂ ಸೂರ್ಯಾಸ್ತದ ಸಮಯದಲ್ಲಿ ಗಂಗಾರತಿ ನಡೆಯುತ್ತದೆ. ನಿತ್ಯವೂ ಸಂಜೆ ನಡೆಯುವ ಆರತಿಯಲ್ಲಿ ಸಾವಿರಾರು ಜನರು ಭಾಗಿಯಾಗಿ ಕಣ್ತುಂಬಿಕೊಳ್ಳುತ್ತಾರೆ. ಇದಕ್ಕಾಗಿ ಯಾವುದೇ ಶುಲ್ಕ ಪಡೆಯುವುದಿಲ್ಲ ಎಂದು ಮಹಾಸಭಾ ಮಹಾಮಂತ್ರಿ ತನ್ಮಯ ವಸಿಷ್ಠ ವಿವರಿಸಿದರು.

ಅಷ್ಟೇ ಅಲ್ಲದೆ, ಇದರಲ್ಲಿ ಸರಕಾರದ ಯಾವುದೇ ಹಸ್ತಕ್ಷೇಪ ಇಲ್ಲ ಎಂಬುದನ್ನೂ ಸ್ಪಷ್ಟಪಡಿಸಿದ ಅವರು, ಧಾರ್ಮಿಕ ಹಾಗೂ ಸಾಮಾಜಿಕ ನೆಲೆಗಟ್ಟಿನಲ್ಲಿ ಗಂಗಾರತಿ ನಡೆಯಲಿದೆ. ಗಂಗಾರತಿಗೂ ಮುನ್ನ ಗಂಗಾ ಅಭಿಷೇಕ ನೆರವೇರಿಸಿ, ನದಿ ತೀರದಲ್ಲಿ ನೆರೆದ ಸಾವಿರಾರು ಮಂದಿಯಿಂದ ಪರಿಸರ ಸಂರಕ್ಷಣೆಯ ಪ್ರತಿಜ್ಞಾ ವಿಧಿಯನ್ನು ಮಾಡಿಸಲಾಗುತ್ತದೆ. ಆಬಳಿಕ ಆರತಿ ಮಾಡಲಾಗುತ್ತದೆ ಎಂದು ನಿಯೋಗದ ಮುಂದೆ ಮಾಹಿತಿ ಹಂಚಿಕೊಂಡರು.

ಈ ವೇಳೆ ಸಚಿವ ಚಲುವರಾಯಸ್ವಾಮಿ ಮಾತನಾಡಿ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ನಿರ್ದೇಶನದ ಮೇರೆಗೆ ಈ ಪ್ರವಾಸ ಕೈಗೊಂಡಿದ್ದು ಮೊದಲ ದಿನ ಹರಿದ್ವಾರದಲ್ಲಿ ಗಂಗಾರತಿ ನೋಡಿದ್ದೇವೆ. ಶನಿವಾರ ವಾರಾಣಸಿಯಲ್ಲಿ ಗಂಗಾರತಿ ವೀಕ್ಷಣೆ ಮಾಡಿ, ಅಲ್ಲಿನ ವ್ಯವಸ್ಥೆಗಳ ಪರಾಮರ್ಶೆಯನ್ನೂ ಮಾಡುತ್ತೇವೆ. ಗಂಜಾಂ ನಿಮಿಷಾಂಬ ದೇವಸ್ಥಾನದ ಬಳಿ ಇರುವ ಕಾವೇರಿ ನದಿ ತೀರ, ಕೆಆರ್‌ಎಸ್‌ ಬೃಂದಾವನ ಅಥವಾ ಯಾವ ಜಾಗದಲ್ಲಿ ಮಾಡಬೇಕು ಎಂಬುದನ್ನು ಮುಂದಿನ ದಿನಗಳಲ್ಲಿ ನಿಯೋಗವು ವರದಿ ನೀಡಿದ ಸರ್ಕಾರ ನಿರ್ಧರಿಸಲಿದೆ ಎಂದರು.

ಇದಕ್ಕಾಗಿ 5 ಕೋಟಿ ರೂ. ವೆಚ್ಚವಾಗುವ ಅಂದಾಜಿದ್ದು ಒಮ್ಮೆ ಆರಂಭಿಸಿದ ಅನಂತರ ಇದನ್ನು ನಿಲ್ಲಿಸದಂತೆ ಸರಕಾರ ಆದೇಶ ಕೂಡ ಹೊರಡಿಸಲಾಗುತ್ತದೆ. ಈ ಬಾರಿಯ ದಸರಾ ಮಹೋತ್ಸವದ ಸಂದರ್ಭದಲ್ಲೇ ಪ್ರಾಯೋಗಿಕವಾಗಿ ಆಚರಿಸಬಹುದೇ ಎಂಬ ಚಿಂತನೆಯೂ ಇದೆ ಎಂದು ತಿಳಿಸಿದರು.

ನಿಯೋಗದಲ್ಲಿ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ, ಮಾಗಡಿ ಬಾಲಕೃಷ್ಣ, ರವಿ ಗಣಿಗ, ದಿನೇಶ್‌ ಗೂಳಿಗೌಡ, ಶಿವಲಿಂಗೇಗೌಡ, ರಮೇಶ್‌ ಬಂಡಿಸಿದ್ದೇಗೌಡ, ಉದಯ್‌ ಗೌಡ, ದರ್ಶನ್‌ ಧ್ರುವನಾರಾಯಣ, ಹರೀಶ್‌ ಗೌಡ, ಮಂಡ್ಯ ಜಿಲ್ಲಾಧಿಕಾರಿ ಡಾ| ಕುಮಾರ್‌, ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ನಿಯೋಗ ದಲ್ಲಿದ್ದರು,

ಸಾಧು ಕೋಕಿಲರಿಂದ ಕಾವೇರಿ ಹಾಡು
ಸಂಗೀತ ಸಂಯೋಜಕ ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧು ಕೋಕಿಲ ಕೂಡ ನಿಯೋಗದಲ್ಲಿದ್ದು, ಕಾವೇರಿ ಆರತಿ ಸಂಬಂಧ ಹಾಡೊಂದನ್ನು ರಚಿಸುವ ಹೊಣೆ ಹೊರಿಸಲಾಗಿದೆ. ಅಧ್ಯಯನ ಪ್ರವಾಸದ ಸಂದರ್ಭದಲ್ಲಿ ಸಿಗುವ ಪ್ರೇರಣೆಯಿಂದ ಸಾಹಿತ್ಯ ರಚಿಸಿ, ಸಂಗೀತ ಸಂಯೋಜನೆ ಮಾಡಿಕೊಡುವುದಾಗಿ ಹೇಳಿದ್ದಾರೆ.

-ಸಾಮಗ ಶೇಷಾದ್ರಿ

 

ಟಾಪ್ ನ್ಯೂಸ್

army-1

Manipur; ಹಿಂಸಾಚಾರದ ಬಳಿಕ ಕೇಂದ್ರದಿಂದ 20 CAPF ತುಕಡಿಗಳ ರವಾನೆ

Oscars 2025: ಆಸ್ಕರ್‌ಗೆ ಎಂಟ್ರಿ ಆಗಿರುವ ʼಲಾಪತಾ ಲೇಡೀಸ್‌ʼ ಚಿತ್ರದ ಟೈಟಲ್‌ ಬದಲಾವಣೆ

Oscars 2025: ಆಸ್ಕರ್‌ಗೆ ಎಂಟ್ರಿ ಆಗಿರುವ ʼಲಾಪತಾ ಲೇಡೀಸ್‌ʼ ಚಿತ್ರದ ಟೈಟಲ್‌ ಬದಲಾವಣೆ

arrested

ED; ಅಕ್ರಮವಾಗಿ ಒಳನುಸುಳಿದ ಇಬ್ಬರು ಬಾಂಗ್ಲಾ ಪ್ರಜೆಗಳು ಸೇರಿ ಮೂವರ ಬಂಧನ

hk-patil

John Michael D’Cunh ಟೀಕೆ;ಜೋಶಿ ತತ್ ಕ್ಷಣ ರಾಜೀನಾಮೆ ನೀಡಲಿ: ಎಚ್.ಕೆ. ಪಾಟೀಲ್

Supreme Court: ಆರೋಪಿ, ಅಪರಾಧಿ ಮನೆಯನ್ನು ನೆಲಸಮ ಮಾಡುವಂತಿಲ್ಲ: ಸುಪ್ರೀಂ ತೀರ್ಪು

Supreme Court: ಆರೋಪಿ, ಅಪರಾಧಿ ಮನೆಯನ್ನು ಏಕಾಏಕಿ ನೆಲಸಮ ಮಾಡುವಂತಿಲ್ಲ: ಸುಪ್ರೀಂ ತೀರ್ಪು

3-belagavi

Belagavi: ಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷ ಸ್ಥಾನಕ್ಕೆ ಢವಳೇಶ್ವರ ದಿಢೀರ್ ರಾಜೀನಾಮೆ

1-eqwqwewe

Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hk-patil

John Michael D’Cunh ಟೀಕೆ;ಜೋಶಿ ತತ್ ಕ್ಷಣ ರಾಜೀನಾಮೆ ನೀಡಲಿ: ಎಚ್.ಕೆ. ಪಾಟೀಲ್

1-eqwqwewe

Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ

arrested

Salman Khan; ಬಾಲಿವುಡ್ ನಟನಿಗೆ ಬೆದರಿಕೆ ಹಾಕಿದ್ದ ಗೀತ ರಚನೆಕಾರ ರಾಯಚೂರಿನಲ್ಲಿ ಬಂಧನ

Loka-raid

Corrupts Hunt: ಏಕಕಾಲಕ್ಕೆ 37 ಕಡೆ ಲೋಕಾಯುಕ್ತ ದಾಳಿ; 22 ಕೋಟಿ ರೂ. ಅಕ್ರಮ ಆಸ್ತಿ ಪತ್ತೆ!

BJP-JDS-congress-Party

Vote: ಶಿಗ್ಗಾಂವಿ, ಚನ್ನಪಟ್ಟಣ, ಸಂಡೂರು ಉಪಚುನಾವಣೆ: ಇಂದು ಮತದಾನ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

1(1

Vitla: ಉದ್ಘಾಟನೆಯಾದ ನಾಡಕಚೇರಿ ತೆರೆದಿಲ್ಲ !

army-1

Manipur; ಹಿಂಸಾಚಾರದ ಬಳಿಕ ಕೇಂದ್ರದಿಂದ 20 CAPF ತುಕಡಿಗಳ ರವಾನೆ

Oscars 2025: ಆಸ್ಕರ್‌ಗೆ ಎಂಟ್ರಿ ಆಗಿರುವ ʼಲಾಪತಾ ಲೇಡೀಸ್‌ʼ ಚಿತ್ರದ ಟೈಟಲ್‌ ಬದಲಾವಣೆ

Oscars 2025: ಆಸ್ಕರ್‌ಗೆ ಎಂಟ್ರಿ ಆಗಿರುವ ʼಲಾಪತಾ ಲೇಡೀಸ್‌ʼ ಚಿತ್ರದ ಟೈಟಲ್‌ ಬದಲಾವಣೆ

arrested

ED; ಅಕ್ರಮವಾಗಿ ಒಳನುಸುಳಿದ ಇಬ್ಬರು ಬಾಂಗ್ಲಾ ಪ್ರಜೆಗಳು ಸೇರಿ ಮೂವರ ಬಂಧನ

hk-patil

John Michael D’Cunh ಟೀಕೆ;ಜೋಶಿ ತತ್ ಕ್ಷಣ ರಾಜೀನಾಮೆ ನೀಡಲಿ: ಎಚ್.ಕೆ. ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.