Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

ನೆಮ್ಮದಿಯಾಗಿ ಹಬ್ಬ ಮಾಡುವಂತೆಯೂ ಇಲ್ಲ ಗಣೇಶೋತ್ಸವ ಮೆರವಣಿಗೆ ಮೇಲೆ ಕಲ್ಲು, ಪೆಟ್ರೋಲ್‌ ಬಾಂಬ್‌: ಬಿ.ವೈ. ವಿಜಯೇಂದ್ರ

Team Udayavani, Sep 22, 2024, 7:25 AM IST

BY-Vijayendra

ಶಿವಮೊಗ್ಗ/ಹಾಸನ: ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರ ಹಿಂದೂಗಳ ಮೇಲೆ ದಬ್ಬಾಳಿಕೆ ನಡೆಸುತ್ತಿದೆ. ಹಿಂದೂಗಳು ನೆಮ್ಮದಿಯಾಗಿ ಗಣೇಶೋತ್ಸವ ಆಚರಿಸುವಂತೆಯೂ ಇಲ್ಲ ಎಂದು ಬಿಜೆಪಿ ನಾಯಕರು ಸರಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಶಿವಮೊಗ್ಗದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದಾಗೆಲ್ಲ ಹಿಂದೂಗಳ ಮೇಲೆ ದಬ್ಬಾಳಿಕೆ ಹೆಚ್ಚುತ್ತದೆ. ಬಹುಸಂಖ್ಯಾಕರ ಹಬ್ಬ ಹರಿದಿನಗಳನ್ನೂ ನೆಮ್ಮದಿಯಾಗಿ ಆಚರಿಸುವಂತಿಲ್ಲ ಎಂದರು. ಗಣೇಶೋತ್ಸವದ ಮೆರವಣಿಗೆ ಮೇಲೆ ಕಲ್ಲು ತೂರಾಟ, ಪೆಟ್ರೋಲ್‌ ಬಾಂಬ್‌ ಎಸೆಯಲಾಗುತ್ತಿದೆ. ದೇಶದ್ರೋಹಿ ಶಕ್ತಿಗಳನ್ನು ಮಟ್ಟ ಹಾಕುವಲ್ಲಿ ಸರಕಾರ ವಿಫಲವಾಗಿದೆ ಎಂದರು.

ರಾಜ್ಯದಲ್ಲಿ ಬಹುಸಂಖ್ಯಾಕ ಹಿಂದೂಗಳ ಭಾವನೆಗಳಿಗೆ ಧಕ್ಕೆಯಾಗು ವಂತಹ ಕೃತ್ಯಗಳು ನಡೆಯುತ್ತಲೇ ಇವೆ. ನಾಗಮಂಗಲದಲ್ಲಿ ಮತೀಯ ಶಕ್ತಿಗಳು ದಾಂಧಲೆ ಎಬ್ಬಿಸಿವೆ. ಹಬ್ಬದ ಸಂಭ್ರಮದಲ್ಲಿದ್ದ ಊರಿನಲ್ಲಿ ದ್ವೇಷ ಕಾರಲಾಗಿದೆ. ದಾವಣಗೆರೆಯಲ್ಲಿಯೂ ಗಣಪತಿ ಮೆರವಣಿಗೆ ಮೇಲೆ ಕಲ್ಲು ತೂರಲಾಗಿದೆ. ಸರಕಾರದ ಮೃದು ಧೋರಣೆಯೇ ಈ ಎಲ್ಲ ಘಟನೆಗಳಿಗೆ ಕಾರಣ. ಇದರಿಂದಾಗಿಯೇ ಪ್ಯಾಲೇಸ್ತೀನ್‌, ಪಾಕಿಸ್ಥಾನದ ಧ್ವಜ ಹಾರಿಸಲಾಗುತ್ತಿದೆ. ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಂಡಿದ್ದರೆ ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ ಎಂದರು.

ತುಮಕೂರು ವಿ.ವಿ. ಸುತ್ತೋಲೆ ಹಿಂಪಡೆಯಲಿ
ತುಮಕೂರು ವಿಶ್ವವಿದ್ಯಾನಿಲಯದ ಕುಲಸಚಿವರಿಗೆ ಅಲ್ಲಿನ ಪೊಲೀಸರು ವಿದ್ಯಾರ್ಥಿಗಳನ್ನು ಗಣಪತಿ ವಿಸರ್ಜನೆಗೆ ಕಳುಹಿಸಬೇಡಿ ಎಂದು ಪತ್ರ ಬರೆಯುತ್ತಾರೆ. ಈ ರೀತಿಯ ನಡವಳಿಕೆ ಹಿಂದೆ ಯಾವ ಸರಕಾರದ ಅವಧಿಯಲ್ಲಿಯೂ ಆಗಿಲ್ಲ. ಹಿಂದೂಗಳಿಗೆ ಹಬ್ಬಗಳ ಆಚರಣೆಯಲ್ಲಿ ಭಾಗವಹಿಸಬಾರದು ಎಂದು ಪತ್ರ ಬರೆದ ಪೊಲೀಸರ ಮೇಲೆ ಕ್ರಮ ಕೈಗೊಳ್ಳಬೇಕು. ಕುಲಸಚಿವರು ಹೊರಡಿಸಿರುವ ಸುತ್ತೋಲೆ ಯನ್ನು ಹಿಂಪಡೆಯಬೇಕೆಂದು ವಿಜಯೇಂದ್ರ ಆಗ್ರಹಿಸಿದರು.

“ಗಣೇಶ ವಿಸರ್ಜನೆ ವೇಳೆ ಗಲಾಟೆ ಪ್ರಕರಣವೊಂದರಲ್ಲಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷನೊಬ್ಬನಿದ್ದಾನೆ. ಆದರೆ ವೀಕ್ಷಣೆಗೆ ಹೋದ ಆರ್‌. ಅಶೋಕ್‌, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮೇಲೂ ಪ್ರಕರಣ ದಾಖಲಿಸಿದ್ದಾರೆ. ಮಸೀದಿಯಿದೆ ಎನ್ನುವ ಕಾರಣಕ್ಕೆ ಮೆರವಣಿಗೆ ಮಾಡಬಾರದು ಎನ್ನುವುದು ಸರಿಯಲ್ಲ. ನಾವು ಪೂಜೆ ಮಾಡುವ ಸಂದರ್ಭದಲ್ಲಿ ಅವರ ನಮಾಜ್‌ ನಿಲ್ಲಿಸುತ್ತಾರೆಯೇ?”
– ಪ್ರಹ್ಲಾದ್‌ ಜೋಶಿ, ಕೇಂದ್ರ ಸಚಿವ’

ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಿದವರನ್ನು ಗುಂಡಿಕ್ಕಿ ಕೊಲ್ಲಿ
ಹೊನ್ನಾಳಿ: ಹಿಂದೂ ಯುವಕರು ಗಣೇಶನ ಮೆರವಣಿಗೆ ಮಾಡಿಕೊಂಡು ಹೋಗುವಾಗ ಕಲ್ಲು ತೂರಿದ ದುಷ್ಕರ್ಮಿಗಳಿಗೆ ಗುಂಡು ಹೊಡೆಯಿರಿ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಆಗ್ರಹಿಸಿದರು.

ಸುದ್ದಿಗಾರರ ಜತೆ ಮಾತನಾಡಿ, ವಿಧಾನ ಸೌಧದಲ್ಲೇ ಪಾಕಿಸ್ಥಾನ್‌ ಜಿಂದಾಬಾದ್‌ ಎಂದವರನ್ನು ಬಂಧಿ ಸದೆ ಗಣೇಶ ಉತ್ಸವ ಮಾಡುತ್ತಿರುವ ಹಿಂದೂ ಯುವಕರ ಮೇಲೆ ಪ್ರಕರಣಗಳನ್ನು ದಾಖಲಿಸುತ್ತಿರುವವರಿಗೆ ನಾಚಿಕೆಯಾಗಬೇಕು. ತತ್‌ಕ್ಷಣ ಅಮಾಯಕ ಹಿಂದೂ ಯುವಕರ ಮೇಲೆ ಹಾಕಿರುವ ಪ್ರಕರಣಗಳನ್ನು ಹಿಂಪಡೆದು ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಕಾಂಗ್ರೆಸ್‌ ಸರಕಾರದ ವಿರುದ್ಧ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಟಾಪ್ ನ್ಯೂಸ್

Shobha Gasti: ಬೆಂಕಿಯಲ್ಲಿ ಅರಳಿದ ಹೂವು; ದೇವದಾಸಿಯರ ಹಾಡು ಪಾಡು

Shobha Gasti: ಬೆಂಕಿಯಲ್ಲಿ ಅರಳಿದ ಹೂವು; ದೇವದಾಸಿಯರ ಹಾಡು ಪಾಡು

Mangaluru: ಕೆಪಿಟಿ ಬಳಿ ಅಪಘಾತ; ಬೈಕ್ ಸವಾರ ಪವಾಡ ಸದೃಶ ಪ್ರಾಣಾಪಾಯದಿಂದ ಪಾರು

Mangaluru: ಕೆಪಿಟಿ ಬಳಿ ಅಪಘಾತ; ಬೈಕ್ ಸವಾರ ಪವಾಡಸದೃಶ ರೀತಿ ಪ್ರಾಣಾಪಾಯದಿಂದ ಪಾರು

River: ನದಿಯೇ ಜೀವನ ಸಾಕ್ಷಾತ್ಕಾರ!

River: ನದಿಯೇ ಜೀವನ ಸಾಕ್ಷಾತ್ಕಾರ!

Ayodhya: 30 ಲಕ್ಷ ರೂ. ವೆಚ್ಚದ ಬಸ್‌ನಲ್ಲಿ ಬಸವನ ಅಯೋಧ್ಯೆ ಯಾತ್ರೆ

Ayodhya: 30 ಲಕ್ಷ ರೂ. ವೆಚ್ಚದ ಬಸ್‌ನಲ್ಲಿ ಬಸವನ ಅಯೋಧ್ಯೆ ಯಾತ್ರೆ

India secures a win against Bangladesh in the chennai test

INDvsBAN; ಅʼಸ್ಪಿನ್‌ʼಗೆ ಬಾಂಗ್ಲಾ ತತ್ತರ: ಚೆನ್ನೈ ಪಂದ್ಯದಲ್ಲಿ ಭಾರತಕ್ಕೆ ಭರ್ಜರಿ ಗೆಲುವು

Gangolli; ಮಹಾಂಕಾಳಿ ದೇಗುಲದ ಚಿನ್ನಾಭರಣ ಕಳವು; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದ ಅರ್ಚಕ

Gangolli; ಮಹಾಂಕಾಳಿ ದೇಗುಲದ ಚಿನ್ನಾಭರಣ ಕಳವು; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದ ಅರ್ಚಕ

Development of 2-dose vaccine for HIV prevention: MIT

HIV vaccine; ಎಚ್‌ಐವಿ ತಡೆಗೆ 2 ಡೋಸ್‌ ಲಸಿಕೆ ಅಭಿವೃದ್ಧಿ: ಎಂಐಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಜಾನೆ ಮನೆಗೆ ನುಗ್ಗಿ ಪುಣೆ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

School bag

School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್‌ ಆಧಾರಿತ ಹಾಜರಾತಿ?

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

1-qwewqwqe

World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Shobha Gasti: ಬೆಂಕಿಯಲ್ಲಿ ಅರಳಿದ ಹೂವು; ದೇವದಾಸಿಯರ ಹಾಡು ಪಾಡು

Shobha Gasti: ಬೆಂಕಿಯಲ್ಲಿ ಅರಳಿದ ಹೂವು; ದೇವದಾಸಿಯರ ಹಾಡು ಪಾಡು

Mangaluru: ಕೆಪಿಟಿ ಬಳಿ ಅಪಘಾತ; ಬೈಕ್ ಸವಾರ ಪವಾಡ ಸದೃಶ ಪ್ರಾಣಾಪಾಯದಿಂದ ಪಾರು

Mangaluru: ಕೆಪಿಟಿ ಬಳಿ ಅಪಘಾತ; ಬೈಕ್ ಸವಾರ ಪವಾಡಸದೃಶ ರೀತಿ ಪ್ರಾಣಾಪಾಯದಿಂದ ಪಾರು

River: ನದಿಯೇ ಜೀವನ ಸಾಕ್ಷಾತ್ಕಾರ!

River: ನದಿಯೇ ಜೀವನ ಸಾಕ್ಷಾತ್ಕಾರ!

Ayodhya: 30 ಲಕ್ಷ ರೂ. ವೆಚ್ಚದ ಬಸ್‌ನಲ್ಲಿ ಬಸವನ ಅಯೋಧ್ಯೆ ಯಾತ್ರೆ

Ayodhya: 30 ಲಕ್ಷ ರೂ. ವೆಚ್ಚದ ಬಸ್‌ನಲ್ಲಿ ಬಸವನ ಅಯೋಧ್ಯೆ ಯಾತ್ರೆ

India secures a win against Bangladesh in the chennai test

INDvsBAN; ಅʼಸ್ಪಿನ್‌ʼಗೆ ಬಾಂಗ್ಲಾ ತತ್ತರ: ಚೆನ್ನೈ ಪಂದ್ಯದಲ್ಲಿ ಭಾರತಕ್ಕೆ ಭರ್ಜರಿ ಗೆಲುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.