Fraud: ಕ್ರೆಡಿಟ್ ಕಾರ್ಡ್ ಆ್ಯಕ್ಟಿವೇಶನ್ ಹೆಸರಲ್ಲಿ ವಂಚನೆ
Team Udayavani, Sep 22, 2024, 6:45 AM IST
ಸುಳ್ಯ: ಕ್ರೆಡಿಟ್ ಕಾರ್ಡ್ ಆ್ಯಕ್ಟಿವೇಶನ್ ಹೆಸರಲ್ಲಿ ವ್ಯಕ್ತಿಯೋರ್ವರಿಗೆ ಅಪರಿಚಿತರು ಲಕ್ಷಾಂತರ ರೂ. ವಂಚಿಸಿರುವ ಘಟನೆ ಸುಳ್ಯದ ಬಾಳಿಲದಲ್ಲಿ ನಡೆದಿದೆ.
ಬಾಳಿಲ ಗ್ರಾಮದ ಕೃಷಿ ಕೆಲಸ ಮಾಡುತ್ತಿರುವ ವ್ಯಕ್ತಿಯೋರ್ವರು ಈ ಬಗ್ಗೆ ಸೈಬರ್ (ಸೆನ್) ಠಾಣೆಗೆ ದೂರು ನೀಡಿದ್ದಾರೆ. ಸೆ.1ರಂದು ಬಾಳಿಲದ ವ್ಯಕ್ತಿ ಆನ್‌ಲೈನ್ ಮೂಲಕ ಕ್ರೆಡಿಟ್ ಕಾರ್ಡ್‌ಗೆ ಅರ್ಜಿ ಮಾಡಿದ್ದು, ಸೆ.12ರಂದು ಎಚ್‌ಡಿಎಫ್‌ಸಿ ಕ್ರೆಡಿಟ್ ಕಾರ್ಡ್ ಅಂಚೆ ಮುಖಾಂತರ ಬಂದಿರುತ್ತದೆ. ಸೆ.13ರಂದು ಅಪರಿಚಿತ ವ್ಯಕ್ತಿ ಕರೆ ಮಾಡಿ ಕ್ರೆಡಿಟ್ ಕಾಡ್ ಮುಂಬಯಿ ಕಚೇರಿಯಿಂದ ಎಂದು ತಿಳಿಸಿ, ಅದನ್ನು ಆ್ಯಕ್ಟಿವೇಶನ್ ಮಾಡಲು ಸಿವಿವಿ ನಂಬರ್, ಒಟಿಪಿ ನೀಡಲು ತಿಳಿಸಿದ್ದು, ಅದರಂತೆ ಬಾಳಿಲದ ವ್ಯಕ್ತಿ ಅಪರಿಚಿತರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಬಾಳಿಲದ ವ್ಯಕ್ತಿಯ ಕ್ರೆಡಿಟ್ ಕಾರ್ಡ್‌ನಿಂದ ಹಂತ ಹಂತವಾಗಿ ಒಟ್ಟು 3,94,361 ರೂ. ವರ್ಗಾವಣೆಯಾಗಿದೆ. ಈ ಬಗ್ಗೆ ಅವರು ಮಂಗಳೂರಿನ ಸೆನ್ ಅಪರಾಧ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.