Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

ಲಡ್ಡು ಪ್ರಸಾದದಲ್ಲಿ ಕೊಬ್ಬು ಬಳಕೆ ಅತ್ಯಂತ ದುರದೃಷ್ಟಕರ: ಅಯೋಧ್ಯೆ ದೇವಾಲಯದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಹೇಳಿಕೆ

Team Udayavani, Sep 21, 2024, 9:15 PM IST

Achraya-das

ಅಯೋಧ್ಯಾ:  ತಿರುಪತಿ (Thirupathi) ಶ್ರೀವೆಂಕಟೇಶ್ವರ ದೇವಸ್ಥಾನದ ‘ಪ್ರಸಾದ’ವನ್ನು ಜನವರಿಯಲ್ಲಿ ನಡೆದ ಅಯೋಧ್ಯೆಯ ಶ್ರೀರಾಮಮಂದಿರದ (Ramamandir) ಪ್ರಾಣಪ್ರತಿಷ್ಠೆ ವೇಳೆಯ ಸಮಾರಂಭದಲ್ಲಿ (Ayodhya) ಭಕ್ತರಿಗೆ ವಿತರಿಸಲಾಗಿತ್ತು ಎಂದು ಅಯೋಧ್ಯೆ ದೇವಾಲಯದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್  ಹೇಳಿದ್ದಾರೆ.

ಕಠಿಣ ಕ್ರಮಕ್ಕೆ ಒತ್ತಾಯ
ತಿರುಪತಿಯ ಲಡ್ಡು ಪ್ರಸಾದಕ್ಕೆ ಬಳಸಲಾದ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬು ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಅಯೋಧ್ಯೆ ದೇವಾಲಯದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.  ‘ಪ್ರಸಾದ’ದಲ್ಲಿ ಪ್ರಾಣಿಗಳ ಕೊಬ್ಬು ಬೆರೆಸಿದ್ದರೆ ಅದು ಅಕ್ಷಮ್ಯ. ಇದರಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಪ್ರಕರಣದ ಕುರಿತು ತನಿಖಾ ಸಂಸ್ಥೆಯಿಂದ ತನಿಖೆಯಾಗಲಿ ಎಂದು ಸತ್ಯೇಂದ್ರ ದಾಸ್ ಒತ್ತಾಯಿಸಿದ್ದಾರೆ.

ಬೆಳ್ಳುಳ್ಳಿ, ಈರುಳ್ಳಿಯನ್ನೂ ಬಳಸದವರಿಗೆ ಅಪಚಾರ
ವೈಷ್ಣವ ಸಂತರು ಮತ್ತು ಭಕ್ತರು ಬೆಳ್ಳುಳ್ಳಿ, ಈರುಳ್ಳಿಯೂ ಬಳಸುವುದಿಲ್ಲ. ಇಂತಹ ಸಂದರ್ಭದಲ್ಲಿ ಲಡ್ಡು ಪ್ರಸಾದದಲ್ಲಿ ಕೊಬ್ಬು ಬಳಸಿರುವುದು ಅತ್ಯಂತ ದುರದೃಷ್ಟಕರ. ಇದು ಹಿಂದೂ ನಂಬಿಕೆಯ ಅಪಹಾಸ್ಯ. ಪ್ರಮುಖ ಏಜೆನ್ಸಿಗಳು ಇದನ್ನು ತನಿಖೆ ಮಾಡಬೇಕು ಮತ್ತು ತಪ್ಪಿತಸ್ಥರು ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ದಾಸ್ ಹೇಳಿದ್ದಾರೆ.

ಗುಣಮಟ್ಟದ ಪ್ರಸಾದ ವಿತರಿಸಲಿ:
ಅಯೋಧ್ಯೆ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ ಪ್ರಧಾನ ಕಾರ್ಯದರ್ಶಿ ಚಂಪತ್‌ ರಾಯ್‌  ಮಾತನಾಡಿ ” ತಿರುಪತಿ ಲಡ್ಡು ಪ್ರಸಾದದ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರದ ತನಿಖಾ ವರದಿಗಾಗಿ ಕಾಯುತ್ತಿದ್ದೇವೆ. ರಾಮ ಜನ್ಮಭೂಮಿಯಲ್ಲಿ ಪ್ರಾಣ ಪ್ರತಿಷ್ಠೆ ಸಂದರ್ಭದಲ್ಲಿ ಭಕ್ತರಿಗೆ ಏಲಕ್ಕಿ ಬೀಜಗಳ ಮಾತ್ರವೇ ವಿತರಿಸಲಾಗಿದೆ. ನಾನು ನನ್ನ ಜೀವನದಲ್ಲಿ 1981ರಲ್ಲಿ ಒಮ್ಮೆ ಮಾತ್ರ ತಿರುಪತಿಗೆ ತೆರಳಿದ್ದೇನೆ. ಅಯೋಧ್ಯೆಯ ಪ್ರಮುಖ ದೇವಸ್ಥಾನ ಹನುಮಾನ್‌ ಗಡಿಯ ಪ್ರಸಾದದಲ್ಲಿ ದೇಸಿ ಗೋವಿನ ತುಪ್ಪ ಮಾತ್ರ ಬಳಸಲಾಗುತ್ತಿದೆ ಎಂದರು.  ತಿರುಪತಿ ಪ್ರಸಾದ ವಿವಾದದಿಂದ ದೇಶಾದ್ಯಂತ ಪ್ರಮುಖ ದೇವಸ್ಥಾನಗಳಲ್ಲಿ ಭಕ್ತರಿಗೆ ವಿತರಿಸುವ ದೇವರ ಪ್ರಸಾದದ ಗುಣಮಟ್ಟ ಪರೀಕ್ಷಿಸಿ ವಿತರಿಸಬೇಕು ಎಂದು ಒತ್ತಾಯಿಸಿದರು.

ಪ್ರಧಾನಿಗೂ ಲಡ್ಡು ಪ್ರಸಾದ ನೀಡಿದ್ರಂತೆ ಜಗನ್!
ಲಡ್ಡು ತಯಾರಿಕೆಗೆ ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬು ಬಳಸಲಾಗಿದೆ ಎಂದು ಸಿಎಂ ಚಂದ್ರಬಾಬು ನಾಯ್ಡು ಹೇಳಿಕೆ ನಂತರ ತಿರುಪತಿ ದೇವಸ್ಥಾನದ ‘ಪ್ರಸಾದ’ (ಲಡ್ಡುಗಳು) ಭಾರೀ ವಿವಾದದ ಕೇಂದ್ರಬಿಂದುವಾಗಿದೆ. 2019 ಮತ್ತು 2024ರ ನಡುವೆ ಆಂಧ್ರದ ಮಾಜಿ ಸಿಎಂ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಪ್ರತಿ ಬಾರಿ ದೆಹಲಿಗೆ ಭೇಟಿ ನೀಡಿದಾಗ ಪ್ರಧಾನಿ ನರೇಂದ್ರ ಮೋದಿಗೆ ದೇವಸ್ಥಾನದ ಲಡ್ಡುಗಳ ಉಡುಗೊರೆಯಾಗಿ ನೀಡಿದ್ದರು ಎಂದು ವರದಿ ತಿಳಿಸಿದೆ.

ಹಿಂದಿನ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಲಡ್ಡುಗಳಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬು ಬಳಸಲು ಅನುಮತಿ ನೀಡಿದ್ದಾರೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೋಪಿಸಿದ ನಂತರ ವಿವಾದ ಉಂಟಾಗಿದೆ. ಗುಜರಾತಿನ ಪ್ರಯೋಗಾಲಯದ ವರದಿ ಉಲ್ಲೇಖಿಸಿ, ನಾಯ್ಡು ಅವರ ಪಕ್ಷವು ತುಪ್ಪದಲ್ಲಿ ಪ್ರಾಣಿಗಳ ಕೊಬ್ಬು ಮತ್ತು ಮೀನಿನ ಎಣ್ಣೆ ಕಂಡು ಬಂದಿದೆ ಎಂದು ಆರೋಪಿಸಿದೆ.

ಟಾಪ್ ನ್ಯೂಸ್

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

1-vasu

Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

mohan bhagwat

Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

3

Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ

8

Kundapura: ಬೋಟ್‌ ರೈಡರ್‌ ನಾಪತ್ತೆ; ಸಿಗದ ಸುಳಿವು

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

13

Kundapura: ಮನೆಗೆ ನುಗ್ಗಿ ಚಿನ್ನಾಭರಣ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.