Vishwa Hindu Parishad: ದೇಗುಲಗಳಲ್ಲಿ ಮಾರ್ಗದರ್ಶನ ಮಂಡಳಿ ರಚನೆಯಾಗಲಿ: ಭಂಡಾರಕೇರಿ ಶ್ರೀ
ರಾಜಕೀಯ ವ್ಯಕ್ತಿಗಳು ಹಿಂದೂ ಮಠ, ಮಂದಿರಗಳಲ್ಲಿ ಹಸ್ತಕ್ಷೇಪ ಮಾಡಬಾರದು, ವಿಹಿಂಪ ಷಷ್ಠಿಪೂರ್ತಿ ಸಮ್ಮೇಳನದಲ್ಲಿ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರು ಪ್ರತಿಪಾದನೆ
Team Udayavani, Sep 23, 2024, 12:35 AM IST
ಉಡುಪಿ: ಹಿಂದೂಗಳು ಸಿಂಧುವಾಗಬೇಕು; ಬಿಂದುವಾಗಬಾರದು. ಧರ್ಮ ಪರಿಪಾಲನೆ ವಿಷಯದಲ್ಲಿ ಎಲ್ಲರೂ ಒಂದಾಗಬೇಕು. ಅಪ ಪ್ರಚಾರ ಹಾಗೂ ರಾಜಕೀಯ ಹಸ್ತಕ್ಷೇಪದಿಂದಾಗಿ ಬಹಳಷ್ಟು ಅನ್ಯಾಯಗಳು ನಡೆಯುತ್ತಿವೆ. ತಿರುಪತಿ ತಿಮ್ಮಪ್ಪನ ಪ್ರಸಾದದಲ್ಲಿ ನಡೆದಿರುವ ಅನ್ಯಾಯ ಸರಿಯಲ್ಲ. ಮಠ-ಮಂದಿರದಲ್ಲಿ ಸರಕಾರದ ಹಸ್ತಕ್ಷೇಪ ಸಲ್ಲದು. ಇದಕ್ಕಾಗಿ ದೇಗುಲಗಳಲ್ಲಿ ಮಾರ್ಗದರ್ಶನ ಮಂಡಳಿ ರಚನೆಯಾಗಬೇಕು ಎಂದು ಭಂಡಾರಕೇರಿ ಮಠದ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರು ಹೇಳಿದರು.
ವಿಶ್ವ ಹಿಂದೂ ಪರಿಷತ್ ಉಡುಪಿ ವತಿಯಿಂದ ಬನ್ನಂಜೆಯ ನಾರಾಯಣ ಗುರು ಆಡಿಟೋರಿಯಂನಲ್ಲಿ ರವಿವಾರ ಜರಗಿದ ಷಷ್ಠಿಪೂರ್ತಿ ಸಮ್ಮೇಳನದಲ್ಲಿ ಅವರು ಆಶೀರ್ವಚನ ನೀಡಿದರು. ರಾಜಕೀಯ ವ್ಯಕ್ತಿಗಳು ಹಿಂದೂ ಮಠ- ಮಂದಿರಗಳಲ್ಲಿ ಹಸ್ತಕ್ಷೇಪ ಮಾಡಬಾರದು. ಆಚರಣೆಗಳಿಂದ ಹಿಂಸೆಯಾಗಬಾರದು. ಹಿಂದುತ್ವ ಉಳಿಸುವ ಕೆಲಸದ ಜತೆಗೆ ವಿಶ್ವ ಹಿಂದೂ ಸಿಂಧುವಾಗಬೇಕು ಎಂದರು.
ಧರ್ಮ ಉಳಿಸಲು ಒಂದಾಗಿ: ಕಾಣಿಯೂರು ಶ್ರೀ
ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು ಮಾತನಾಡಿ, ವಿವಿಧ ಕಾರಣಗಳಿಂದಾಗಿ ಹಿಂದೂ ಧರ್ಮದ ಮೇಲೆ ಆಕ್ರಮಣ, ದಬ್ಟಾಳಿಕೆ ನಡೆಯುತ್ತಿದೆ. ಈ ಆಕ್ರಮಣ ತಿರುಪತಿ ತಿಮ್ಮಪ್ಪನನ್ನೂ ಬಿಡಲಿಲ್ಲ. ಅಲ್ಲಿನ ಪ್ರಸಾದದಲ್ಲೂ ಕೊಬ್ಬು, ಎಣ್ಣೆಯನ್ನು ಹಾಕಿ ಅಪವಿತ್ರಗೊಳಿಸಲಾಗಿದೆ. ಈ ಮೂಲಕ ಹಿಂದೂ ಧರ್ಮವನ್ನು ನಾನಾ ರೀತಿಯಲ್ಲಿ ನಾಶ ಮಾಡುವ ಪ್ರವೃತ್ತಿ ನಡೆಯುತ್ತಿದೆ.
ಹಿಂದೂಗಳೇ ಬಹುಸಂಖ್ಯೆಯಲ್ಲಿರುವ ನಮ್ಮ ದೇಶದಲ್ಲಿ ಗಣೇಶೋತ್ಸವ ಮೆರವಣಿಗೆಯನ್ನೂ ಪೊಲೀಸ್ ಭದ್ರತೆಯಲ್ಲೇ ಮಾಡುವ ಶೋಚನೀಯ ಸ್ಥಿತಿ ಎದುರಾಗಿದೆ. ಹಿಂದೂ ಧರ್ಮದ ಉಳಿವಿಗೆ ಎಲ್ಲರೂ ಒಗ್ಗಟ್ಟಾಗಬೇಕು. ಜಾತಿ-ಜಾತಿಗಳೆಂಬ ಚಿಂತನೆ ಬಿಟ್ಟು ಹಿಂದೂಗಳೆಂಬ ಭಾವನೆ ಇರಬೇಕು ಎಂದರು.
ದೇಹಕ್ಕಿಂತ ದೇಶ ಮುಖ್ಯ: ಶೀರೂರು ಶ್ರೀ
ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಮಾತನಾಡಿ, ನಮ್ಮ ದೇಶ, ಧರ್ಮದ ಮೇಲೆ ಪ್ರೇಮ ಇರಬೇಕು. ಈ ಸಂಘಟನೆಗೆ 60 ವರ್ಷ ತುಂಬಿರುವುದು ಹೆಮ್ಮೆಯ ಸಂಗತಿ. 60ಕ್ಕೆ ನಿವೃತ್ತಿ ಎಂಬಂತಾಗದೆ ಉದಾಸೀನತೆ ಬಿಟ್ಟು ದೇಶದ ರಕ್ಷಣೆಗೆ ಮುಂದಾಗಬೇಕು. ದೇಹಕ್ಕೂ ಮುನ್ನ ದೇಶ ಮುಖ್ಯವಾದುದು. ಸೂರ್ಯ-ಚಂದ್ರರು ಇದ್ದಷ್ಟು ಕಾಲ ಈ ಸಂಘಟನೆ ಉಳಿಯಬೇಕು ಎಂದರು.
ಕರ್ನಾಟಕ ವಿಹಿಂಪ ಮಂದಿರ ಅರ್ಚಕ ಪುರೋಹಿತ್ ಪ್ರಮುಖರಾದ ಬಸವರಾಜ್, ಉದ್ಯಮಿ ಸಾಧು ಸಾಲ್ಯಾನ್, ಕೊಳಲು ವಾದಕ ಪಾಂಡು ಪಾಣಾರ, ವಿಭಾಗ ಕಾರ್ಯದರ್ಶಿ ದೇವಿಪ್ರಸಾದ್ ಶೆಟ್ಟಿ, ನಗರ ಅಧ್ಯಕ್ಷ ರಾಕೇಶ್ ಮಲ್ಪೆ, ನಗರ ಕಾರ್ಯದರ್ಶಿ ಲೋಕೇಶ್ ಶೆಟ್ಟಿಗಾರ್ ಉಪಸ್ಥಿತರಿದ್ದರು.
ವಿಹಿಂಪ ಜಿಲ್ಲಾಧ್ಯಕ್ಷ ವಿಷ್ಣುಮೂರ್ತಿ ಆಚಾರ್ಯ ಸ್ವಾಗತಿಸಿದರು. ಪೂರ್ಣಿಮಾ ಸುರೇಶ್ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.