Tirupati laddu ಅಪವಿತ್ರ: ಎಸ್ ಐಟಿ ತನಿಖೆಗೆ ಆಗ್ರಹಿಸಿ ಸುಪ್ರೀಂನಲ್ಲಿ ಪಿಐಎಲ್ ಸಲ್ಲಿಕೆ
Team Udayavani, Sep 22, 2024, 4:27 PM IST
ಹೊಸದಿಲ್ಲಿ: ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಿರುವ ಬಗ್ಗೆ ವಿಶೇಷ ತನಿಖಾ ತಂಡದಿಂದ (SIT) ತನಿಖೆ ನಡೆಸುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ದಾಖಲಾಗಿದೆ.
ಹಿಂದೂ ಸೇನೆಯ ಅಧ್ಯಕ್ಷ ಹಾಗೂ ರೈತ ನಾಯಕ ಸುರ್ಜಿತ್ ಸಿಂಗ್ ಯಾದವ್ ಅರ್ಜಿ ಸಲ್ಲಿಸಿದ್ದು, ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಭಕ್ತರಿಗೆ ತುಪ್ಪದ ಬದಲು ಪ್ರಾಣಿಗಳ ಕೊಬ್ಬನ್ನು ಬಳಸಿ ತಯಾರಿಸಿದ ಲಡ್ಡು ಪ್ರಸಾದ ನೀಡುವ ಮೂಲಕ ತಿರುಮಲ ತಿರುಪತಿ ದೇವಸ್ಥಾನಂ (TTD) ಹಿಂದೂ ಧರ್ಮವನ್ನು ಅಪಹಾಸ್ಯ ಮಾಡಿದೆ ಮತ್ತು ಹಿಂದೂಗಳ ಭಾವನೆಗಳನ್ನು ಕೆರಳಿಸಿದೆ ಎಂದು ಹೇಳಿದ್ದಾರೆ.
“ಲಡ್ಡು ಪ್ರಸಾದ” ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪವು ಹಿಂದೂ ಸಮುದಾಯದ ಆತ್ಮಸಾಕ್ಷಿಯನ್ನು ಅಲ್ಲಾಡಿಸಿದೆ ಮತ್ತು ಅದರ ಸದಸ್ಯರ ಧಾರ್ಮಿಕ ಭಾವನೆಗಳನ್ನು ಆಕ್ರೋಶಕ್ಕೆ ಗುರಿ ಮಾಡಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
“ಸಾಮಾನ್ಯವಾಗಿ ಸಾರ್ವಜನಿಕರ ಅನುಕೂಲಕ್ಕಾಗಿ ಅರ್ಜಿಯನ್ನು ಸಲ್ಲಿಸಲಾಗಿದೆ” ಎಂದು ಮನವಿಯಲ್ಲಿ ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.