Karnataka: ದೇಗಲುಗಳ ಪ್ರಸಾದದಲ್ಲಿ ಗುಣಮಟ್ಟ ಕಾಯ್ದುಕೊಳ್ಳಿ: ಸಚಿವರ ಸೂಚನೆ
ಪ್ರಸಾದ ತಯಾರಿಕೆಗೆ, ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಮಾತ್ರ ಬಳಸಬೇಕು: ರಾಮಲಿಂಗಾರೆಡ್ಡಿ ಖಡಕ್ ಎಚ್ಚರಿಕೆ
Team Udayavani, Sep 23, 2024, 7:10 AM IST
ಬೆಂಗಳೂರು: ತಿರುಪತಿ ಲಡ್ಡುವಿನಲ್ಲಿ ಪ್ರಾಣಿ ಕೊಬ್ಬಿನ ಅಂಶ ಪತ್ತೆಯಾಗಿರುವ ಆರೋಪದ ಹಿನ್ನೆಲೆಯಲ್ಲಿ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯಡಿ ಬರುವ ಎಲ್ಲ ಅಧಿಸೂಚಿತ ದೇವಾಲಯಗಳಲ್ಲಿ ಪ್ರಸಾದಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಸೂಚಿಸಲಾಗಿದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಕರ್ನಾಟಕ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯಡಿ ಬರುವ ಎಲ್ಲ ಅಧಿಸೂಚಿತ ದೇವಾಲಯಗಳಲ್ಲಿ ಸೇವೆಗಳಿಗೆ ದೀಪಗಳಿಗೆ ಮತ್ತು ಎಲ್ಲ ವಿಧದ ಪ್ರಸಾದ ತಯಾರಿಕೆಗೆ ಹಾಗೂ ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನು ಮಾತ್ರ ಬಳಸುವಂತೆ ಸೂಚಿಸಿದೆ. ಜತೆಗೆ ದೇವಾಲಯಗಳಲ್ಲಿ ತಯಾರಿಸಲಾಗುವ ಪ್ರಸಾದಗಳಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳುವಂತೆ ಸೂಚಿಸಲಾಗಿದೆ ಎಂದರು.
ರಾಜ್ಯದ ಮುಜರಾಯಿ ದೇವಾಲಯಗಳ ಪ್ರಸಾದಗಳಿಗೆ ನಂದಿನಿ ತುಪ್ಪ ಬಳಸಲಾಗುತ್ತಿದೆ. ಅದರ ಗುಣಮಟ್ಟ ಹಾಗೆ ಕಾಯ್ದುಕೊಳ್ಳುವಂತೆ ದೇವಸ್ಥಾನ ಕಾರ್ಯ ನಿರ್ವಾಹಕರಿಗೆ ಸೇರಿದಂತೆ ಹಿರಿಯ ಅಧಿಕಾರಿಗಳಿಗೆ ತಿಳಿಸಲಾಗಿದೆ.
ಧಾರ್ಮಿಕ ದತ್ತಿ ಇಲಾಖೆಯಡಿ ಬರುವ ಎಲ್ಲ ಅಧಿಸೂಚಿತ ದೇವಾಲಯಗಳಲ್ಲಿ ಸೇವೆಗಳಿಗೆ ದೀಪಗಳಿಗೆ ಮತ್ತು ಎಲ್ಲಾ ವಿಧದ ಪ್ರಸಾದ ತಯಾರಿಕೆಗೆ ಹಾಗೂ ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನು ಮಾತ್ರ ಬಳಸುವಂತೆ ಸೂಚಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ತಿರುಪತಿಗೆ ತೆರಳುವ ನಂದಿನಿ
ವಾಹನಗಳಿಗೆ ಜಿಪಿಎಸ್
ಈ ಮಧ್ಯ ಪ್ರತಿಕ್ರಿಯೆ ನೀಡಿರುವ ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಜಗದೀಶ್, ಟಿಟಿಡಿಗೆ ತೆರಳುವ ನಂದಿನಿ ತುಪ್ಪದ ವಾಹನಗಳಿಗೆ ಸುರಕ್ಷತಾ ಭದ್ರತೆ ಕಲ್ಪಿಸಲಾಗಿದೆ. ತಿರುಪತಿಗೆ ನಂದಿನಿ ತುಪ್ಪ ಸಾಗಿಸುವ ವಾಹನಗಳಿಗೆ ಜಿಪಿಎಸ್ ಟ್ರ್ಯಾಕ್ ಮತ್ತು ಎಲೆಕ್ಟ್ರಿಕ್ ಡೋರ್ ಅಳವಡಿಲಾಗಿದೆ. ಲ್ಯಾಬ್ ಟೆಸ್ಟ್ ಮಾಡಿದ ಬಳಿಕ ನಂದಿನ ತುಪ್ಪ ಪೂರೈಸಲಾಗುತ್ತೆ. ಈ ಹಿಂದೆ ಇದ್ದ ಸರ್ಕಾರದಲ್ಲಿ ಟಿಟಿಡಿಗೆ ತುಪ್ಪ ಪೂರೈಕೆ ಮಾಡಿರಲಿಲ್ಲ. ಇದೀಗ ಟಿಟಿಡಿ ಬೇಡಿಕೆ ಮೇರೆಗೆ ನಂದಿನಿ ತುಪ್ಪ ಪೂರೈಕೆ ಮಾಡುತ್ತಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.
ಬೇರೆ ರಾಜ್ಯಗಳಿಂದಲೂ ನಂದಿನ ತುಪ್ಪಕ್ಕೆ ಬೇಡಿಕೆ ಹೆಚ್ಚಿದೆ. ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ದೇವಾಲಯಗಳಿಂದಲೂ ನಂದಿ ತುಪ್ಪದ ಬಗ್ಗೆ ಬೇಡಿಕೆ ಬಂದಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ
Max movie review: ಮಾಸ್ ಮನಸುಗಳಿಗೆ ʼಮ್ಯಾಕ್ಸ್ʼ ಅಭಿಷೇಕ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.