PSI Parshuram ಕುಟುಂಬಕ್ಕೆ ಪರಿಹಾರ ಕೊಡಿ: ಛಲವಾದಿ ಆಗ್ರಹ
ಯಾದಗಿರಿ ಶಾಸಕ, ಪುತ್ರನ ಬಂಧನಕ್ಕೂ ಒತ್ತಾಯ; ಸಿಎಂಗೆ ಪತ್ರ ಬರೆದ ವಿರೋಧ ಪಕ್ಷದ ನಾಯಕ
Team Udayavani, Sep 22, 2024, 8:02 PM IST
ಬೆಂಗಳೂರು: ಯಾದಗಿರಿ ಪಿಎಸ್‌ಐ ಪರಶುರಾಮ್ ಸಾವಿಗೆ ನ್ಯಾಯ ಒದಗಿಸಬೇಕು. ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಮತ್ತು ಅವರ ಮಗ ಪಂಪನಗೌಡ ಅವರನ್ನು ಬಂಧಿಸಬೇಕು. ಸರ್ಕಾರ ಈ ಹಿಂದೆ ಕೊಟ್ಟಿದ್ದ ಆಶ್ವಾಸನೆಯಂತೆ 50 ಲಕ್ಷ ರೂ. ಪರಿಹಾರ ಒದಗಿಸುವ ಕುರಿತು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.
ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಮೃತ ಪಿಎಸ್‌ಐ ಪಿಎಸ್‌ಐ ಪರಶುರಾಮ್ ಅವರ ಸ್ವಗ್ರಾಮಕ್ಕೆ ಆ.8ರಂದು ಗೃಹ ಸಚಿವರು ಭೇಟಿ ನೀಡಿ ಸಾಂತ್ವನ ಹೇಳುವ ಸಂದರ್ಭದಲ್ಲಿ ಅವರ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ಹಾಗೂ ಅವರ ಪತ್ನಿ ಶ್ವೇತಾಗೆ ಸೂಕ್ತ ಸರ್ಕಾರಿ ಕೆಲಸ ನೀಡುವುದಾಗಿ ಆಶ್ವಾಸನೆ ನೀಡಿರುವುದು ಗಮನಿಸಿದ್ದೇನೆ. ಆದರೆ ಆಶ್ವಾಸನೆಯನ್ನು ನೀಡಿ 45 ದಿನಗಳು ಕಳೆದರೂ ಕೂಡ ಅವರಿಗೆ ಯಾವುದೇ ರೀತಿಯ ಪರಿಹಾರ ನೀಡಿದೇ ಇರುವುದು ಮತ್ತು ಪರಿಹಾರ ಪ್ರಕ್ರಿಯೆಯನ್ನು ಪ್ರಾರಂಭ ಮಾಡದೇ ಇರುವುದೇ ಖೇದಕರ ವಿಷಯ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.