Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ
ರಾಜಕೀಯ ಪಕ್ಷಗಳ ಕಪಿಮುಷ್ಟಿಯಿಂದ ದೇವಸ್ಥಾನ, ಮಠ ಮಂದಿರಗಳ ಮುಕ್ತಗೊಳಿಸಿ
Team Udayavani, Sep 22, 2024, 1:21 AM IST
ಉಡುಪಿ: ತಿರುಪತಿ-ತಿರುಮಲ ಕ್ಷೇತ್ರದ ಶ್ರೀ ವೆಂಕಟೇಶ್ವರ ಸ್ವಾಮಿ ಲಡ್ಡು ಪ್ರಸಾದದಲ್ಲಿ ನಡೆದಿರುವ ಕಲಬೆರಕೆ ಘಟನೆ ಅತ್ಯಂತ ಖಂಡನೀಯ ಹಾಗೂ ಅಕ್ಷಮ್ಯ ಅಪರಾಧ ಎಂದು ಪರ್ಯಾಯ ಶ್ರೀ ಪುತ್ತಿಗೆ ಸುಗುಣೇಂದ್ರ ತೀರ್ಥ ಶ್ರೀಪಾದರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
ಹಿಂದೂ ಧರ್ಮೀಯರ ಪ್ರಮುಖ ಶ್ರದ್ಧಾಕೇಂದ್ರ ತಿರುಪತಿಯ ಶ್ರೀ ವೆಂಕಟೇಶ್ವರ ದೇವರ ಪರಮ ಪಾವನವಾದ ನೈವೇದ್ಯ ಪ್ರಸಾದಕ್ಕೆ ಕಲಬೆರಕೆಯ ತುಪ್ಪವನ್ನು ಬೆರಸಿ ದೊಡ್ಡ ಅಪಚಾರ ಮಾಡಲಾಗಿದೆ. ಈ ಮೂಲಕ ಬಹು ದೊಡ್ಡ ಧಾರ್ಮಿಕ ಸಮಾಜವನ್ನು ಘಾಸಿಗೊಳಿಸಲಾಗಿದೆ ಎಂದು ಖೇದ ವ್ಯಕ್ತಪಡಿಸಿದರು.
ದೇವಸ್ಥಾನ ಮತ್ತು ಮಠ ಮಂದಿರಗಳ ಮೇಲೆ ನಿರಂತರ ನಡೆಯುತ್ತಿರುವ ಆಕ್ರಮಣಗಳನ್ನು ಶಾಶ್ವತವಾಗಿ ತಡೆಯಬೇಕಿದ್ದು, ರಾಜಕೀಯ ಪಕ್ಷಗಳ ಕಪಿಮುಷ್ಟಿಯಿಂದ ದೇವಸ್ಥಾನ ಮತ್ತು ಮಠ ಮಂದಿರಗಳನ್ನು ಮುಕ್ತಗೊಳಿಸಬೇಕು. ಸನಾತನ ಧರ್ಮದ ಸಂರಕ್ಷಣೆಗಾಗಿ ರಾಷ್ಟ್ರ ಮಟ್ಟದಲ್ಲಿ ಸಂತರ ಪೀಠಾ ಧಿಪತಿಗಳ ನೇತೃತ್ವದ ಮಾರ್ಗದರ್ಶಕ ಮಂಡಳಿ ರಚಿಸಬೇಕು. ಯಾವುದೇ ಕಾರಣಕ್ಕೂ ರಾಜಕೀಯ ಹಸ್ತಕ್ಷೇಪ ಇರಬಾರದು ಎಂದು ಅವರು ತಿಳಿಸಿದ್ದಾರೆ.
ಭಂಡಾರಿಕೇರಿ ಶ್ರೀ ಖಂಡನೆ:
ತಿರುಪತಿ ಶ್ರೀನಿವಾಸನ ಸನ್ನಿಧಿಯಲ್ಲಿ ನಡೆದಿರುವ ಅಪಚಾರವನ್ನು ತೀವ್ರವಾಗಿ ಖಂಡಿಸಿ ಧರ್ಮ ಸಂಸತ್ ಅನ್ನು ರಚಿಸಿ ಈ ಮೂಲಕ ರಾಜಕೀಯ ಪಕ್ಷಗಳ ಹಸ್ತಕ್ಷೇಪದಿಂದ ಮುಕ್ತಗೊಳಿಸಬೇಕು ಎಂದು ಶ್ರೀ ಭಂಡಾರಕೇರಿ ಮಠಾಧೀಶರಾದ ಶ್ರೀ ವಿದ್ಯೆàಶತೀರ್ಥ ಶ್ರೀ ಪಾದರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ನ. 14-20: ರಾಜ್ಯಮಟ್ಟದ 71ನೇ ಅಖಿಲ ಭಾರತ ಸಹಕಾರ ಸಪ್ತಾಹ
Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ
Yakshadhruva Patla Foundation Trust: ನ.14ರಂದು ಉಡುಪಿ ಘಟಕದ ಮಹಿಳಾ ವಿಭಾಗ ಆರಂಭ
Parashurama Murthy Case: ಉಳಿದ ಆರೋಪಿಗಳನ್ನು ಬಂಧಿಸಲು ಆಗ್ರಹ
Udupi: ನಗರದಲ್ಲಿ ಫುಟ್‌ಪಾತ್‌ಗಳ ಅತಿಕ್ರಮಣ; ಎಲ್ಲೆಂದರಲ್ಲಿ ವಾಹನ ಪಾರ್ಕಿಂಗ್
MUST WATCH
ಹೊಸ ಸೇರ್ಪಡೆ
Kunigal: ಟೈರ್ ಸ್ಪೋಟವಾಗಿ ಕಾರು ಪಲ್ಟಿ: ಐಟಿ ಉದ್ಯೋಗಿ ದುರ್ಮರಣ
Government School: ಅಳಿವಿನಂಚಿನಲ್ಲಿ ನನ್ನೂರ ಸರಕಾರಿ ಶಾಲೆ
Shivamogga: ಡಿವೈಡರ್ ಏರಿದ ನಗರ ಸಾರಿಗೆ ಬಸ್: ಎಮರ್ಜೆನ್ಸಿ ಡೋರ್ ಮೂಲಕ ಇಳಿದ ಪ್ರಯಾಣಿಕರು
UV Fusion: ಹಬ್ಬ ಹರಿದಿನಗಳಲ್ಲಿ ಯುವಜನರ ಪಾತ್ರ
BBK11: ನಿನ್ನೆ ಅಣ್ಣಾ ಎಂದು ಅತ್ತಿದ್ದ ಚೈತ್ರಾ, ಇಂದು ಶಿಶಿರ್ ಬೆನ್ನಿಗೆ ಚೂರಿ ಹಾಕಿದ್ರಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.